ಗುರುಕುಲ ಮಾದರಿ ಸಂಸ್ಕಾರಯುತ ಶಿಕ್ಷಣ

seva sangama
ಸೇವಾ ಸಂಗಮ ವಿದ್ಯಾಕೇಂದ್ರ, ವಿದ್ಯಾ ಗಿರಿ ತೆಕ್ಕಟ್ಟೆನವೀಕೃತ ಕಂಪ್ಯೂಟರ್ ಲ್ಯಾಬ್, ವಿಜ್ಞಾನ ಪ್ರಯೋಗಾಲಯ ಮತ್ತು ಶೌಚಗೃಹವನ್ನು ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಿದರು.
Published on

ಕೋಟ: ಶಾಲೆಯಲ್ಲಿ ಗುರುಕುಲ ಮಾದರಿ ಶಿಕ್ಷಣ ಪದ್ಧತಿ ಹಾಗೂ ಸಂಸ್ಕಾರಯುತ ಶಿಕ್ಷಣ ನೀಡುತ್ತಿದೆ. ಇಂತಹ ಶಿಕ್ಷಣ ಪಡೆದ ವಿದ್ಯಾರ್ಥಿಗಳು ದೇಶದ ಮುಂದಿನ ಉತ್ತಮ ನಾಗರಿಕರಾಗಲು ಸಾಧ್ಯ ಹಾಗೂ ಈ ಶಾಲೆಗೆ ಬೇಕಾದ ಮೂಲಸೌಕರ್ಯ ಒದಗಿಸುವಲ್ಲಿ ಕೈಜೋಡಿಸುತ್ತೇನೆ ಎಂದು ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಸೇವಾ ಸಂಗಮ ವಿದ್ಯಾಕೇಂದ್ರ, ವಿದ್ಯಾ ಗಿರಿ ತೆಕ್ಕಟ್ಟೆ ನವೀಕೃತ ಕಂಪ್ಯೂಟರ್ ಲ್ಯಾಬ್, ವಿಜ್ಞಾನ ಪ್ರಯೋಗಾಲಯ ಮತ್ತು ಶೌಚಗೃಹ ಶನಿವಾರ ಉದ್ಘಾಟಿಸಿ ಮಾತನಾಡಿದರು.

ತೆಕ್ಕಟ್ಟೆ ಗ್ರಾಪಂ ಅಧ್ಯಕ್ಷೆ ಶೋಭನಾ ಶೆಟ್ಟಿ, ಪಟ್ಟಾಭಿರಾಮಚಂದ್ರ ದೇಗುಲ ಕೋಟೇಶ್ವರ ಧರ್ಮದರ್ಶಿ ದಿನೇಶ್ ಕಾಮತ್ ಲ್ಯಾಬ್ ಉದ್ಘಾಟಿಸಿದರು.

ರಾಷ್ಟ್ರೀಯ ಸ್ವಯಂಸೇವಕ ಸಮಿತಿ ಕುಟುಂಬ ಪ್ರಬೋಧಿನಿ ಮಂಗಳೂರು ವಿಭಾಗ ಪ್ರಮುಖ ಗುರುರಾಜ್‌ರಾವ್, ಶಾಲಾ ಅಧ್ಯಕ್ಷ ಸುರೇಶ್ ಬೆಟ್ಟಿನ್, ಕಾರ್ಯದರ್ಶಿ ಕಮಲಾಕ್ಷ ಪೈ, ಮುಖ್ಯ ಶಿಕ್ಷಕಿ ಸಂಧ್ಯಾ ಭಟ್ ಉಪಸಿತರಿದ್ದರು. ಆಡಳಿತ ಮಂಡಳಿ ಪದಾಧಿಕಾರಿಗಳು, ಪಾಲಕರು, ಶಿಕ್ಷಕರು, ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net