

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ-2024, ಎಕ್ಸೆಲ್ ವಿದ್ಯಾರ್ಥಿಗಳ ಪಾಲಕರಾದ 301 ಶಿಕ್ಷಕರಿಗೆ ಗೌರವಾರ್ಪಣೆ ಕಾರ್ಯಕ್ರಮ ಸೆ.15ರಂದು ಬೆಳಗ್ಗೆ 9.30ಕ್ಕೆ ಗುರುವಾಯನಕೆರೆ ವಿದ್ಯಾಸಾಗರ ಕ್ಯಾಂಪಸ್‌ನಲ್ಲಿ ನಡೆಯಲಿದೆ.
ಮೂಡುಬಿದಿರೆ ಶ್ರೀ ಜೈನ ಮಠದ ಸ್ವಸ್ತಿ ಶ್ರೀ ಡಾ.ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ದಿವ್ಯ ಸಾನ್ನಿಧ್ಯ ಮತ್ತು ಆಶೀರ್ವಚನ ನೀಡಲಿದ್ದಾರೆ. ದೆಹಲಿ ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ರಮೇಶ್ ಸಾಲಿಯಾನ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ವಿಧಾನಪರಿಷತ್ ಶಾಸಕ ಭೋಜೇಗೌಡ ಬಿ.ಎಲ್ ಭಾಗವಹಿಸಲಿದ್ದಾರೆ.
ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವ ಉಪಸ್ಥಿತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಆಡಳಿತಮಂಡಳಿ ಕಾರ್ಯದರ್ಶಿ ಅಭಿರಾಮ್ ಬಿ.ಎಸ್, ಪ್ರಾಂಶುಪಾಲ ಡಾ.ನವೀನ್ ಕುಮಾರ್ ಮರಿಕೆ, ಎಕ್ಸೆಲ್ ಪದವಿಪೂರ್ವ ಕಾಲೇಜು ಅರಮಲೆಬೆಟ್ಟ ಕ್ಯಾಂಪಸ್‌ನ ಪ್ರಭಾರ ಪ್ರಾಚಾರ್ಯ ಡಾ.ಪ್ರಜ್ವಲ್ ಮೊದಲಾದವರು ಭಾಗವಹಿಸಲಿದ್ದಾರೆ.
ಅಪರಾಹ್ನ 2.30ರಿಂದ ವಿಠಲ ನಾಯಕ್ ಕಲ್ಲಡ್ಕ ಬಳಗದಿಂದ ಗೀತಾ ಸಾಹಿತ್ಯ ಸಂಭ್ರಮ ವಿನೂತನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.