

ಮೂಡುಬಿದಿರೆ: ಶಿಕ್ಷಕರ ದಿನ ಪ್ರಯುಕ್ತ ಪುರಸಭೆ ವ್ಯಾಪ್ತಿಯ ಗಾಂಧಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ ಸೋಮವಾರ ನಡೆಯಿತು.
ಎಸ್ಡಿಎಂಸಿ ಅಧ್ಯಕ್ಷೆ ಸುನೀತಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಶಿಕ್ಷಕಿ ಕಸ್ತೂರಿ ಎಚ್., ಶಿಕ್ಷಕಿಯರಾದ ಭವ್ಯಾ, ಸುಪ್ರಿತಾ, ಅಕ್ಷತಾ ಅವರನ್ನು ಸನ್ಮಾನಿಸಲಾಯಿತು.
ಉಪಾಧ್ಯಕ್ಷ ಯಶೋಧರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಸ್ಯರಾದ ಮಲ್ಲಿಕಾ, ಗುಣವತಿ ಶಿಕ್ಷಕರ ಕುರಿತು ಮಾತನಾಡಿದರು. ವಿದ್ಯಾರ್ಥಿನಿಯರು ತಾವೇ ರಚಿಸಿ, ರಾಗ ಸಂಯೋಜಿಸಿದ ಶಿಕ್ಷಕರ ಕುರಿತಾದ ಹಾಡನ್ನು ಹಾಡಿದರು. ಎಸ್ಡಿಎಂಸಿ ಸದಸ್ಯೆ ಅಕ್ಷತಾ ಸ್ವಾಗತಿಸಿದರು. ಪೂಜಾ ಕಾರ್ಯಕ್ರಮ ನಿರೂಪಿಸಿದರು.