ಪೆರ್ಲ: ಪೆರ್ಲದ ನಾಲಂದ ಕಾಲೇಜಿನಲ್ಲಿ ಶಿಕ್ಷಕರ ದಿನದ ಅಂಗವಾಗಿ ನಾಲಂದ ಚಾರಿಟೆಬಲ್ ಟ್ರಸ್ಟ್ ಹಾಗೂ ಕಾಲೇಜು ಎನ್ನೆಸ್ಸೆಸ್ ಘಟಕದ ಜಂಟಿ ಆಶ್ರಯದಲ್ಲಿ ಗುರುವಂದನೆ ಕಾರ್ಯಕ್ರಮ ನಡೆಯಿತು.
ಪ್ರಾಂಶುಪಾಲ ಶಂಕರ ಖಂಡಿಗೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಮೊಂಬತ್ತಿ ತಾನು ಕರಗಿ ಇತರರಿಗೆ ಬೆಳಕು ಚೆಲ್ಲುವಂತೆ ಓರ್ವ ಶಿಕ್ಷಕ ವಿದ್ಯಾರ್ಥಿಯ ಉನ್ನತಿಯಲ್ಲಿ ಮಹತ್ತರ ಪಾತ್ರ ವಹಿಸುತ್ತಾನೆ ಎಂದರು.
ಕಾಲೇಜು ಆಡಳಿತ ಮಂಡಳಿ ಸದಸ್ಯ ರಾಜಶೇಖರ್ ಪೆರ್ಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಪೆರ್ಲ ಶ್ರೀ ಸತ್ಯನಾರಾಯಣ ಶಾಲೆಯ ನಿವೃತ್ತ ಶಿಕ್ಷಕ ಬಳ್ಳಂಬೆಟ್ಟು ಈಶ್ವರ ಭಟ್ ಅವರಿಗೆ ಗುರುನಮನ ಸಲ್ಲಿಸಲಾಯಿತು. ಎನ್ನೆಸ್ಸೆಸ್ ಯೋಜನಾಧಿಕಾರಿ ವರ್ಷಿತ್ ಕೆ.ಸ್ವಾಗತಿಸಿ,. ಸ್ವಯಂಸೇವಕಿ ಝಿನಾನ ವಂದಿಸಿದರು. ಶ್ರೀ ಲಕ್ಷ್ಮೀ ನಿರೂಪಿಸಿದರು. ಶಿಕ್ಷಕ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.