More

    ಪ್ರತಿಫಲಾಪೇಕ್ಷೆಯಿಲ್ಲದ ಸೇವೆಯಿಂದ ಜನಮನ್ನಣೆ ಸಾಧ್ಯ: ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಕಿವಿಮಾತು

    ನಾಗಮಂಗಲ: ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಸೇವೆ ಮಾಡಿದಾಗ ಮಾತ್ರ ಜನಮನ್ನಣೆ ಗಳಿಸಲು ಸಾಧ್ಯ ಎಂದು ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಶ್ರೀಪ್ರಸನ್ನನಾಥ ಸ್ವಾಮೀಜಿ ತಿಳಿಸಿದರು.
    ಪಟ್ಟಣದ ಆದಿಚುಂಚನಗಿರಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಆಯೋಜಿಸಿದ್ದ ಗುರುವಂದನೆ ಹಾಗೂ ನಿವೃತ್ತ ಪ್ರಾಂಶುಪಾಲ ಡಾ.ಲೋಕೇಶ್ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ವಿದ್ಯಾರ್ಥಿ ದಿಸೆಯಲ್ಲಿನ ಅನುಭವಗಳು ಜೀವನದಲ್ಲಿ ಮತ್ತೆ ಎಂದಿಗೂ ಬರಲು ಸಾಧ್ಯವಿಲ್ಲ. ನಿಸ್ವಾರ್ಥ ಮನೋಭಾವದಿಂದ ಪ್ರಾಮಾಣಿಕವಾಗಿ ಯಾರೂ ಕರ್ತವ್ಯ ನಿರ್ವಹಿಸುತ್ತಾರೆ ಅವರನ್ನು ಜನರು ಪ್ರೀತಿಸುತ್ತಾರೆ. ಯಾವ ವ್ಯಕ್ತಿಯಲ್ಲಿ ಶ್ರದ್ಧೆ ಇರುತ್ತದೆ ಆ ವ್ಯಕ್ತಿ ಮಾತ್ರ ಸಾಧನೆ ಮಾಡಲು ಸಾಧ್ಯ. ಒಂದು ಅಕ್ಷರವನ್ನು ಕಲಿಸಿದಂತಹ ಗುರುಗಳನ್ನು ಎಂದಿಗೂ ಮರೆಯದಿರಿ. ಗುರುಗಳನ್ನು ಮರೆತವನು ಎಂದಿಗೂ ಅಭಿವೃದ್ಧಿ ಕಾಣಲು ಸಾಧ್ಯವಿಲ್ಲ. ಗುರು ಶಿಷ್ಯರ ಭಾಂದವ್ಯ ಬಹಳ ಶ್ರೇಷ್ಠವಾದುದ್ದು ಎಂದರು.
    ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮನಂದನಾಥ ಸ್ವಾಮೀಜಿ ಮಾತನಾಡಿ, ಇದೇ ಕಾಲೇಜಿನ ವಿದ್ಯಾರ್ಥಿಯಾಗಿ, ಅದೇ ಕಾಲೇಜಿನಲ್ಲಿ ಉಪನ್ಯಾಸಕರಾಗಿ ನಂತರ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದುತ್ತಿರುವ ಲೋಕೇಶ್ ಶ್ರೀಮಠದ ಪರಮಭಕ್ತರು ಎಂದರು.
    ವಿಧಾನಪರಿಷತ್ ಮಾಜಿ ಸದಸ್ಯ ಎನ್.ಅಪ್ಪಾಜಿಗೌಡ ಮಾತನಾಡಿ, ಯಾವ ಪ್ರಾಧ್ಯಾಪಕರು ವೈಯಕ್ತಿಕ ಜೀವನದಲ್ಲಿ ಶಿಸ್ತು ಅಳವಡಿಸಿಕೊಂಡಿರುತ್ತಾರೋ ಅವರು ತಮ್ಮ ವೃತ್ತಿ ಜೀವನದಲ್ಲಿಯೂ ಶಿಸ್ತನ್ನು ಅಳವಡಿಸುತ್ತಾರೆ. ಆದಿಚುಂಚನಗಿರಿ ಮಠದ ವಿದ್ಯಾಸಂಸ್ಥೆಗಳು ಕೇವಲ ಪಠ್ಯಗಳನ್ನು ಕಲಿಸದೆ ಶಿಸ್ತು, ಸಂಸ್ಕೃತಿಯನ್ನು ಕಲಿಸುತ್ತಿದೆ ಎಂದರು.
    ಸಂಘದ ಅಧ್ಯಕ್ಷ ಕೆಂಪೇಗೌಡ, ಕಾಲೇಜು ಆಡಳಿತ ಮಂಡಳಿಯ ಸದಸ್ಯ ಎಚ್.ಟಿ.ಕೃಷ್ಣೇಗೌಡ, ಗಾಂಧಿ ಪ್ರತಿಷ್ಠಾನದ ಅಧ್ಯಕ್ಷ ಜಿ.ಬಿ.ಬಸವರಾಜು, ಸಮಾಜ ಸೇವಕ ಶ್ರೀನಿವಾಸ್ ಹಾಗೂ ನೂರಾರು ಸಂಖ್ಯೆಯ ಹಿರಿಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts