18 C
Bangalore
Friday, December 6, 2019

ಏಕಕಾಲಕ್ಕೆ 380 ಕಡೆ ಗುರುವಂದನ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ವಿಜಯವಾಣಿ ಸುದ್ದಿಜಾಲ ಕಲಬುರಗಿ
ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ಗೋವಾ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳು ಸೇರಿ ವಿವಿಧ ಕಡೆಗಳಲ್ಲಿರುವ ಮುಗುಳಖೋಡ- ಜಿಡಗಾ ಮಠದ 380 ಶಾಖಾ ಮಠಗಳಲ್ಲಿ ಏಕಕಾಲಕ್ಕೆ ಪೂಜ್ಯಶ್ರೀ ಷಡಕ್ಷರಿ ಶಿವಯೋಗಿ ಡಾ.ಮುರುಘರಾಜೇಂದ್ರ ಮಹಾಸ್ವಾಮಿಗಳ ಗುರುವಂದನ ಮಹೋತ್ಸವ ಜರುಗಲಿದೆ.
28ರಿಂದ ಆರಂಭಗೊಳ್ಳುವ ಗುರುವಂದನ ಮಹೋತ್ಸವ ಡಿಸೆಂಬರ್ 2ರಂದು ಕಲಬುರಗಿ ಕೋಟನೂರಿನ ಶ್ರೀ ಯಲ್ಲಾಲಿಂಗೇಶ್ವರ ಪುಣ್ಯಾಶ್ರಮದಲ್ಲಿ ಶ್ರೀಮಠದ ಸದ್ಭಕ್ತರು ಆಯೋಜಿಸಿದ್ದಾರೆ ಎಂದು ಗುರುವಂದನ ಮಹೋತ್ಸವದ ಸ್ವಾಗತ ಸಮಿತಿ ಗೌರವಾಧ್ಯಕ್ಷ ಅಲ್ಲಮ ಪ್ರಭು ಪಾಟೀಲ, ಅಧ್ಯಕ್ಷ ಮತ್ತು ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಹೇಳಿದರು.
ಪೂಜ್ಯಶ್ರೀ ಷಡಕ್ಷರಿ ಶಿವಯೋಗಿ ಡಾ.ಮುರುಘರಾಜೇಂದ್ರ ಮಹಾಸ್ವಾಮಿಗಳ 34ನೇ ಜನ್ಮದಿನ ಪ್ರಯುಕ್ತ ಆಯೋಜಿಸಿರುವ ಗುರು ವಂದನ ಮಹೋತ್ಸವವನ್ನು ಸಕಲ ಸದ್ಭಕ್ತರ ಹಿರಿಯಾಸೆಯಂತೆ ಆಚರಿಸಬೇಕು ಎಂಬ ಉದ್ದೇಶದಿಂದ ಸಮಾಜಕ್ಕೆ ಪ್ರಯೋಜನಕಾರಿಯಾಗಬಲ್ಲ ಅನೇಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಅವರು ಹೇಳಿದರು.
ಮಠದ ಭಕ್ತರು ಗುರುವಂದನವನ್ನು ವಿಜೃಂಭಣೆಯಿಂದ ಆಚರಿಸಲು ಅಪೇಕ್ಷಿಸಿದಾಗ ಡಾ.ಮುರುಘರಾಜೇಂದ್ರ ಮಹಾಸ್ವಾಮಿಗಳು ಅದಕ್ಕೆ ಸಮ್ಮತಿ ನೀಡದೆ, ಈ ಭಾಗದಲ್ಲಿ ಬರಗಾಲ ಇರುವುದರಿಂದ ಸರಳವಾಗಿ ಆಚರಿಸುವಂತೆ ಮತ್ತು ಶ್ರೀಮಠದ ಭಕ್ತರ ಜತೆಗೆ ಜಾತ್ಯಾತೀತವಾಗಿ ಎಲ್ಲರಿಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಆಚರಿಸಬೇಕು ಎಂದು ಅಪ್ಪಣೆ ಕೊಟ್ಟಿದ್ದಾರೆ ಎಂದು ಹೇಳಿದರು.
ವೈವಿಧ್ಯಮಯ ಕಾರ್ಯಕ್ರಮ: 28ರಂದು ಅಂಧಮಕ್ಕಳಿಗೆ ವಸ್ತ್ರ-ಪ್ರಸಾದ ವಿತರಣೆ, 29ರಂದು ಸಸಿ ನೆಡುವುದು, 30ರಂದು ಆರೋಗ್ಯ ತಪಾಸಣೆ ಉಚಿತ ಶಿಬಿರ ಮತ್ತು ರಕ್ತದಾನ ಶಿಬಿರ ಹಾಗೂ ಡಿ.1ರಂದು ರಾಷ್ಟ್ರೀಯ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. 2ರಂದು ಸಂಜೆ 6ಕ್ಕೆ ಕೋಟನೂರ ಮಠದಲ್ಲಿ ಗುರುವಂದನ ಮಹೋತ್ಸವ ಜರುಗಲಿದ್ದು ಪೂಜ್ಯರು, ಸಚಿವರು, ಶಾಸಕರು, ರಾಜಕೀಯ ಧುರೀಣರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಬಡವರಿಗೆ, ರೈತರಿಗೆ ಅನುಕೂಲ ಕಲ್ಪಿಸುವ ದಿಸೆಯಲ್ಲಿ ಸ್ಥಾಪಿಸಲಾದ ಸಿದ್ಧಶ್ರೀ ಸಹಕಾರಿ ಸೌಹಾರ್ಧ ನಿಯ ಮಿತವನ್ನು ಪೂಜ್ಯಶ್ರೀ ಅಪ್ಪಾಜಿ ಉದ್ಘಾಟಿಸುವರು. 2019ರ ದಿನದರ್ಶಿಕೆ, ಶ್ರೀಮಠದ ಭಕ್ತಿಗೀತೆಗಳ ಧ್ವನಿಸುರುಳಿ, ಶಿವಶಂಕರ ಬಿರಾದಾರ ರಚಿತ ಪುಸ್ತಕ, ಡಿವೈನ್ ಚಾರಿಟೇಬಲ್ ಟ್ರಸ್ಟ್ನ ಜಾಲತಾಣ, ಮಾಸಿಕ ಪತ್ರಿಕೆಗಳ ವಿಶೇಷ ಸಂಚಿಕೆ ಬಿಡುಗಡೆಗೊಳ್ಳಲಿದೆ ಎಂದು ಹೇಳಿದರು.
ಸಂಸದ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಬಂಡೆಪ್ಪ ಕಾಶೆಂಪೂರ, ರಾಜಶೇಖರ ಪಾಟೀಲ, ಪ್ರಿಯಾಂಕ್ ಖರ್ಗೆ, ಶಾಸಕರಾದ ಅಪ್ಪುಗೌಡ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ಈಶ್ವರ ಖಂಡ್ರೆ, ರಾಜ್ಯದ ವಿವಿಧ ಕ್ಷೇತ್ರಗಳ ಶಾಸಕರು, ಮಾಜಿ ಶಾಸಕರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿಯ ತಿಪ್ಪಣ್ಣಪ್ಪ ಕಮಕನೂರ, ಸುಭಾಷ ರಾಠೋಡ, ಪವನಕುಮಾರ ವಳಕೇರಿ, ಗಿರೀಶ ಪಾಟೀಲ, ರಾಜಕುಮಾರ ಉದನೂರ ಇತರರಿದ್ದರು.
ವೈವಿಧ್ಯಮಯ ಪ್ರಶಸ್ತಿಗಳು
ರಾಷ್ಟ್ರ ಸಂರಕ್ಷಕ ಪ್ರಶಸ್ತಿ: ಗಣನೀಯ ಸೇವೆ ಸಲ್ಲಿಸಿದ ಐವರು ವ್ಯಕ್ತಿಗಳಿಗೆ ವಿವಿಧ ಹೆಸರಿನ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ದೇಶ ಕಾಯುವ ಕಾಯದಲ್ಲಿರುವ ಬ್ರಿಗೇಡಿಯರ್ ಸತ್ಯಾನಂದ ಕಡಲೂರ ಚಿಂಚೋಳಿ, ಲೆಫ್ಟಿನೆಂಟ್ ಕರ್ನಲ್ ಪರಶುರಾಮ ನಾಯಿಕ ಹೊಸಟ್ಟಿ ತಾ: ಗೋಕಾಕ, ನಿವೃತ್ತ ಯೋಧ ನಾಯಕ ಸುಬೇದಾರ ಮಾರುತಿ ಬಾಗಿಮನಿ ಕುಲಗೋಡ ತಾ.ಗೋಕಾಕ, ನಿವೃತ್ತ ಯೋಧ ಗೋಕಾಕ ತಾಲೂಕಿನ ಕುಲಗೋಡ ಹಾಗೂ ನಿವೃತ್ತ ಹವಾಲ್ದಾರ್ ವೆಂಕಪ್ಪ ಕೊಪ್ಪದ ಕುಲಗೋಡ ಅವರಿಗೆ ರಾಷ್ಟ್ರ ಸಂರಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಮಹಾತ್ಯಾಗಿ-ನೇಗಿಲಯೋಗಿ ಪ್ರಶಸ್ತಿ: ಕೃಷಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮೆರೆದ ರೈತರಾದ ಶ್ರೀ ಸಿದ್ಧರಾಮ ಶಿವಾಚಾರ್ಯರು ಚಿನ್ಮಯಗಿರಿ, ಡಾ.ಮಹಮ್ಮದ್ ಇದ್ರಿಸ್, ಬಗದಾಳ, ಕವಿತಾಮಿಶ್ರಾ ಕವಿತಾಳ, ಡಾ.ಮಲ್ಲಣ್ಣ ನಾಗರಾಳ ಹುನಗುಂದ, ಅಶೋಕ ಮಲಗೌಡ ಪಾಟೀಲ ಬೆಣಿವಾಡಿ ತಾ.ಹುಕ್ಕೇರಿ ಅವರಿಗೆ ಮಹಾತ್ಯಾಗಿ-ನೇಗಿಲಯೋಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ರಾಷ್ಟ್ರ ಶಿಲ್ಪಿ ಪ್ರಶಸ್ತಿ: ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮೆರೆದ ಶಿಕ್ಷಕರಾದ ಅಶೋಕ ತೊಟ್ನಳ್ಳಿ ಜಾಕನಪಲ್ಲಿ, ಸುಧಾಕರ ಗುಡಿ ಶಹಾಪೂರ, ಪ್ರಶಾಂತ ಕಂಬಾರ ಕಲಬುರಗಿ, ಬಸವರಾಜ ಐನೋಳಿ ಚಂದಾಪುರ, ಜಯಶ್ರೀ ರಡ್ಡಿ ಸುಂಟನೂರ ತಾ.ಆಳಂದ.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...