More

    ಖಲಿಸ್ತಾನಿ ಭಯೋತ್ಪಾದಕನ ಹತ್ಯೆ; ಕೆನಡಾದ ರಾಜತಾಂತ್ರಿಕ ಅಧಿಕಾರಿ ಉಚ್ಚಾಟಿಸಿದ ಭಾರತ

    ನವದೆಹಲಿ: ಗುರುದ್ವಾರದ ಪಾರ್ಕಿಂಗ್ ಸ್ಥಳದಲ್ಲಿ ಖಾಲಿಸ್ತಾನ್ ಟೈಗರ್ ಫೋರ್ಸ್ (KTf) ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಹಿಂದೆ ಭಾರತ ಸರ್ಕಾರದ ಕೈವಾಡವಿದೆ ಎಂದು ಆರೋಪ ಮಾಡಿದ ಕೆನಡಾಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ.

    ಪ್ರಧಾನಿ ಜಸ್ಟಿನ್​ ಟ್ರುಡೊ ಭಾಷಣದ ಬಳಿಕ ಕೆನಡಾದಲ್ಲಿರುವ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಚಾಟನೆ ಮಾಡಲಾಗಿತ್ತು. ಕೆನಡಾದ ನಡೆಯನ್ನು ಖಂಡಿಸಿರುವ ಭಾರತವು ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಚಾಟಿಸಿ ಮುಂದಿನ ಐದು ದಿನದೊಳಗೆ ದೇಶವನ್ನು ತೊರೆಯುವಂತೆ ಸೂಚಿಸಿದೆ.

    ಇದನ್ನೂ ಓದಿ: VIDEO| ಕಾಂಗ್ರೆಸ್​ ನಾಯಕನನ್ನು ಗುಂಡಿಕ್ಕಿ ಹತ್ಯೆ; ಹೊಣೆ ಹೊತ್ತ ಖಲಿಸ್ತಾನಿ ಭಯೋತ್ಪಾದಕ

    ಈ ಕುರಿತು ಪ್ರಕಟಣೆ ಹೊರಡಿಸಿರುವ ವಿದೇಶಾಂಗ ಇಲಾಖೆ ಭಾರತದಲ್ಲಿರುವ ಕೆನಡಾದ ಹೈಕಮಿಷನರ್​ ಅವರನ್ನು ಇಂದು ಕರೆಸಿ ಅವರನ್ನು ಉಚ್ಚಾಟಿಸುತ್ತಿರುವ ಸರ್ಕಾರದ ನಿರ್ಧಾರದ ಬಗ್ಗೆ ತಿಳಿಸಲಾಯಿತು. ಮುಂದಿನ ಐದು ದಿನಗಳ ಒಳಗಾಗಿ ಅವರನ್ನು ದೇಶ ತೊರೆಯುವಂತೆ ಸೂಚಿಸಲಾಗಿದೆ.

    ಭಾರತದ ಆಂತರಿಕ ವಿಚಾರದಲ್ಲಿ ಕೆನಡಾದ ಹಸ್ತಕ್ಷೇಪ ಮತ್ತು ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವವರ ವಿರುದ್ಧದ ಕ್ರಮ ಎಂದು ವಿದೇಶಾಂಗ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts