ಜನಸ್ನೇಹಿ ನಿಂಗನಗೌಡರಗೆ ಅತ್ಯುತ್ತಮ ಕಂದಾಯ‌ ಅಧಿಕಾರಿ ಪ್ರಶಸ್ತಿ

IMG-20240928-WA0003.jpg
Published on

ಬೆಳಗಾವಿ: ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳಿಗೆ ನೀಡಲಾಗುವ "ಅತ್ಯುತ್ತಮ ಕಂದಾಯ ಅಧಿಕಾರಿ-2024" ಪ್ರಶಸ್ತಿಯು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ವಿಪತ್ತು ನಿರ್ವಹಣಾ ಸಮಾಲೋಚಕರಾಗಿರುವ ನಿಂಗನಗೌಡ ಚನಬಸನಗೌಡರ ಅವರಿಗೆ ಲಭಿಸಿದೆ.

ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ಜರುಗಿದ ಸಮಾರಂಭದಲ್ಲಿ ಕಂದಾಯ ಇಲಾಖೆಯ ಸಚಿವರಾದ ಕೃಷ್ಣಭೈರೇಗೌಡ ಅವರು ನಿಂಗನಗೌಡ ಅವರಿಗೆ "ಅತ್ಯುತ್ತಮ ಕಂದಾಯ ಅಧಿಕಾರಿ-2024" ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಸೇರಿ ಹಿರಿಯ ಅಧಿಕಾರಿಗಳು ಇದ್ದರು.

**

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net