ದೇಶದ ಅಭಿವೃದ್ಧಿಯಲ್ಲಿ ನಾರಿಶಕ್ತಿ ಪಾತ್ರ

byn
Published on

ವಿಜಯವಾಣಿ ಸುದ್ದಿಜಾಲ ಬೈಂದೂರು

ದೇಶ ಅಭಿವೃದ್ಧಿಯಾಗಬೇಕಾದರೆ ಭಾರತೀಯ ನಾರಿಶಕ್ತಿ ಎಚ್ಚೆತ್ತುಕೊಂಡು ಪುರುಷರಿಗೆ ಸರಿಸಮಾನರಾಗಿ ನಿಲ್ಲಬೇಕು ಎಂದು ಬೆಳಗಾವಿ ಜಿಲ್ಲೆ ಕಿತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮೀನಾಕ್ಷಿ ಅಶೋಕ್ ಹೇಳಿದರು.

ನಾಗೂರು ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಶುಕ್ರವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕುಮಟ್ಟದ ಜ್ಞಾನವಿಕಾಸ ಮಹಿಳಾ ವಿಚಾರಗೋಷ್ಠಿಯಲ್ಲಿ ಉಪನ್ಯಾಸ ನೀಡಿದರು.

ಧ.ಗ್ರಾ.ಯೋ ಬೈಂದೂರು ಕೇಂದ್ರ ಸಮಿತಿ ಅಧ್ಯಕ್ಷ ವಾಸು ಮೇಸ್ತ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಗುರುರಾಜ್ ಗಂಟಿಹೊಳೆ ಗೋಷ್ಠಿ ಉದ್ಘಾಟಿಸಿ ಶುಭಹಾರೈಸಿದರು. ಸಂಪನ್ಮೂಲ ವ್ಯಕ್ತಿ ಮೀನಾಕ್ಷಿ ಅವರನ್ನು ಗೌರವಿಸಲಾಯಿತು. ತಾಲೂಕು ಯೋಜನಾಧಿಕಾರಿ ವಿನಾಯಕ ಪೈ, ಧ.ಗ್ರಾ.ಯೋ ಉತ್ತರಕನ್ನಡ ಜಿಲ್ಲಾ ನಿರ್ದೇಶಕ ಮಹೇಶ ಎಂ.ಡಿ., ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ, ತಾಲೂಕು ಭಜನಾ ಪರಿಷತ್ ಗೌರವಾಧ್ಯಕ್ಷ ರಘುರಾಮ ಕೆ.ಪೂಜಾರಿ, ಅಧ್ಯಕ್ಷ ಕೃಷ್ಣ ಪೂಜಾರಿ, ತಾಪಂ ಮಾಜಿ ಅಧ್ಯಕ್ಷೆ ಶ್ಯಾಮಲಾ ಕುಂದರ್, ವಯಲಾಧ್ಯಕ್ಷರಾದ ಚಂದ್ರಶೇಖರ ದೇವಾಡಿಗ, ಪ್ರಮೀಳಾ ಗಾಣಿಗ, ಸುರೇಂದ್ರ ನಾಯ್ಕ ಇದ್ದರು. ವಲಯ ಮೇಲ್ವಿಚಾರಕ ಭರತ್ ಪಟಗಾರ್ ನೀರೂಪಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಸುರೇಖಾ ಪೂಜಾರಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net