ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂ ಕೋರ್ಟ್​ನಿಂದ ಗ್ರೀನ್​ ಸಿಗ್ನಲ್​​: ಅಂಜುಮನ್ ಸಮಿತಿ ಅರ್ಜಿ ವಜಾ

Gyanvapi Case Supreme Court
Published on

ದೆಹಲಿ: ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಅನುಮತಿ ನೀಡಿರುವ ಅಲಹಾಬಾದ್​ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ಮುಖಂಡರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಆದರೆ ಈ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್​ ನಿರಾಕರಿಸಿದೆ.

ಸಮೀಕ್ಷೆಯನ್ನು ನಿಲ್ಲಿಸಲು ನಿರಾಕರಿಸಿರುವ ಸುಪ್ರೀಂಕೋರ್ಟ್, ಮಸೀದಿ ಸಂಕೀರ್ಣದಲ್ಲಿ ಯಾವುದೇ ಉತ್ಖನನ ಮಾಡಬಾರದು ಮತ್ತು ಕಟ್ಟಡಕ್ಕೆ ಯಾವುದೇ ಹಾನಿ ಮಾಡಬಾರದು ಎಂದು ಸೂಚಿಸಿದ್ದು, ಈ ನಡುವೆ ಉತ್ತರಪ್ರದೇಶದ ವಾರಣಾಸಿಯ ಜ್ಞಾನವಾಪಿ ಸಂಕೀರ್ಣದಲ್ಲಿ ಭಾರತೀಯ ಪುರಾತತ್ವ ಇಲಾಖೆಯು ಇಂದು ಮುಂಜಾನೆಯೇ ವೈಜ್ಞಾನಿಕ ಸಮೀಕ್ಷೆ ಆರಂಭಿಸಿದೆ.

ಇದನ್ನೂ ಓದಿ: ಫ್ರಿಡ್ಜ್‌ಗಾಗಿ ನಡೆದಿತ್ತು 7 ತಿಂಗಳ ಗರ್ಭಿಣಿಯ ಹತ್ಯೆ: ಪೊಲೀಸರ ತನಿಖೆಯಿಂದ ತಿಳಿದು ಬಂದಿದಿಷ್ಟು.. 

ಉತ್ತರ ಪ್ರದೇಶದ ವಾರಣಾಸಿಯಲ್ಲಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯನ್ನು ಕಾಶಿ ದೇವಾಲಯದ ಮೇಲೆ ನಿರ್ಮಿಸಿದರೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಸಮೀಕ್ಷೆಗೆ ಜಿಲ್ಲಾ ನ್ಯಾಯಾಲಯ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ, ಮುಸ್ಲಿಂ ಸಮಿತಿ ಅಲಹಾಬಾದ್​ ಹೈಕೋರ್ಟ್​ ಮೆಟ್ಟಿಲೇರಿತ್ತು.

ಹೈಕೋರ್ಟ್ ಜಿಲ್ಲಾ ನ್ಯಾಯಾಲದ ಆದೇಶವನ್ನು ಎತ್ತಿ ಹಿಡಿದು​ ಮುಸ್ಲಿಂ ಸಮಿತಿ ಅರ್ಜಿಯನ್ನು ವಜಾಗೊಳಿಸಿ ಸಮೀಕ್ಷೆಗೆ ಅನುಮತಿಯನ್ನು ನೀಡಿತ್ತು. ತದನಂತರ ಸಮಿತಿಯು ಈ ಆದೇಶವನ್ನೂ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೆಟ್ಟಿಲೇರಿ ವೈಜ್ಞಾನಿಕ ಸಮೀಕ್ಷೆಗೆ ತಡೆನೀಡುವಂತೆ ಅರ್ಜಿ ಸಲ್ಲಿಸಿ ಈ ವಿಚಾರವನ್ನು ಮುಸ್ಲಿಂ ಸಂಘಟನೆ ಪರ ವಕೀಲ ನಿಜಾಮ್​ ಪಾಷಾ ಅವರು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಅವರ ಮುಂದೆ ಪ್ರಸ್ತಾಪಿಸಿದ್ದು, ತಕ್ಷಣ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಕೋರಿದ್ದರು. ಅದರಂತೆ ಈ ವಿಚಾರವನ್ನು ಇಂದು ಕೈಗೆತ್ತಿಕೊಂಡಿದ್ದ ಸುಪ್ರೀಂ, ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂ ಕೋರ್ಟ್​ನಿಂದ ಗ್ರೀನ್​ ಸಿಗ್ನಲ್​​ ನೀಡಿದೆ.(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net