24.9 C
Bangalore
Wednesday, December 11, 2019

ಮತ್ತೆ ಮೈತ್ರಿ ಸರ್ಕಾರ ತಿರುಕನ ಕನಸು

Latest News

ಚಾಲೆಂಜಿಂಗ್​ ಸ್ಟಾರ್​ ತೂಗುದೀಪ ದರ್ಶನ್​ ಅಭಿನಯದ ಚಿತ್ರ ಒಡೆಯ ನಾಳೆ ತೆರೆಗೆ : 300ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಪ್ರದರ್ಶನ

ಬೆಂಗಳೂರು: ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅಭಿಯನಯದ ಒಡೆಯ ಸಿನಿಮಾ ನಾಳೆ (ಡಿ.12ರ ಗುರುವಾರ) ತೆರೆಗೆ ಅಪ್ಪಳಿಸಲಿದೆ. ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಒಡೆಯ ಸಿನಿಮಾ...

ವಿಷ್ಣು‌ ಸೇನಾ‌ ಸಮಿತಿಯಿಂದ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಆಯೋಜನೆ

ಬಳ್ಳಾರಿ: ಚಿತ್ರನಟ ವಿಷ್ಣುವರ್ಧನ್ ಅವರ 10ನೇ ಪುಣ್ಯಸ್ಮರಣೆ ಹಿನ್ಮೆಲೆಯಲ್ಲಿ ವಿಷ್ಣು ಸೇನಾ ಸಮಿತಿಯಿಂದ ಡಿ.29ರಂದು ನಗರ ಹಾಗೂ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ...

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಕೆ.ಆರ್.ಪೇಟೆ: ಮಾಜಿ ಪ್ರಧಾನಿ ಮಕ್ಕಳಾದ ಮಾತ್ರಕ್ಕೆ ನೀವು ಹೇಳಿದ್ದೆಲ್ಲವನ್ನೂ ನಾವು ಕೇಳಬೇಕಾ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಎಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಹರಿಹಾಯ್ದರು.
ಪಟ್ಟಣದಲ್ಲಿ ಭಾನುವಾರ ಆಯೋಜಿಸಿದ್ದ ವಾಲ್ಮೀಕಿ ಸಮುದಾಯದ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡರ ಪರ ಮತಯಾಚಿಸಿ ಮಾತನಾಡಿದರು.
ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರ ವಿರುದ್ಧ ಜೆಡಿಎಸ್‌ಗೆ ಸೋಲುಂಟಾಗಲು ಮಹಿಳೆಯರ ಶಾಪವೇ ಕಾರಣ. ಈಗಲೂ ನಿಮಗೆ ಮಹಿಳೆಯರ ಶಾಪ ತಟ್ಟದೇ ಇರಲಾರದು ಎಂದು ತೀವ್ರ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಮತ್ತೆ ಮೈತ್ರಿ ಸರ್ಕಾರ ಬರುತ್ತದೆ ಅನ್ನುವುದು ತಿರುಕನ ಕನಸು. ಉಪ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿವೆ. ಆದರೆ, ಎಕ್ಸ್‌ಪೈರಿ ಡೇಟ್ ಮುಗಿದಿರುವ ಈ ಪಕ್ಷಗಳು ಮತ್ತೆಂದೂ ಅಧಿಕಾರಕ್ಕೆ ಬರಲಾರವು ಎಂದು ಲೇವಡಿ ಮಾಡಿದರು.
ಬಿಜೆಪಿ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ನನ್ನ ಸಹೋದರ ಸಮಾನರು. ಅವರ ತ್ಯಾಗದಿಂದ ನಮ್ಮ ಸರ್ಕಾರ ನಡೆಯುತ್ತಿದೆ ಎಂದ ಅವರು, ರಕ್ತದಲ್ಲಿ ಬರೆದುಕೊಡ್ತೀನಿ, ನಮ್ಮ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯ ಆಗಲು ಬಿಡಲ್ಲ. ತಳವಾರ, ಪರಿವಾರ ಸಮುದಾಯಕ್ಕೆ ಎಸ್ಟಿ ಸರ್ಟಿಫಿಕೇಟ್, ಶೇ.7.5 ಮೀಸಲಾತಿ ಕೊಟ್ಟೇ ಕೊಡುತ್ತೇನೆ. ಅದಕ್ಕಾಗಿ ನಾರಾಯಣಗೌಡರಿಗೆ ಮತ ನೀಡಿ ಎಂದರು.
ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ಮಾತನಾಡಿ, ನಾರಾಯಣಗೌಡ ಅವರಂತಹ ವ್ಯಕ್ತಿ ಮತ್ತೊಬ್ಬರು ಸಿಗುವುದಿಲ್ಲ. ಆದರೆ, ಎರಡನೇ ಬಾರಿ ಶಾಸಕರಾದಾಗ ಅವರನ್ನು ಜೆಡಿಎಸ್ ಹೀನಾಯವಾಗಿ ನಡೆಸಿಕೊಂಡಿತು. ಇದರಿಂದ ಬೇಸತ್ತು ರಾಜೀನಾಮೆ ಕೊಟ್ಟಿದ್ದಾರೆ. ಈ ಚುನಾವಣೆ ಅವರಿಗೆ ಅಗ್ನಿ ಪರೀಕ್ಷೆಯಾಗಿದ್ದು, ಕೈಬಿಡಬೇಡಿ ಎಂದು ಮನವಿ ಮಾಡಿದರು.
ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ಮಾತನಾಡಿ, ಮೈತ್ರಿ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿಯ ಕನಸು ಕಂಡಿದ್ದೆ. ಆದರೆ, ಸರ್ಕಾರ ಅದಕ್ಕೆ ಸಹಕರಿಸಲಿಲ್ಲ. ಆಡಳಿತ ವಿಷಯದಲ್ಲಿ ನನ್ನನ್ನು ದೂರ ಇಟ್ಟಿದ್ದರು ಎಂದು ಆರೋಪಿಸಿದರು.
ಅಹಿಂದ ಮುಖಂಡ ಅಪ್ಪಣ್ಣ, ಮುಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಮನ್ಮುಲ್ ನಿರ್ದೇಶಕ ಕೆ.ಜಿ. ತಮ್ಮಣ್ಣ ಇತರರಿದ್ದರು.

ಫೈಲ್ ನಾಪತ್ತೆ ಮಾಡಿಸುತ್ತಿದ್ದರು…: ನನ್ನ ಕ್ಷೇತ್ರದಲ್ಲಿ ಆರೇಳು ವರ್ಷ ತೀವ್ರ ಬರ ಇತ್ತು. ಜನ-ಜಾನುವಾರುಗಳಿಗೆ ನೀರಿರಲಿಲ್ಲ. ಆದ್ದರಿಂದ ಕೆರೆ-ಕಟ್ಟೆ ತುಂಬಿಸುವಂತೆ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡುತ್ತಿದ್ದೆ.. ತಕ್ಷಣ ಅವರು ಪತ್ರಕ್ಕೆ ಸಹಿ ಹಾಕಿಕೊಡುತ್ತಿದ್ದರು. ಆದರೆ, ಮರು ದಿನವೇ ಆ ಫೈಲ್ ವಿಧಾನಸೌಧದಲ್ಲಿ ಕಾಣಿಸುತ್ತಿರಲಿಲ್ಲ. ದೇವೇಗೌಡರ ಕುಟುಂಬ ಸದಸ್ಯರು ಅದನ್ನ ಎತ್ತಿಸುತ್ತಿದ್ದರು ಎಂದು ನಾರಾಯಣಗೌಡ ಆರೋಪಿಸಿದರು.
ಕ್ಷೇತ್ರದ ಅಧಿಕಾರಿಗಳ ವರ್ಗಾವಣೆ ನನ್ನ ಗಮನಕ್ಕೆ ಬರುತ್ತಿರಲಿಲ್ಲ. ಎಲ್ಲ ವರ್ಗಾವಣೆಯಲ್ಲೂ ಅವರೇ ಕೈ ಹಾಕುತ್ತಿದ್ದರು. ಹೀಗೆ ಹಿಂಸೆ ಕೊಟ್ಟು ಕಣ್ಣೀರಲ್ಲಿ ಕೈ ತೊಳೆಸಿದ್ದರು ಎಂದು ಅಲವತ್ತುಕೊಂಡರು.
ಕ್ಷೇತ್ರದಲ್ಲಿ ಸಿ.ಎಸ್.ಪುಟ್ಟರಾಜು, ಎಚ್.ಡಿ.ರೇವಣ್ಣ ಮತ್ತು ಹಾಸನ ಜಿಲ್ಲೆಯವರ ಹಸ್ತಕ್ಷೇಪ ಇತ್ತು. ಆ ಕುಟುಂಬದ ಸೇವೆ ಮಾಡಿ ನನ್ನ ಅರ್ಧ ಆಯಸ್ಸು ತೀರಿಹೋಗಿದೆ. ಮಂಡ್ಯದವರು ಏನು ಪಾಪು ಮಾಡಿದ್ದೀವಿ? ಸಾವಿರಾರು ಕೋಟಿ ರೂ. ಅನುದಾನವನ್ನು ಹಾಸನಕ್ಕೆ ಹೊತ್ತೊಯ್ಯುತ್ತಾರೆ, ಮಂಡ್ಯದವರಿಗೆ ಮಾತ್ರ ಚಿಪ್ಪು ನೀಡುತ್ತಾರೆ ಎಂದು ಕಿಡಿಕಾರಿದರು.
ಪ್ರಮಾಣ ಮಾಡಲಿ:ಕಮಿಷನ್ ತೆಗೆದುಕೊಂಡಿರುವುದಾಗಿ ನನ್ನ ವಿರುದ್ಧ ಆರೋಪ ಮಾಡಿರುವ ಎಚ್.ಡಿ.ರೇವಣ್ಣ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ. ನಾನೂ ಮಾಡುತ್ತೇನೆ. ಆಗ ರಾಜ್ಯದ ಜನರಿಗೆ ಸತ್ಯ ಏನೆಂಬುದು ಗೊತ್ತಾಗುತ್ತದೆ ಎಂದು ಸವಾಲು ಹಾಕಿದರು.

ಕಾಲಿಗೆ ನಮಸ್ಕಾರ: ವೇದಿಕೆಯಲ್ಲಿ ಮಾತನಾಡುತ್ತಿದ್ದ ಸಚಿವ ಶ್ರೀರಾಮಲು ಅವರ ಕಾಲಿಗೆ ಅಭ್ಯರ್ಥಿ ನಾರಾಯಣಗೌಡ ನಮಸ್ಕರಿಸಿದರು. ತನಗೆ ಆಶೀರ್ವಾದ ಮಾಡುವಂತೆ ಕೋರಿದರು.

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...