More

    ಜೆಡಿಎಸ್-ಬಿಜೆಪಿ ಒಟ್ಟಾಗಿ ಚುನಾವಣೆ ಎದುರಿಸಲು ನಿರ್ಧಾರ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ

    ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ಆಶ್ಲೇಷ ಬಲಿ,ತುಲಾಭಾರ ಮತ್ತು ಮಹಾಪೂಜೆ ಸೇವೆ ನಡೆಸಿದರು.

    ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ಕುಮಾರಸ್ವಾಮಿಯವರು ಈಗಾಗಲೇ ಕೇಂದ್ರ ಗೃಹ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ. ಆದರೆ ಸೀಟು ಹಂಚಿಕೆಯ ಬಗ್ಗೆ ಇನ್ನೂ ಚರ್ಚೆ ನಡೆಯಬೇಕಷ್ಟೆ. ದಸರಾ ಕಳೆದು ಸೀಟು ಹಂಚಿಕೆ ಚರ್ಚೆ ನಡೆಯಲಿದೆ. ಸೆಷನ್ ಕಳೆದು ನನ್ನ ಆರೋಗ್ಯ ಸುಧಾರಿಸಿದರೆ ನಾನು ಗೃಹಸಚಿವರಲ್ಲಿ ಮಾತನಾಡುತ್ತೇನೆ. ಇಲ್ಲವಾದರೆ ಕುಮಾರಸ್ವಾಮಿ ಅವರು ಮತ್ತೆ ಗೃಹಮಂತ್ರಿಗಳ ಜತೆ ಚರ್ಚೆ ನಡೆಸಲಿದ್ದಾರೆ. ಮೈತ್ರಿಗೆ ಮೊದಲು ಜೆಡಿಎಸ್‌ನ 19 ಎಂಎನ್‌ಎ, 8 ಎಂಎಲ್‌ಸಿ, ಪಕ್ಷದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಜತೆ ಎರಡು ಸುತ್ತು ಮಾತುಕತೆ ನಡೆಸಲಾಗಿದೆ. ಈ ಮಾತುಕತೆ ಬಳಿಕ ಕುಮಾರಸ್ವಾಮಿ ಗೃಹಮಂತ್ರಿಗಳ ಭೇಟಿ ಮಾಡಿದ್ದಾರೆ ಎಂದರು.

    ಹಿಂದಿನ ಚುನಾವಣೆಯ ಮತ ಗಳಿಕೆ ಒಟ್ಟುಗೂಡಿಸಿ ಒಂದು ನಿರ್ಧಾರಕ್ಕೆ ಬರಲಾಗಿದೆ. ಆದರೆ ಯಾವ ಕ್ಷೇತ್ರ ಅನ್ನೋ ಬಗ್ಗೆ ಇನ್ನೂ ಫೈನಲ್ ಆಗಿಲ್ಲ. ಮಂಡ್ಯ ಸೇರಿದಂತೆ ಯಾವುದೇ ತೀರ್ಮಾನ ಆಗಿಲ್ಲ. ಸದ್ಯ ಹಾಸನ ಜೆಡಿಎಸ್, ರಾಮನಗರ ಕಾಂಗ್ರೆಸ್ ಕೈಯಲ್ಲಿದೆ. ಉಳಿದೆಡೆ ಬಿಜೆಪಿನೇ ಇದೆ. ಹಾಗಾಗಿ ಮುಂದೆ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಈ ಬಾರಿ ಕಾಂಗ್ರೆಸ್ 28 ಗೆಲ್ಲುವ ಉತ್ಸಾಹದಲ್ಲಿದೆ. ಆ ಕಾರಣಕ್ಕೆ ಬಿಜೆಪಿ, ಜೆಡಿಎಸ್ ಒಂದುಗೂಡಿ ಹೋಗುವ ನಿರ್ಧಾರಕ್ಕೆ ಬಂದಿದ್ದೇವೆ.

    ಜಾತಿ ಆಧಾರದಲ್ಲಿ ಮತ ವಿಭಜನೆಯ ಬಗ್ಗೆ ನಾನು ಈಗ ವಾದ ಮಾಡಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶೇಕಡಾವಾರು ಮತ ಬಿಜೆಪಿಗೆ 30-33 ,ಕಾಂಗ್ರೆಸ್ 40, ಜೆಡಿಎಸ್ 20, 22 ಸಿಕ್ಕಿದೆ ಎಂದರು.

    See also  ಕನ್ನಡ ವಿವಿ ಮೇಲೇಕೆ ಕೆಂಗಣ್ಣು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts