More

    ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರ ಜನ್ಮದಿನಕ್ಕೆ ಶುಭಾಶಯ ಕೋರಿದ ಮಾಜಿ ಪ್ರಧಾನಿ ಎಚ್​. ಡಿ.ದೇವೇಗೌಡರು; ಹೂಗುಚ್ಛ ಕಳಿಸಿದ ಎಚ್​ಡಿಕೆ

    ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರ ಹುಟ್ಟುಹಬ್ಬಕ್ಕೆ ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಎಚ್​. ಡಿ.ದೇವೇಗೌಡರು ಟ್ವೀಟ್​ ಮೂಲಕ ಶುಭಕೋರಿದ್ದಾರೆ.

    ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಆಯುರಾರೋಗ್ಯ, ಸುಖಶಾಂತಿ ನೀಡಿ ಕಾಪಾಡಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.

    ಹಾಗೇ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿಯವರೂ ಶುಭ ಹಾರೈಸಿದ್ದಾರೆ. ಆಪ್ತ ಸಹಾಯಕನ ಮೂಲಕ ಹೂಗುಚ್ಛ ಹಾಗೂ ಶುಭಾಶಯ ಪತ್ರವನ್ನು ಕಳಿಸಿದ್ದಾರೆ ಎನ್ನಲಾಗಿದೆ.

    78ನೇ ಜನ್ಮದಿನದ ಸಂಭ್ರಮದಲ್ಲಿರುವ ಬಿ.ಎಸ್​.ಯಡಿಯೂರಪ್ಪನವರಿಗೆ ಹಲವು ರಾಜಕೀಯ ಮುಖಂಡರು, ಸ್ವಾಮೀಜಿಗಳು ಶುಭಾಶಯ ತಿಳಿಸುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts