More

    ನೀರಾವರಿ ಯೋಜನೆಗಳಿಗೆ ಹಣ ಕಡಿತಗೊಳಿಸಲ್ಲ

    ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ

    ಎಚ್.ಡಿ.ಕೋಟೆ: ಮುಖ್ಯಮಂತ್ರಿ ಯಡಿಯೂರಪ್ಪ ಅವರು ರೈತರ ಪರವಿದ್ದು ಯಾವುದೇ ನೀರಾವರಿ ಯೋಜನೆಗಳಿಗೆ ಹಣ ಕಡಿತಗೊಳಿಸುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.
    ತಾಲೂಕಿನ ಕಬಿನಿ ಜಲಾಶಯಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಮಾಧ್ಯಮದವರ ಜತೆ ಮಾತನಾಡಿದರು. ಹಿಂದಿನ ಸರ್ಕಾರಗಳು ನಿಗದಿಪಡಿಸಿರುವ ನೀರಾವರಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ. ನೀರಾವರಿ ವಿಷಯದಲ್ಲಿ ಯಾವುದೇ ಪಕ್ಷಭೇದ ಮಾಡದೆ ಅಭಿವೃದ್ಧಿ ಕಾರ್ಯ ಮಾಡಲಾಗುವುದು . ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶದ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.
    ಸುಭಾಷ್ ಪವರ್ ಸ್ಟೇಷನ್‌ನಲ್ಲಿ ವಿದ್ಯುತ್ ಉತ್ಪಾದನೆಗೆ ನೀರಾವರಿ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ಜಲಾಶಯದಿಂದ ನೀರು ಬಿಡುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು ತನಿಖೆ ನಡೆಸುವುದಾಗಿ ತಿಳಿಸಿದರು.
    ಸಚಿವರಿಗೆ ನೀರಾವರಿ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ಜಯಪ್ರಕಾಶ್ ಕಬಿನಿ ಜಲಾಶಯದ ಚಿತ್ರ ಪ್ರದರ್ಶಿಸಿ ಮಾಹಿತಿ ನೀಡಿದರು. ನಂತರ ಸಚಿವರು ಶಾಸಕ ಅನಿಲ್‌ಕುಮಾರ್ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಕಬಿನಿ ಜಲಾಶಯದ ಮುಂಭಾ ಗದ ಸೇತುವೆ ಪರಿಶೀಲಿಸಿದರು.
    ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳ ಶ್ಯಾಮ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳಾ ದೇವಣ್ಣ, ಮಾಜಿ ಸಚಿವ ಎಂ.ಶಿವಣ್ಣ, ಮಾಜಿ ಶಾಸಕ ಸಿದ್ದರಾಜು, ಅಪ್ಪಣ್ಣ, ತಾಲೂಕು ಬಿಜೆಪಿ ಅಧ್ಯಕ್ಷ ಗುರುಸ್ವಾಮಿ, ಮಾಜಿ ಅಧ್ಯಕ್ಷ ಗಿರೀಶ್, ನೀರಾವರಿ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ಜಯಪ್ರಕಾಶ್, ಮುಖ್ಯ ಅಧೀಕ್ಷಕ ಇಂಜಿನಿಯರ್ ಚಂದ್ರಕುಮಾರ್, ಮುಖ್ಯ ಅಭಿಯಂತರ ಶಂಕರೇಗೌಡ, ಕಾರ್ಯಪಾಲಕ ಅಭಿಯಂತರ ಸುಜಾತ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ನಾಗರಾಜು, ಮೊಳಗಾವಿ, ರಾಜಯ್ಯ, ತಹಸೀಲ್ದಾರ್ ಆರ್.ಮಂಜುನಾಥ್, ತಾಪಂ ಇಒ ರಾಮಲಿಂಗಯ್ಯ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts