22.5 C
Bengaluru
Sunday, January 19, 2020

10 ದಿನದೊಳಗೆ ಬಾಕಿ ವೇತನ

Latest News

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಎಚ್.ಡಿ.ಕೋಟೆ: 5 ತಿಂಗಳಿಂದ ವೇತನ ನೀಡದಿರುವುದನ್ನು ಖಂಡಿಸಿ ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರು ಪ್ರಗತಿಪರ ಸಂಘಟನೆಗಳ ಬೆಂಬಲದೊಂದಿಗೆ ಪುರಸಭೆ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.

ಹಲವು ವರ್ಷಗಳಿಂದ 16 ಪೌರಕಾರ್ಮಿಕರು ಸೇವೆ ಸಲ್ಲಿಸುತ್ತಿದ್ದು, ಗುತ್ತಿಗೆ ಅವಧಿ ಕಳೆದ ಮಾರ್ಚ್ 31ಕ್ಕೆ ಕೊನೆಯಾಗಿದೆ. ಈ ನಡುವೆ, ವೇತನ ಸಿಗದೆ ಕುಟುಂಬಗಳ ನಿರ್ವಹಣೆ ಕಷ್ಟವಾಗಿದೆ. ಬಾಕಿ ವೇತನ ನೀಡುವವರೆಗೂ ಮುಷ್ಕರ ನಿಲ್ಲಿಸುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ತಮ್ಮ ಆರೋಗ್ಯದ ಹಂಗನ್ನೂ ತೊರೆದು ಪಟ್ಟಣವನ್ನು ಸ್ವಚ್ಛವಾಗಿಡಲು ನಿತ್ಯ ಸ್ವಚ್ಛತಾ ಕೆಲಸ ನಿರ್ವಹಿಸುವ ಪೌರಕಾರ್ಮಿಕರಿಗೆ ವೇತನ ನೀಡದ ಅಧಿಕಾರಿಗಳ ನಡೆಗೆ ಪ್ರಗತಿಪರ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಬಂದ ಪುರಸಭೆ ಮುಖ್ಯಾಧಿಕಾರಿ, ಪರಿಸರ ಇಂಜಿನಿಯರ್ ಹಾಗೂ ಆರೋಗ್ಯ ನಿರೀಕ್ಷಕರನ್ನು ತೀವ್ರವಾಗಿ ತರಾಟೆ ತಗೆದುಕೊಂಡ ಪ್ರತಿಭಟನಾಕಾರರು ಧಿಕ್ಕಾರ ಕೂಗಿದರಲ್ಲದೆ, ಮುಖ್ಯಾಧಿಕಾರಿಯ ಅಮಾನತಿಗೆ ಆಗ್ರಹಿಸಿದರು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ಅನಿಲ್ ಚಿಕ್ಕಮಾದು ಅವರ ಎದುರೇ ಮುಖ್ಯಾಧಿಕಾರಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು, ಇವರು ಬಂದು 6 ತಿಂಗಳು ಕಳೆದಿವೆ. ಒಂದು ವಾರ್ಡಿಗೂ ತೆರಳಿ ನಿವಾಸಿಗಳ ಕಷ್ಟ ಕೇಳಿಲ್ಲ. ಇಲ್ಲಿಯವರೆಗೂ ಪಟ್ಟಣದಲ್ಲಿ ಒಂದೇ ಒಂದು ಅಭಿವೃದ್ಧಿ ಕಾಮಗಾರಿ ನಡೆದಿಲ್ಲ. ಪಟ್ಟಣದ ಅಭಿವೃದ್ಧಿ ಸಂಪೂರ್ಣ ಕುಂಠಿತವಾಗಿದೆ ಎಂದು ಆರೋಪಿಸಿದರು.

ಅಲ್ಲದೆ, ಈ ಅಧಿಕಾರಿ ದಲಿತ ವಿರೋಧಿಯಾಗಿದ್ದು, ಪೌರಕಾರ್ಮಿಕರನ್ನು ಗೌರವದಿಂದ ಕಾಣುತ್ತಿಲ್ಲ. ವೇತನ ಕೇಳಲು ಹೋದರೆ ಬೆದರಿಸಿ, ನಿಂದಿಸುತ್ತಾರೆ. ಆದ್ದರಿಂದ ಈ ಅಧಿಕಾರಿ ನಮಗೆ ಬೇಡವೇ ಬೇಡ. ಅಮಾನತು ಮಾಡಿ ಎಂದು ಪಟ್ಟುಹಿಡಿದರು.

ಪೌರಕಾರ್ಮಿಕ ಸಮಸ್ಯೆ ಆಲಿಸಿದ ಶಾಸಕರು, ಮುಖ್ಯಾಧಿಕಾರಿಯನ್ನು ತೀವ್ರವಾಗಿ ತರಾಟೆ ತೆಗೆದುಕೊಂಡರು. ಪಟ್ಟಣದ ಅಭಿವೃದ್ಧಿಗೆ ಶ್ರಮಿಸದೆ, ಪೌರಕಾರ್ಮಿಕರ ವೇತನ ನೀಡದೆ ಏನು ಮಾಡುತ್ತಿದ್ದೀರಿ? ನಾನು ಕಳೆದ ವಾರ ಪುರಸಭೆಗೆ ಭೇಟಿ ನೀಡಿದ ಸಂದರ್ಭ 2 ದಿನಗಳಲ್ಲಿ ವೇತನ ನೀಡುವುದಾಗಿ ಹೇಳಿ ಇನ್ನೂ ಏಕೆ ನೀಡಿಲ್ಲ ಎಂದು ಸಿಟ್ಟಿನಿಂದ ಪ್ರಶ್ನಿಸಿದರು.

ನಂತರ ಪುರಸಭೆ ಕಚೇರಿಗೆ ತೆರಳಿದ ಅನಿಲ್ ಚಿಕ್ಕಮಾದು, ನೀವು ನನ್ನ ಮಾತಿಗೂ ಬೆಲೆ ನೀಡಿಲ್ಲ. ಪಟ್ಟಣದ ಅಭಿವೃದ್ಧಿಗೂ ಶ್ರಮಿಸುತ್ತಿಲ್ಲ. ನಿಮ್ಮ ಮೇಲೆ ಸೂಕ್ತ ಕ್ರಮ ಕೈಗೊಂಡು ಅಮಾನತು ಮಾಡುವಂತೆ ಸಂಬಂಧಪಟ್ಟವರಿಗೆ ಸೂಚಿಸುತ್ತೇನೆ ಎಂದು ಮುಖ್ಯಾಧಿಕಾರಿಗೆ ಎಚ್ಚರಿಕೆ ನೀಡಿದರು.

ಮತ್ತೆ ಪ್ರತಿಭಟನಾ ಸ್ಥಳಕ್ಕೆ ಬಂದ ಶಾಸಕರು, ಬುಧವಾರವೇ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ 10 ದಿನಗಳ ಒಳಗೆ ಬಾಕಿ ವೇತನ ಕೋಡಿಸುತ್ತೇನೆ. ಪ್ರತಿಭಟನೆ ಕೈಬಿಡಿ ಎಂದು ಮನವಿ ಮಾಡಿದರು. ಶಾಸಕರ ಭರವಸೆ ಮೆರೆಗೆ ಪೌರಕಾರ್ಮಿಕರು ಪ್ರತಿಭಟನೆ ಹಿಂಪಡೆದು, ಎಂದಿನಂತೆ ಸ್ವಚ್ಛತಾ ಕೆಲಸಕ್ಕೆ ಹಾಜರಾದರು.

ಪ್ರತಿಭಟನೆಯಲ್ಲಿ ಪುರಸಭೆ ಸದಸ್ಯರಾದ ಅನ್ಸರ್ ಅಹಮದ್, ತೋಟದ ರಾಜಣ್ಣ, ಎಚ್.ಸಿ.ನರಸಿಂಹಮೂರ್ತಿ, ವಿವೇಕ್, ದಸಂಸ ಮುಖಂಡರಾದ ಚಾ.ಶಿವಕುಮಾರ್, ಕೆ.ಎಂ.ಹಳ್ಳಿ ಸಣ್ಣಕುಮಾರ್, ಮುತ್ತು, ನಿಂಗರಾಜ್, ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಮುದ್ದುಮಲ್ಲಯ್ಯ, ಜೀವಿಕ ಬಸವರಾಜ್, ರಾಚಯ್ಯ, ಪೌರಕಾರ್ಮಿಕ ನೌಕರರ ಸಂಘದ ಅಧ್ಯಕ್ಷ ಶ್ರೀರಂಗ ಇದ್ದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...