ದುರಂತ ಸ್ಥಳದ ಆಕ್ರಂದನ ಕಂಡು ಕಣ್ಣೀರಿಟ್ಟ ಸಿಎಂ ಕುಮಾರಸ್ವಾಮಿ: ಸಂತ್ರಸ್ತ ಕುಟುಂಬಗಳಿಗೆ 5 ಲಕ್ಷ ಪರಿಹಾರ

ಮಂಡ್ಯ: ಪಾಂಡವಪುರ ತಾಲೂಕು ಕನಗನಮರಡಿ ಬಳಿ ಸಂಭವಿಸಿದ ಬಸ್​ ದುರಂತದ ಸ್ಥಳಕ್ಕೆ ತೆರಳಿದ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರು, ಸಂತ್ರಸ್ತ ಕುಟುಂಬಗಳ ಆಕ್ರಂದನ ಕಂಡು ಕಣ್ಣೀರು ಹಾಕಿದ್ದಾರೆ.

ದುರಂತದ ಸುದ್ದಿ ತಿಳಿಯುತ್ತಿದ್ದಂತೆ ತಮ್ಮ ಪೂರ್ವನಿಗದಿತ ಕಾರ್ಯಕ್ರಮಗಳನ್ನೆಲ್ಲ ರದ್ದುಗೊಳಿಸಿದ ಮುಖ್ಯಮಂತ್ರಿ ಬೆಂಗಳೂರಿನಿಂದ ಮಂಡ್ಯಕ್ಕೆ ತೆರಳಿದರು. ಸ್ಥಳಕ್ಕೆ ಆಗಮಿಸಿದ ಅವರು ಸಂತ್ರಸ್ತ ಕುಟುಂಬಗಳ ನೋವು ಆಲಿಸಿದರು. ಕುಟುಂಬಗಳ ಆಕ್ರಂದನ, ಹತಾಶೆ ಕಂಡು ಕಣ್ಣೀರು ಸುರಿಸಿದರು.

ದುರಂತಕ್ಕೆ ಮಿಡಿದಿರುವ ಮುಖ್ಯಮಂತ್ರಿ ಸಂತ್ರಸ್ತ ಕುಟುಂಬಗಳಿಗೆ ಸ್ಥಳದಲ್ಲೇ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಆದರೆ, 10 ಲಕ್ಷ ಪರಿಹಾರ ನೀಡಬೇಕೆಂದು ನೆರೆದಿದ್ದ ಜನ ಕುಟುಂಬಸ್ಥರ ಪರವಾಗಿ ಆಗ್ರಹಿಸಿದ್ದಾರೆ.

ಇದೇ ವೇಳೆ ಸ್ಥಳದಲ್ಲಿ ಜಮಾಯಿಸಿದ್ದ ನಾಗರಿಕರು ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಅವರ ರಾಜೀನಾಮೆಗೆ ಒತ್ತಾಯಿಸಿದ ಪ್ರಸಂಗವೂ ನಡೆಯಿತು.

ಕನಗನಮರಡಿ ಬಸ್​ ದುರಂತಕ್ಕೆ ಮಿಡಿದ ಮೋದಿ, ರಾಹುಲ್​

ಪಾಂಡವಪುರ ಅಪಘಾತದಲ್ಲಿ ಮೃತರ ಸಂಖ್ಯೆ 28ಕ್ಕೆ ಏರಿಕೆ, ಸ್ಥಳಕ್ಕೆ ಸಿಎಂ ದೌಡು