ಮುಖ್ಯಮಂತ್ರಿಯಾಗಿ ಎಚ್‌.ಡಿ. ಕುಮಾರಸ್ವಾಮಿ ಬುಧವಾರ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಬಿ.ಎಸ್‌.ಯಡಿಯೂರಪ್ಪ ಅವರು ಬಹುಮತ ಸಾಬೀತುಪಡಿಸದೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್​-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಎಚ್‌.ಡಿ. ಕುಮಾರಸ್ವಾಮಿ ಅವರು ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸರ್ಕಾರ ರಚನೆಗೆ ರಾಜ್ಯಪಾಲರು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಿದ್ದು, ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಮೊದಲು ಸೋಮವಾರ ನಿಗಧಿಯಾಗಿದ್ದ ಕಾರ್ಯಕ್ರಮವು ರಾಜೀವ್‌ ಗಾಂಧಿ ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ ಬುಧವಾರಕ್ಕೆ ಮುಂದೂಡಲಾಗಿದೆ ಎಂದು ಎಚ್‌ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

104 ಸ್ಥಾನಗಳನ್ನು ಗಳಿಸಿ ಸರ್ಕಾರ ರಚಿಸಿದ್ದ ಬಿಎಸ್​ವೈ ಬಹುಮತ ಸಾಬೀತು ಪಡಿಸಲು ಸಾಧ್ಯವಾಗಲಿಲ್ಲ. ಹಾಗಾಗಿ 117 ಶಾಸಕರ ಬಲವನ್ನು ಹೊಂದಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡಿದ್ದಾರೆ. (ದಿಗ್ವಿಜಯ ನ್ಯೂಸ್‌)

Leave a Reply

Your email address will not be published. Required fields are marked *