More

    ಶಿರಾ ಉಪಚುನಾವಣೆಯನ್ನೇಕೆ ಇಷ್ಟೊಂದು ಸೀರಿಯಸ್ಸಾಗಿ ತಗೊಂಡಿದ್ದಾರೆ ಎಚ್​ಡಿಕೆ?

    ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕುತೂಹಲ ಕೆರಳಿಸಿದ್ದು, ಮೂರೂ ಪಕ್ಷಗಳೂ ಭರ್ಜರಿ ತಯಾರಿ ನಡೆಸುತ್ತಿವೆ. ಈ ಕ್ಷೇತ್ರ ಸದ್ಯ ಜೆಡಿಎಸ್​ ವಶದಲ್ಲಿದ್ದು, ಅದನ್ನು ಉಳಿಸಿಕೊಳ್ಳಲು ಪಕ್ಷ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ.

    ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕ್ಷೇತ್ರದ ಮುಖಂಡರ ಸಭೆಯನ್ನು ಕರೆದು ಚರ್ಚಿಸಿದ್ದಾರೆ. ಅಭ್ಯರ್ಥಿ ಯಾರೇ ಆದರೂ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ ತಾಕೀತು ಮಾಡಿದ್ದಾರೆ.ಯಾರಿಗೆ ಟಿಕೆಟ್ ಕೊಟ್ಟರೂ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಪ್ರಾದೇಶಿಕ ಪಕ್ಷದ ಅಗತ್ಯತೆಯನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಪ್ರಿಯಕರನಿಂದ ದೇಹ ಸುಖದ ಜತೆಗೆ ಹಣ ಪೀಕಿದಳು, ಕೊನೆಗೆ ಪ್ರಾಣವನ್ನೇ ತೆಗೆದಳು!

    ಇದೀಗ ಮಾಜಿ ಸಿಎಂ ಕುಮಾರಸ್ವಾಮಿಯವರು ಉಪಚುನಾವಣೆ ನಿಮಿತ್ತ ಶಿರಾದಲ್ಲಿ 15 ದಿನ ಮೊಕ್ಕಾಂ ಹೂಡಿ, ಚುನಾವಣಾ ಪ್ರಚಾರ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
    ಇನ್ನು ಬಿ.ಸತ್ಯನಾರಾಯಣ ನಿಧನದಿಂದ ತೆರವಾದ ಈ ಕ್ಷೇತ್ರವನ್ನು ಈ ಬಾರಿ ತಮ್ಮ ವಶಕ್ಕೆ ಪಡೆದುಕೊಳ್ಳಲು ಕಾಂಗ್ರೆಸ್ ಮತ್ತು ಬಿಜೆಪಿಗಳೂ ಕಸರತ್ತು ನಡೆಸಿವೆ.

    ವೃತ್ತಿ ಮಾರ್ಗದರ್ಶನಕ್ಕೆ ಕೆಎಲ್​​ಇ ವಿವಿಯಿಂದ ವೆಬಿನಾರ್; ವಿಜಯವಾಣಿ, ದಿಗ್ವಿಜಯ ನ್ಯೂಸ್​ ಸಹಯೋಗ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts