ಎಚ್.ಕೆ.ವೀರಣ್ಣಗೌಡ, ಎಸ್‌ಎಂಕೆ ಕೊಡುಗೆ ಅಪಾರ

blank

ಮದ್ದೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಕೆ.ವೀರಣ್ಣಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಸಮಾಜಕ್ಕ ತಮ್ಮದೆಯಾದ ಹಲವಾರು ರೀತಿಯ ಕೊಡುಗೆಗಳನ್ನು ನೀಡಿ ಜನರ ಮನಸಿನಲ್ಲಿ ಅಚ್ಚಳಿಯದೆ ಉಳಿದಿದ್ದಾರೆಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಪ್ರಶಂಸೆ ವ್ಯಕ್ತಪಡಿಸಿದರು.
ಗುರುವಾರ ಸಂಜೆ ಪಟ್ಟಣದ ಎಂ.ಎಚ್.ಚನ್ನೇಗೌಡ ವಿದ್ಯಾನಿಲಯದ ವತಿಯಿಂದ ನಡೆದ ಸೇವಾ ಧುರೀಣ ಎಚ್.ಕೆ.ವೀರಣ್ಣಗೌಡರ 127 ನೇ ಜಯಂತಿ, ಮಾಹಿತಿ ತಂತ್ರಜ್ಞಾನದ ಹರಿಕಾರ ಎಸ್.ಎಂ.ಕೃಷ್ಣ 94ನೇ ಜಯಂತಿ ಕಾರ್ಯಕ್ರಮ ಹಾಗೂ ಡಾ.ಶಾಂತ ಮರಿಯಪ್ಪ ಸಭಾಂಗಣ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಇಬ್ಬರು ಮಹಾನ್ ನಾಯಕರು ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುವ ಮೂಲಕ ಜಿಲ್ಲೆ ಮತ್ತು ರಾಜ್ಯದಲ್ಲಿ ಅದ್ವೀತಿಯ ಸಾಧನೆ ಮಾಡಿದ್ದಾರೆ. ಇಂತಹ ಮಹಾನ್ ವ್ಯಕ್ತಿಗಳ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಎಸ್.ಎಂ.ಕೃಷ್ಣ ಐಟಿ, ಬಿ ಟಿ ಕ್ಷೇತ್ರ ಸೇರಿದಂತೆ ಕೈಗಾರಿಕೆಗಳ ಕ್ರಾಂತಿಯನ್ನು ಮಾಡಿದವರು. ಅವರು ಅಂದಿನ ಕಾಲ ಘಟ್ಟದಲ್ಲಿಯೇ ಆಕ್ಸ್‌ಫರ್ಡ್ ಯೂನಿವರ್ಸಿಟಿಯಲ್ಲಿ ವಿದ್ಯಾರ್ಜನೆ ಪಡೆದ ನಂತರದ ದಿನಗಳಲ್ಲಿ ಅದರಲ್ಲೂ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಅವರ ಅಪಾರ ಜ್ಞಾನದಿಂದ ಹಲವಾರು ಕ್ಷೇತ್ರಗಳಲ್ಲಿ ರಾಜ್ಯದ ಅಭಿವೃದ್ಧಿಗೆ ನಾಂದಿ ಹಾಡಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅವರು ಹೆಚ್ಚು ಮಾತನಾಡುತ್ತಿರಲಿಲ್ಲ. ಆದರೆ ಹೆಚ್ಚು ಮೌಲ್ಯಾಧಾರಿತ ಕೆಲಸಗಳನ್ನು ಮಾಡುತ್ತಿದ್ದರು. ರಾಜ್ಯದಲ್ಲಿ ಅತಿ ಹೆಚ್ಚು ಕೈಗಾರಿಕೆ, ಉನ್ನತ ಶಿಕ್ಷಣಕ್ಕೆ ಒತ್ತು ಕೊಡುವುದರ ಜತೆಗೆ ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಸೇರಿದಂತೆ ಹಲವಾರು ದಿಸೆಯಲ್ಲಿ ಉತ್ತುಂಗಕ್ಕೇರಿಸಿದ ಕೀರ್ತಿ ಅವರದ್ದು ಎಂದರು.
ಅವರು ಮುಖ್ಯಮಂತ್ರಿಗಳಾಗಿದ್ದ ವೇಳೆ ಹಲವಾರು ಅಂತಾರಾಷ್ಟ್ರೀಯ ಕಂಪನಿಗಳು ಬಂದವು. ಅಲ್ಲದೇ ಸಮಾಜಕ್ಕೂ ಅವರು ನೀಡಿದ ಹಲವು ಯೋಜನೆಗಳು ಇಂದಿಗೂ ಜನರ ಮಾನಸ್ಸಿನಲ್ಲಿದೆ ಎಂದರು.
ಚಿತ್ರಕಲಾ ಪರಿಷತ್‌ನ ಅಧ್ಯಕ್ಷ ಬಿ.ಎಲ್.ಶಂಕರ್ ಮಾತನಾಡಿ, ಎಚ್.ಕೆ.ವೀರಣ್ಣಗೌಡ ಉತ್ತಮ ಸಮಾಜ ಸೇವಕರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ ಸಚಿವರಾಗಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗಮನಾರ್ಹ ಸೇವೆ ಮಾಡಿ ನಾಯಕರೆನಿಸಿಕೊಂಡು ಹಲವಾರು ನಾಯಕರನ್ನು ಬೆಳೆಸಿದ್ದಾರೆ. ಅದು ಅವರ ನಿಜವಾದ ಅಪೂರ್ವ ವ್ಯಕ್ತಿತ್ವಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದರು.
ತಮ್ಮ ಸ್ವಂತ ಖರ್ಚಿನಲ್ಲಿ ಹಲವಾರು ವಿದ್ಯಾಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಸಾಮಾನ್ಯ ವರ್ಗದ ಮಕ್ಕಳಿಗೆ ವಿದ್ಯಾರ್ಜನೆ ನೀಡಿದ ಕೀರ್ತಿ ಎಚ್.ಕೆ.ವೀರಣ್ಣ ಗೌಡರಿಗೆ ಸಲ್ಲುತ್ತದೆ ಎಂದರು.
ಎಸ್.ಎಂ ಕೃಷ್ಣ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಜನಿಸಿ ಅತ್ಯುತ್ತಮ ರಾಜಕಾರಣಿಯಾಗಿ ರಾಜ್ಯದ ಮುಖ್ಯಮಂತ್ರಿಯಷ್ಟೇ ಅಲ್ಲದೇ ಕೇಂದ್ರ ಸಚಿವ ಹಾಗೂ ರಾಜ್ಯಪಾಲರಾಗಿ ಅವರ ಸೇವೆಯನ್ನು ನಾಡು ಎಂದಿಗೂ ಮರೆಯದು ಎಂದರು.
ಕಾರ್ಯಕ್ರಮದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಚಿತ್ರಕಲಾ ಪರಿಷತ್‌ನ ಅಧ್ಯಕ್ಷ ಬಿ.ಎಲ್.ಶಂಕರ್ ಅವರನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗಣ್ಯರು ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಎಂ.ಎಚ್.ಚನ್ನೇಗೌಡ ವಿದ್ಯಾಸಂಸ್ಥೆಯ ಗೌರವಾಧ್ಯಕ್ಷ ಕೆ.ಟಿ.ಚಂದು, ಕಾರ್ಯದರ್ಶಿ ಸಿ.ಅಪೂರ್ವಚಂದ್ರ, ಖಜಾಂಚಿ ಜಿ.ಎಸ್.ಶಿವರಾಮ್, ಪುರಸಭಾಧ್ಯಕ್ಷೆ ಕೋಕಿಲಾ ಅರುಣ್, ನಿವೃತ್ತ ಪ್ರಾಂಶುಪಾಲ ಜಿ.ಎಸ್.ಶಂಕರೇಗೌಡ, ಪ್ರಾಂಶುಪಾಲರಾದ ಪ್ರಕಾಶ್, ಜಿ.ಎನ್.ಸುರೇಂದ್ರ, ಉಪ ಪ್ರಾಂಶುಪಾಲೆ ಜಿ.ಎಸ್.ನಂದಿನಿ ಇದ್ದರು.

blank
TAGGED:
Share This Article
blank

ತೂಕ ಇಳಿಸಿಕೊಳ್ಳಬೇಕೆಂದರೆ ಸಂಜೆ 7 ಗಂಟೆಯ ಮೊದಲು ಮಾತ್ರ ಊಟ ಮಾಡಿ! dinner

dinner :  ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕಾಗಿ ಅವರು ವ್ಯಾಯಾಮ…

ಹೊಳೆಯುವ ಚರ್ಮಕ್ಕಾಗಿ ಬಾಳೆಹಣ್ಣಿನ ಸಿಪ್ಪೆ! banana peel ಬಳಸುವ ಸರಳ ಮಾರ್ಗಗಳು ಇಲ್ಲಿವೆ…

 banana peel : ಬಾಳೆಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಅನೇಕ ಜನರು ಬಾಳೆಹಣ್ಣಿನಿಂದ ವಿವಿಧ ರುಚಿಕರವಾದ ಸಿಹಿತಿಂಡಿಗಳನ್ನು ಸಹ…

blank