ಅಬಕಾರಿ ಸಚಿವ ಸ್ಥಾನಕ್ಕೆ ನಾಗೇಶ್​ ರಾಜೀನಾಮೆ ಕೊಟ್ಟಿದ್ದಕ್ಕೆ ಸ್ವಕ್ಷೇತ್ರದಲ್ಲೇ ಪಟಾಕಿ ಸಿಡಿಸಿ ಸಂಭ್ರಮಾಚರಣೆ!

nagesh mulabagilu
Published on

ಕೋಲಾರ: ಅಬಕಾರಿ ಸಚಿವ ಸ್ಥಾನಕ್ಕೆ ಎಚ್​. ನಾಗೇಶ್ ರಾಜೀನಾಮೆ ಕೊಡುತ್ತಿದ್ದಂತೆ ಅವರ ಸ್ವಕ್ಷೇತ್ರದಲ್ಲೇ ಕೆಲವರು ಪಟಾಕಿ ಸಿಡಿಸಿ ತೆಂಗಿನ ಕಾಯಿ ಹೊಡೆಯುವ ಮೂಲಕ ಸಂಭ್ರಮಿಸಿದರು.

ಬಿಎಸ್​ವೈ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೆಲವೇ ಕ್ಷಣಗಳು ಬಾಕಿ ಇರುವಾಗಲೇ ಮುಳಬಾಗಿಲು ಕ್ಷೇತ್ರದ ಶಾಸಕ ಎಚ್.ನಾಗೇಶ್ ಅವರಿಗೆ ಸಚಿವ ಸ್ಥಾನದಿಂದ ಕೆಳಗಿಳಿಸಲಾಯಿತು. ಅಬಕಾರಿ ಸಚಿವ ಸ್ಥಾನಕ್ಕೆ ನಾಗೇಶ್​ ರಾಜೀನಾಮೆ ನೀಡುವ ವೇಳೆ ಮಾಜಿ ಶಾಸಕ‌ ಕೊತ್ತೂರು ಮಂಜುನಾಥ್ ಅವರ ಬೆಂಬಲಿಗರು ಕೋಲಾರ ಜಿಲ್ಲೆಯ ಮುಳಬಾಗಿಲು ಕ್ಷೇತ್ರದಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

ಮುಳಬಾಗಿಲು ನಗರದ ಸೌಂದರ್ಯ ಸರ್ಕಲ್​ನಲ್ಲಿ ಕೊತ್ತೂರು ಮಂಜುನಾಥ್ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು‌. ಇನ್ನು ಎಚ್.ನಾಗೇಶ್ ಅವರು ಸ್ಥಳೀಯವಾಗಿ ಸಾಕಷ್ಟು ಮುಖಂಡರ ವಿಶ್ವಾಸ ಕಳೆದುಕೊಂಡಿದ್ದರು. ಇನ್ನು ಕೇವಲ ಹದಿನೈದು ದಿನದಲ್ಲಿ ಮುಳಬಾಗಿಲು ಕ್ಷೇತ್ರಕ್ಕೆ ಬಂದು, ಕೊತ್ತೂರು ಮಂಜುನಾಥ್ ಅವರ ಸಹಾಯದಿಂದ ಶಾಸಕರಾಗಿದ್ದ ನಾಗೇಶ್, ಇತ್ತೀಚೆಗೆ ಕೊತ್ತೂರು ಮಂಜುನಾಥ್ ಅವರ ವಿಶ್ವಾಸವನ್ನೂ ಕಳೆದುಕೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net