More

    ಪ್ರಿಯಾಂಕಾ ನಾಯಕತ್ವ, ದೇವೇಗೌಡರ ರಾಜಕೀಯ ಭವಿಷ್ಯ ಕುರಿತು ವಿಶ್ವನಾಥ್ ಚಿಂತೆ!

    ಚನ್ನರಾಯಪಟ್ಟಣ: ಈಗ ಬಿಜೆಪಿಯಲ್ಲಿರುವ ಮಾಜಿ ಸಚಿವ ಎಚ್. ವಿಶ್ವನಾಥ್ ಅವರು ಮಂಗಳವಾರ ಕಾಂಗ್ರೆಸ್ ಪಕ್ಷದ ಭವಿಷ್ಯ, ಪ್ರಿಯಾಂಕಾ ಗಾಂಧಿ ನಾಯಕತ್ವ ಕುರಿತು ಪ್ರಸ್ತಾಪಿಸಿದ್ದಲ್ಲದೆ ಮಾಜಿ ಪ್ರಧಾನಿ ದೇವೇಗೌಡರು ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಿದ್ದನ್ನು ಬೆಂಬಲಿಸಿ ಅಚ್ಚರಿ ಮೂಡಿಸಿದರು.

    ತಾಲೂಕಿನ ಬರಗೂರು ಗ್ರಾಮದ ಹೊರ ವಲಯದಲ್ಲಿರುವ ಶ್ರೀ ಮಹಾಲಕ್ಷ್ಮೀ ದೇಗುಲಕ್ಕೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2020 ಡಿಸೆಂಬರ್ ತಿಂಗಳ ಅಂತ್ಯದೊಳಗೆ ರಾಜ್ಯವನ್ನು ಒಳಗೊಂಡಂತೆ ದೇಶದಲ್ಲಿ ಬಹುದೊಡ್ಡ ಮಟ್ಟದ ರಾಜಕೀಯ ಧ್ರುವೀಕರಣ ಸಂಭವಿಸಲಿದೆ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರಿಗಿಂತ ಪತ್ನಿಯೇ ಸಿರಿವಂತೆ…!

    ಪ್ರಸ್ತುತ ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಕಳೆದುಕೊಂಡಿದ್ದು ಸದ್ಯ ಇರುವಷ್ಟನ್ನೇ ಉಳಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. 2012ರಲ್ಲಿ ರಾಹುಲ್ ಗಾಂಧಿ ಬದಲಿಗೆ ಮತ್ತೊಬ್ಬರನ್ನು ಆಯ್ಕೆ ಮಾಡಿ ಎಂಬುದು ಕೆಲವರ ಅಭಿಪ್ರಾಯವಾಗಿತ್ತು. ಆದರೆ ಆಗಿದ್ದೇ ಬೇರೆ. ಕಾಂಗ್ರೆಸ್‌ನಲ್ಲಿ ಸದ್ಯಕ್ಕೆ ನಾಯಕರಿಲ್ಲ. ಅದು ಸದ್ಯದ ಪರಿಸ್ಥಿತಿಯಿಂದ ಹೊರ ಬರಲು ಬೇರೆ ಪಕ್ಷಗಳ ಜತೆ ಹೊಂದಾಣಿಕೆ ಮಾಡಿಕೊಳ್ಳುವುದು ಅಗತ್ಯವಿದೆ. ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಬೇಕೆಂದರೆ ಪ್ರಿಯಾಂಕಾ ಗಾಂಧಿ ಅವರ ನಾಯಕತ್ವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಅನುಭವದ ರಾಜಕೀಯ ದೇಶಕ್ಕೆ ಅತ್ಯಗತ್ಯವಾಗಿದೆ. ಅವರಂತಹ ಅನುಭವಿಗಳಿದ್ದಲ್ಲಿ ಮಾತ್ರ ದೇಶ ಅಭಿವೃದ್ಧಿ ಕಾಣಲು ಸಾಧ್ಯ. ರಾಜ್ಯಸಭೆ ಹಿರಿಯರಿಗೆ ಅವಕಾಶ ಕಲ್ಪಿಸಿಕೊಡುವಂತಹ ರಾಜಕೀಯ ವೇದಿಕೆ. ದೇಶಕ್ಕೆ ದೇವೇಗೌಡರಂತಹ ನಾಯಕರೊಬ್ಬರ ಅಗತ್ಯವಿದ್ದು ಅವರು ರಾಜ್ಯಸಭೆಗೆ ಆಯ್ಕೆಯಾಗಬೇಕು ಎಂದರು. ಇದನ್ನೂ ಓದಿ: ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರಕ್ಕೆ ಅಡ್ಡಿ ಮೇಲೆ ಅಡ್ಡಿ!

    ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಕೊವಿಡ್​-19 ಟೆಸ್ಟ್ ರಿಪೋರ್ಟ್​ನಲ್ಲಿ ಹೊರಬಿದ್ದ ಸತ್ಯವೇ ಬೇರೆ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts