More

    ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬೆಂಬಲಿಸುತ್ತಿದ್ದೇನೆ: ಎಚ್. ವಿಶ್ವನಾಥ್

    ಮೈಸೂರು: ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬೆಂಬಲಿಸುತ್ತಿದ್ದೇನೆ. ಸಮ್ಮಿಶ್ರ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಕ್ಕೆ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಪಶ್ಚಾತಾಪವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಮೈಸೂರಿನ ನ್ಯಾಯಾಲಯದ ಮುಂಭಾಗದಲ್ಲಿ ಮಾತನಾಡಿದ, ‘ನನಗೆ ಪಾಪ ಪ್ರಜ್ಞೆ ಕಾಡುತ್ತಿದೆ. ಪಾಪದ ಹೊರೆ ಇಳಿಸಿ ಕೊಳ್ಳಲು ಪಶ್ಚಾತಾಪ ಸತ್ಯಾಗ್ರಹ ಮಾಡುತ್ತಿದ್ದೇನೆ. ನಾನು ಬಿಜೆಪಿ ಪಕ್ಷದಿಂದ ವಿಧಾನ ಪರಿಷತ್ ಸದಸ್ಯನಾಗಿಲ್ಲ. ಸಾಹಿತ್ಯ ಕೋಟಾದಲ್ಲಿ ಎಂಎಲ್​ಸಿ ಆಗಿದ್ದೇನೆ. ಈ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಬೆಂಬಲಿಸುತ್ತಿದ್ದೇನೆ’ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದ್ದಾರೆ.

    ಇದನ್ನೂ ಓದಿ: ಕುಡಿದ ಅಮಲಿನಲ್ಲಿ ಸ್ನೇಹಿತನ ಗುಪ್ತಾಂಗ ಕತ್ತರಿಸಿದ ಗೆಳಯ!
    ಪಶ್ಚಾತಾಪ ಸತ್ಯಾಗ್ರಹ ಮಾಡುತ್ತಿದ್ದೇನೆ. ಡಬಲ್ ಇಂಜಿನ್ ಸರ್ಕಾರ ಇದ್ದರೆ ರಾಜ್ಯಕ್ಕೆ ಒಳಿತೆಂದು ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದೆವು. ಆದರೆ, ಬಿಜೆಪಿ ಸರರ್ಕಾರ ಪರಮ ಭ್ರಷ್ಟ ಸರ್ಕಾರವಾಗಿದೆ. ಇಂತಹ ಸರ್ಕಾರ ಬರಲು ನಾನು ಕಾರಣವಾಗಿದ್ದಕ್ಕೆ ನನಗೆ ಅತೀವ ನೋವಿದೆ ಎಂದು ಹೇಳಿ ಬೇಸರ ಹೊರಗಹಾಕಿದ್ದಾರೆ.

    ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾಗಿದ್ದ ಅಡಗೂರು ಎಚ್.ವಿಶ್ವನಾಥ್, 2018 ರ ಚುನಾವಣೆ ಬಳಿಕ ಅಸ್ಥಿತ್ವದಲ್ಲಿದ್ದ ಕಾಂಗ್ರೆಸ್- ಜೆಡಿಎಸ್ ಸರಕಾರ ಪತನಗೊಂಡು, ನೂತನವಾಗಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲು ಕಾರಣಕರ್ತರು. ಇದೀಗ ಬಿಜೆಪಿ ಸರಕಾರದ ತೀರ್ಮಾನಗಳ ವಿರುದ್ಧ ಎಚ್.ವಿಶ್ವನಾಥ್ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ

    ಕ್ಷಮಿಸಿ, ನಾನು ಅಷ್ಟೊಂದು ಒಳ್ಳೆಯವನಲ್ಲ..ವಾಟ್ಸ್​ಆ್ಯಪ್ ಸ್ಟೇಟಸ್ ಹಾಕಿ ಪ್ರಾಣ ಬಿಟ್ಟ ವಿದ್ಯಾರ್ಥಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts