ವಾಟ್ಸ್ಯಾಪ್ ಖಾತೆ ಹ್ಯಾಕ್ ಮಾಡಿ ವಂಚನೆ ಯತ್ನ

Published on

ಪುತ್ತೂರು: ವಾಟ್ಸ್ಯಾಪ್ ಖಾತೆಯನ್ನು ಹ್ಯಾಕ್ ಮಾಡಿ ಸಂಪರ್ಕ ಪಟ್ಟಿಯಲ್ಲಿದ್ದ ೧೦ಕ್ಕೂ ಅಽಕ ಆಪ್ತ ಸ್ನೇಹಿತರಿಗೆ ತುರ್ತು ಸಂದೇಶ ರವಾನಿಸಿ ಪತ್ರಿಕಾ ಉದ್ಯೋಗಿಗೆ ವಂಚಿಸಿರುವುದು ಬೆಳಕಿಗೆ ಬಂದಿದೆ. ವಂಚಕ, ಅರೆಬರೆ ಇಂಗ್ಲಿಷ್‌ನಲ್ಲಿ ನನ್ನ ಯುಪಿಐ ಕೆಲಸ ಮಾಡುತ್ತಿಲ್ಲ, ತೀರಾ ತುರ್ತಾಗಿ ೬೦ ಸಾವಿರ ರೂ. ಬೇಕಾಗಿದೆ. ಕೇವಲ ಎರಡು ಗಂಟೆಯೊಳಗೆ ವಾಪಸ್ ಮಾಡುತ್ತೇನೆ ಎಂದು ಅಂಗಲಾಚಿ ಸಂದೇಶ ರವಾನಿಸಿದ್ದಾನೆ. ಈ ಹಣವನ್ನು ಅವಿನಾಶ್ ಕುಮಾರ್ ಎಂಬಾತನ ಮೊಬೈಲ್ ಸಂಖ್ಯೆಗೆ ಕಳುಹಿಸುವಂತೆ ಸೂಚಿಸಿದ್ದಾನೆ. ಸಂಶಯಗೊಂಡ ಗೆಳೆಯರು ಕರೆ ಮಾಡಲು ಯತ್ನಿಸಿದಾಗ ಮೊಬೈಲ್ ಸಂಪರ್ಕಕ್ಕೆ ಲಭ್ಯವಾಗಿಲ್ಲ. ಘಟನೆಯಿಂದ ಆಘಾತಕ್ಕೊಳಗಾದ ಪತ್ರಿಕಾ ಉದ್ಯೋಗಿ ಪುತ್ತೂರು ನಗರ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net