More

    ಗವಿಸಿದ್ಧೇಶ್ವರ ಸ್ವಾಮಿ ರಥೋತ್ಸವ ಅದ್ದೂರಿ

    ಹೂವಿನಹಡಗಲಿ: ಪಟ್ಟಣದ ಗವಿಸಿದ್ಧೇಶ್ವರ ಮಠದ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ವಿಜೃಂಭಣೆಯಿಂದ ಜರುಗಿತು.

    ಗವಿಮಠದಿಂದ ಮೆರವಣಿಗೆಯಲ್ಲಿ ಸಾಗಿ ಬಂದ ಸ್ವಾಮಿಯ ಉತ್ಸವ ಮೂರ್ತಿ ರಥಕ್ಕೆ ಪ್ರದಕ್ಷಿಣೆ ಹಾಕಿದ ಬಳಿಕ ಪ್ರತಿಷ್ಠಾಪಿಸಲಾಯಿತು. ರಥಕ್ಕೆ ಪೂಜೆ, ಮಹಾ ಮಂಗಳಾರತಿ ನೆರವೇರಿಸಿ ರಥೋತ್ಸವಕ್ಕೆ ನೀಡಲಾಯಿತು. ಸಮಾಳ, ನಂದಿಕೋಲು, ಮಂಗಳವಾದ್ಯಗಳು ಮೆರುಗು ಹೆಚ್ಚಿಸಿದವು. ಪಟ್ಟಣ ಹಾಗೂ ಸುತ್ತಲಿನ ಗ್ರಾಮಗಳ ಭಕ್ತರು ರಥಕ್ಕೆ ಉತ್ತತ್ತಿ ತೂರಿ ಭಕ್ತಿ ಸಮರ್ಪಿಸಿದರು.

    ಲಿಂಗನಾಯ್ಕನಹಳ್ಳಿಯ ಚನ್ನವೀರ ಸ್ವಾಮೀಜಿ, ಗವಿಮಠದ ಡಾ.ಹಿರಿಶಾಂತವೀರ ಸ್ವಾಮೀಜಿ, ಹಿರೇಮಲ್ಲನಕೆರೆ ಮಠದ ಚನ್ನಬಸವ ಸ್ವಾಮೀಜಿ, ಹಂಪಸಾಗರದ ಅಭಿನವ ಶಿವಲಿಂಗ ರುದ್ರಮುನಿ ಸ್ವಾಮೀಜಿ, ಗದ್ದಿಕೇರಿಯ ಚರಂತೇಶ್ವರ ಸ್ವಾಮೀಜಿ, ಮೈನಳ್ಳಿಯ ಸಿದ್ಧೇಶ್ವರ ಸ್ವಾಮೀಜಿ, ಇಟಗಿಯ ಗುರುಶಾಂತ ಶಿವಾಚಾರ್ಯರು, ಅಳವಂಡಿಯ ಸಿದ್ಧಲಿಂಗ ಸ್ವಾಮೀಜಿ ಇತರರಿದ್ದರು. ಇದ್ದಕ್ಕೂ ಮೊದಲು ಶ್ರೀಮಠದಲ್ಲಿ ಮಾನಿಹಳ್ಳಿಯ ಮಳೆಯೋಗೀಶ್ವರ ಶ್ರೀಗಳು ಜಂಗಮ ವಟುಗಳಿಗೆ ಅಯ್ಯಚಾರ ಶಿವದೀಕ್ಷೆ ನೀಡಿದರು. ಸಾಮೂಹಿಕ ವಿವಾಹ ನಡೆಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts