Monday, 12th November 2018  

Vijayavani

ಕಳಚಿತು ರಾಜಕೀಯ ರಂಗದ ಮತ್ತೊಂದು ಕೊಂಡಿ- ಬಾರದ ಲೋಕಕ್ಕೆ ಅನಂತ್ ಕುಮಾರ್ ಪಯಣ - ಶೋಕದ ಕಡಲಲ್ಲಿ ಬಿಜೆಪಿ ಪಾಳಯ        ಅಗಲಿದ ನಾಯಕನ ಅಂತಿಮ ದರ್ಶನ- ಇನ್ನು ಕೆಲವೇ ಹೊತ್ತಲ್ಲಿ ಬೆಂಗಳೂರಿಗೆ ಪ್ರಧಾನಿ ಆಗಮನ- ಅದಮ್ಯ ಚೇತನ ನೇತಾರನ ಗುಣಗಾನ        ನಾಳೆ ವೈದಿಕ ಸಂಪ್ರದಾಯದಂತೆ ಅಂತ್ಯಸಂಸ್ಕಾರ- ಬೆಳಗ್ಗೆ 8ಗಂಟೆಯಿಂದ ಸಾರ್ವಜನಿಕ ದರ್ಶನ - ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳೋರಿಗಾಗಿ ವಿಶೇಷ ರೈಲು        ಜೈಲು ಹಕ್ಕಿಯಾಗಿರೋ ರೆಡ್ಡಿಗೆ ಸಿಗುತ್ತಾ ಜಾಮೀನು- ನಾಳೆ ನಡೆಯಲಿದೆ ಅರ್ಜಿ ವಿಚಾರಣೆ- ಪರಪ್ಪರ ಅಗ್ರಹಾರದಲ್ಲಿ ದಿನಕಳೆದ ನಾಯಕ        ಸಿಲಿಕಾನ್ ಸಿಟಿಯಲ್ಲಿ ಎದೆ ಝಲ್ಲೆನಿಸುವ ಘಟನೆ- ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು- ಡೆತ್​ನೋಟ್ ಬರೆದಿಟ್ಟು ಸೂಸೈಡ್        ಕಾರ್ತಿಕ ಮಾಸದ ಮೊದಲ ಸೋಮವಾರ- ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ- ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಂದಿಮೂರ್ತಿಗೆ ರುದ್ರಾಭಿಷೇಕ       
Breaking News

ಹಡಪದ ಅಪ್ಪಣ್ಣ ಜಯಂತಿ

Friday, 27.07.2018, 10:30 PM       No Comments

ಹಾವೇರಿ: ಹಡಪದ ಸಮಾಜದವರು ರಾಜಕೀಯ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದಿದ್ದು, ವಿದ್ಯಾವಂತರಾದರೆ ಮುಂದಿನ ದಿನಗಳದಲ್ಲಿ ಬದಲಾವಣೆ ಸಾಧ್ಯ ಎಂದು ಶಾಸಕ ನೆಹರು ಓಲೇಕಾರ ಹೇಳಿದರು.

ನಗರದ ಜಿಲ್ಲಾ ಗುರುಭವನದಲ್ಲಿ ಶುಕ್ರವಾರ ಜರುಗಿದ ಹಡಪದ ಅಪ್ಪಣ್ಣ ಜಯಂತಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಂತಮನೆ ಹಾಗೂ ನಿವೇಶನ ಇಲ್ಲದವರಿಗೆ ಸ್ವಂತ ಸೂರು ಕಲ್ಪಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಮೋದಿಯವರು ಯೋಜನೆ ರೂಪಿಸಿದ್ದಾರೆ. ಹಡಪದ ಸಮಾಜದ ಬಾಂಧವರು ಗ್ರಾಮ ಪಂಚಾಯಿತಿಗಳಲ್ಲಿ ತಮ್ಮ ಆಧಾರ್ ಕಾರ್ಡ್ ಹಾಗೂ ಮತದಾನ ಗುರುತಿನ ಚೀಟಿಯನ್ನು ನೀಡಿ ಹೆಸರು ನೋಂದಾಯಿಸಬೇಕು. ಅರ್ಹರಿಗೆ ಮುಂದಿನ ದಿನಗಳಲ್ಲಿ ಮನೆ ಹಾಗೂ ನಿವೇಶನ ಮಂಜೂರಿ ಮಾಡಿಸಲಾಗುವುದು ಎಂದು ಭರವಸೆ ನೀಡಿದರು.

ಸಾಹಿತಿ ಹನುಮಂತಗೌಡ ಗೊಲ್ಲರ ಉಪನ್ಯಾಸ ನೀಡಿ, ದಾರ್ಶನಿಕರು ಜಾತಿ ಸ್ವರೂಪರಲ್ಲ, ಜ್ಯೋತಿ ಸ್ವರೂಪರು. ಅವರನ್ನು ಒಂದು ಜಾತಿಗೆ ಸೀಮಿತಗೊಳಿಸಬಾರದು. 12ನೇ ಶತಮಾನದಲ್ಲಿ ಬಸವಣ್ಣನವರ ಧ್ವನಿ ಇಲ್ಲದವರಿಗೆ ಧ್ವನಿ ನೀಡಿದ್ದಾರೆ. ಅಂತಹ ಬಸವಣ್ಣನವರೊಂದಿಗೆ ಕೊನೆಯ ತನಕ ಇದ್ದವರು ಹಾಗೂ ಬಸವಣ್ಣನವರಿಗೆ ಪ್ರಿಯರಾದವರು ಹಡದಪ ಅಪ್ಪಣ್ಣ ಎಂದರು.

ಹಡಪದ ಅಪ್ಪಣ್ಣ ಸಮಾದ ಸೇವಾ ಸಂಘದ ಜಿಲ್ಲಾಧ್ಯಕ್ಷ ಗುಡ್ಡಪ್ಪ ಮಲ್ಲೂರ ಮಾತನಾಡಿದರು. ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ನಗರಸಭೆ ಅಧ್ಯಕ್ಷೆ ಪಾರ್ವತೆಮ್ಮ ಹಲಗಣ್ಣನವರ, ತಹಸೀಲ್ದಾರ್ ಜೆ.ಬಿ. ಮಜ್ಜಗಿ, ಸಮಾಜದ ಮುಖಂಡರಾದ ಜಯಣ್ಣ ಶೆಟ್ಟರ, ಚನಬಸಪ್ಪ ಹಡಪದ, ಈರಪ್ಪ, ಬಾಬಣ್ಣ ಕ್ಯಾಲಕೊಂಡ, ಬಸವರಾಜ ಕಾಯಕದ, ಶಿವಯೋಗೆಪ್ಪ ದೇವಗಿರಿ, ಬಸವರಾಜ ಹಡಪದ, ಮುತ್ತರಾಜ, ಬಸವರಾಜ ದೊಡ್ಡಮನಿ, ಮಲ್ಲಿಕಾರ್ಜುನ ಸಾತೇನಹಳ್ಳಿ, ನಾಗರಾಜ ಬಸೇಗಣ್ಣಿ, ನಗರಸಭೆ ಮಾಜಿ ಅಧ್ಯಕ್ಷ ಜಗದೀಶ ಮಲಗೋಡ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗಿರೀಶ ತುಪ್ಪದ ಇತರರಿದ್ದರು.

ವಕೀಲ ನಾಗರಾಜ ಕಾಯಕದ ಸ್ವಾಗತಿಸಿದರು. ನಂತರ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಪಡೆದ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಹಡಪದ ಅಪ್ಪಣ್ಣನವರ ಭಾವಚಿತ್ರದ ಅದ್ದೂರಿ ಮೆರವಣಿಗೆ ನಡೆಸಲಾಯಿತು.

Leave a Reply

Your email address will not be published. Required fields are marked *

Back To Top