More

    ಬಿಜೆಪಿ ಸರ್ಕಾರದಿಂದ ಹಿಂದುಗಳಿಗೆ ರಕ್ಷಣೆಯಿಲ್ಲ

    ಹಗರಿಬೊಮ್ಮನಹಳ್ಳಿ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಪಟ್ಟಣದ ತಹಸಿಲ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಹಿಂದು ಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಉಪತಹಸೀಲ್ದಾರ್ ಅನ್ನದಾನೇಶ್ವರಗೆ ಗುರುವಾರ ಮನವಿ ಸಲ್ಲಿಸಿದರು.

    ಹಿಂದು ಸಂಘಟಕ ಎ.ಚಂದ್ರಶೇಖರ್ ಮಾತನಾಡಿ, ದೇಶ ಹಾಗೂ ರಾಜ್ಯದಲ್ಲಿ ಹಿಂದುಗಳು ಸುರಕ್ಷಿತವಾಗಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಇದಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಹಿಂದುಗಳ ಮೇಲಿನ ನಿರ್ಲಕ್ಷ್ಯವೇ ಕಾರಣವಾಗಿದೆ. ಹಿಂದು ಸಂಘಟಕರನ್ನು ಗುರಿಯಾಗಿಸಿ ಅನ್ಯ ಕೋಮಿನವರು ಹಾಗೂ ಭಯೋತ್ಪಾದಕ ನಂಟಿರುವ ಸಂಘಟನೆಗಳು ಹತ್ಯೆ ಮಾಡುತ್ತಿರುವುದು ಮೇಲ್ನೋಟಕ್ಕೆ ಕಂಡರೂ ಸರ್ಕಾರಗಳು ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಬಿಜೆಪಿ ಸರ್ಕಾರಗಳು ಹಿಂದುಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದರೂ ಹಿಂದುಗಳಿಗೆ ರಕ್ಷಣೆ ನೀಡುವಲ್ಲಿ ವಿಫಲರಾಗಿರುವುದು ನಾಚಿಕೆಗೇಡಿನ ಸಂಗತಿ. ಈ ಸರ್ಕಾರಕ್ಕೆ ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಮುಖಂಡ ಇ.ಭರತ್, ಬಜರಂಗದಳ ಸಂಚಾಲಕ ಸಂಪತ್‌ಮೂರ್ತಿ, ಪುರಸಭೆ ಸದಸ್ಯ ಜೋಗಿ ಹನುಮಂತ ಮಾತನಾಡಿದರು. ಪುರಸಭೆ ಸದಸ್ಯರಾದ ಕೆ.ಎಂ.ನವೀನ್ ಇತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts