ಹಗರಿಬೊಮ್ಮನಹಳ್ಳಿ: ತಾಲೂಕಿನ ಹಳೇ ಮುಟುಗನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಮಿನಿ ವಿಜ್ಞಾನ ಕೇಂದ್ರದಿಂದ ಇತ್ತೀಚೆಗೆ ವಿದ್ಯಾರ್ಥಿಗಳಿಗೆ ಬೇಸಿಗೆಯ ಉಚಿತ ಶಿಬಿರ ಆಯೋಜಿಸಲಾಗಿತ್ತು.

ರಾಜ್ಯ ಸರ್ಕಾರಿ ನೌಕರ ಸಂಘದ ತಾಲೂಕು ಕಾರ್ಯದರ್ಶಿ ಟಿ.ಸೋಮಶೇಖರ ಮಾತನಾಡಿ, ಶೈಕ್ಷಣಿಕ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿನ ಪ್ರತಿಭೆ ಗುರುತಿಸುವ ಅವಕಾಶ ಶಿಬಿರಗಳಿಂದ ಸಾಧ್ಯವಾಗುತ್ತದೆ. ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳುವುದರ ಜತೆಗೆ ಕಲಿಕೆಯಲ್ಲಿ ಆಸಕ್ತಿ ತೋರಬೇಕು ಎಂದು ಕರೆ ನೀಡಿದರು.
ಸಿಆರ್‌ಪಿ ರೇವಣ್ಣ, ಆಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನದ ಕಾರ್ಯಕ್ರಮಾಧಿಕಾರಿ ಸಿ.ಯೋಗಾನಂದ, ಶಿಕ್ಷಕರಾದ ಮೋಹನ್ ಅಣಜಿ, ಮಲ್ಲಿಕಾರ್ಜುನ್, ಕೆ.ಎಂ.ಗಂಗಾಧರಯ್ಯ, ಗುರುಬಸವರಾಜ, ಹೊಸಮನೆ ಚನ್ನಬಸಪ್ಪ ಇತರರಿದ್ದರು.