More

    ಕಲುಷಿತ ನೀರು ಪೂರೈಕೆಯಾಗದಂತೆ ನಿಗಾ ವಹಿಸಿ

    ಹಗರಿಬೊಮ್ಮನಹಳ್ಳಿ: ಗ್ರಾಮೀಣ ಭಾಗದಲ್ಲಿ ಕಲುಷಿತ ನೀರು ಪೂರೈಕೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆವಿರುವ ಹಿನ್ನೆಲೆಯಲ್ಲಿ ನೀರು ಪರೀಕ್ಷೆ ಮಾಡಿದ ಮೇಲೆ ಪೂರೈಕೆ ಮಾಡುವಂತೆ ತಾಪಂ ಇಒ ಡಾ.ಜಿ.ಪರಮೇಶ್ವರ ತಿಳಿಸಿದರು.

    ಪಟ್ಟಣದ ತಾಪಂ ಮಹಾತ್ಮಗಾಂಧಿ ಸಭಾಂಗಣದಲ್ಲಿ ಜಿಪಂ, ತಾಪಂ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕೇಂದ್ರ ಸರ್ಕಾರದ ಪ್ರಾಯೋಜಿತ ಜಲ ಜೀವನ ಮಿಷನ್ ಯೋಜನೆಯ ಅನುಷ್ಠಾನ ಬೆಂಬಲ ಸಂಪನ್ಮೂಲ ಸಂಸ್ಥೆ ಶ್ರೀನಾರದಮುನಿ ಸೇವಾ ಸಂಸ್ಥೆ ಸಹಭಾಗಿತ್ವದಲ್ಲಿ ಗ್ರಾಮ ನೀರು, ನೈರ್ಮಲ್ಯ ಸಮಿತಿ ಸದಸ್ಯರಿಗೆ ಗ್ರಾಪಂ ನೀರಘಂಟಿಗಳಿಗೆ ಆಯೋಜಿಸಿದ್ದ ಕ್ಷೇತ್ರ ಪರೀಕ್ಷಾ ಕಿಟ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕುಡಿಯುವ ನೀರು ನೈರ್ಮಲ್ಯಯುತವಾಗಿದ್ದರೆ ಮಾತ್ರ ಸಾರ್ವಜನಿಕರಿಗೆ ಪೂರೈಕೆ ಮಾಡಿ. ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಗ್ರಾಪಂ ಸಿಬ್ಬಂದಿಗಳು ನಿಗಾವಹಿಸಬೇಕು ಎಂದರು.

    ಗ್ರಾ.ಕು.ನೀ.ನೈ ಇಲಾಖೆ ಜೆಇ ನಂದೀಶ್ ಮಾತನಾಡಿ, ಜಲ ಜೀವನ ಮಿಷನ್ ಯೋಜನೆಯಡಿ ಮನೆ ಮನೆಗೆ ನಳ ಸಂಪರ್ಕ ಕಲ್ಪಿಸಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಪೂರೈಕೆ ಹಂತದಲ್ಲಿ ನೀರಿನ ಗುಣಮಟ್ಟ ಪರೀಕ್ಷೆ ಮಾಡಬೇಕು. ಇದಕ್ಕಾಗಿ ತಾಲೂಕಿನ 21 ಗ್ರಾಮ ಪಂಚಾಯಿತಿಗಳಿಗೆ ಕುಡಿಯುವ ನೀರು ಪರೀಕ್ಷಿಸುವ ಕಿಟ್ ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.

    ತಾಪಂ ಪಂಚಾಯತ್‌ರಾಜ್ ಎಡಿ ರಮೇಶ ಮಹಾಲಿಂಗಪುರ, ಭೂವಿಜ್ಞಾನಿ ವೆಂಕಟೇಶ್, ತಾಲೂಕಿನ ಎಲ್ಲ ಗ್ರಾಪಂ ಪಿಡಿಗಳು, ನೀರು, ನೈರ್ಮಲ್ಯ ಸಮಿತಿ ಸದಸ್ಯರು, ನೀರಘಂಟಿಗಳು ಸೇರಿದಂತೆ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts