23.2 C
Bangalore
Saturday, December 14, 2019

ನಗರದಲ್ಲಿ ಧಾರಾಕಾರ ಆಲಿಕಲ್ಲು ಮಳೆ

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ಮೈಸೂರು: ನಗರಾದ್ಯಂತ ಗುರುವಾರ ಸಂಜೆ ಸುರಿದ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿತು. ಜೋರು ಗಾಳಿಯೊಂದಿಗೆ ಧಾರಾಕಾರ ಆಲಿಕಲ್ಲು ಮಳೆ ಸುರಿದ ಪರಿಣಾಮ ಅನೇಕ ಕಡೆ ಮರಗಳು ಧರೆಗುರುಳಿ, ಅಪಾರ ಹಾನಿ ಸಂಭವಿಸಿದೆ.

ಬೆಳಗ್ಗೆಯಿಂದ ಬಿರು ಬಿಸಿಲು ಇತ್ತಾದರೂ, ಸಂಜೆಯಾಗುತ್ತಿದ್ದಂತೆ ಕಾರ್ಮೋಡ ಕವಿದು ಜೋರು ಗಾಳಿ ಬೀಸಲು ಆರಂಭವಾಯಿತು. ಜತೆಯಲ್ಲಿ ಮಳೆಯೂ ಆರಂಭವಾಗಿ ಒಂದು ಗಂಟೆಗೂ ಹೆಚ್ಚು ಕಾಲ ಸುರಿಯಿತು. ಸಂಜೆ 5.30ರ ಸುಮಾರಿಗೆ ಆಗಮಿಸಿದ ಮಳೆರಾಯ ಭಾರೀ ಗಾಳಿಯೊಂದಿಗೆ 6.30 ಗಂಟೆವರೆಗೂ ಸುರಿದ. ನಡುವೆ ಗುಡುಗು ಸಿಡಿಲು ನಾಗರಿಕರನ್ನು ಬೆಚ್ಚಿ ಬೀಳುವಂತೆ ಮಾಡಿತು. ಬಳಿಕ, ಕೆಲ ಕಾಲ ಸಣ್ಣ ಹನಿಯೊಂದಿಗೆ ಮಳೆ ಮುಂದುವರಿಯಿತು. ಜೋರು ಮಳೆ ಸುರಿದ ಪರಿಣಾಮ ತಗ್ಗು ಪ್ರದೇಶಕ್ಕೆ ನೀರು ಹರಿಯಿತು.
ಹಿಂಗಾರಿನಲ್ಲಿ ಈಗಾಗಲೇ ಕೆಲವು ರೈತರು ಮಾವಿನಕಾಯಿ ಹಾಗೂ ತರಕಾರಿ ಬೆಳೆದಿದ್ದು, ಅವರಿಗೆ ಈ ಮಳೆ ಸಂಕಷ್ಟ ತಂದೊಡ್ಡಿದ್ದರೆ, ಭತ್ತ ಬೆಳೆಯಲು ಸಿದ್ಧಮಾಡಿಕೊಂಡಿರುವ ಅನ್ನದಾತನಿಗೆ ಮುಂಗಾರು ಪೂರ್ವ ಮಳೆ ಹೊಸ ಆಶಾವಾದ ಮೂಡಿಸಿದೆ.

ಆಲಿಕಲ್ಲು ತಿಂದು ಸಂಭ್ರಮ: ಪೂರ್ವ ಮುಂಗಾರು ಮಳೆಯಲ್ಲಿ ಇದೇ ಮೊದಲ ಬಾರಿಗೆ ನಗರದಲ್ಲಿ ಆಲಿಕಲ್ಲು ಮಳೆ ಸುರಿದಿದ್ದು, ಮಳೆ ಆರಂಭವಾಗುತ್ತಿದ್ದಂತೆ ಇಪ್ಪತ್ತು ನಿಮಿಷಕ್ಕೂ ಹೆಚ್ಚಕಾಲ ಭಾರಿ ಆಲಿಕಲ್ಲುಗಳು ಧರೆಗೆ ಅಪ್ಪಳಿಸಿದವು. ಮನೆ ಅಂಗಳದಲ್ಲಿ ಆಲಿಕಲ್ಲುಗಳು ದಪದಪನೆ ಬೀಳುತ್ತಿದ್ದಂತೆ ಮಕ್ಕಳು ಅದನ್ನು ಸವಿದು ಸಂಭ್ರಮಿಸಿದರು. ಇನ್ನು ರಸ್ತೆಯಲ್ಲಿ ಹರಡಿಕೊಂಡು ನೀರಾಗುತ್ತಿದ್ದ ಆಲಿಕಲ್ಲುಗಳು ನೋಡುಗರಿಗೆ ಮುದ ನೀಡುತ್ತಿದ್ದವು.

ಮಳೆಯಿಂದ ಹಾನಿ: ಶಾರದಾದೇವಿನಗರದ ಶಾರದಾಂಬೆ ಪಾರ್ಕ್ ಬಳಿ ಎರಡು ಮರಗಳು ಬಿದ್ದ ಪರಿಣಾಮ ವಿದ್ಯುತ್ ಕಂಬ ಧರೆಗುರುಳಿತು. ಪರಿಣಾಮ ಶಾರದಾದೇವಿನಗರದ ಸುತ್ತ-ಮುತ್ತಲಿನ ಪ್ರದೇಶದ ವಿದ್ಯುತ್ ಸಂಪರ್ಕ ಕಡಿತಗೊಂಡಿತು. ಚಾಮರಾಜಪುರಂನ ಜಯಲಕ್ಷ್ಮೀವಿಲಾಸ ರಸ್ತೆಯಲ್ಲಿ ಬಳಿ ಮರವೊಂದು ಬೈಕ್‌ಗಳ ಮೇಲೆ ಬಿದ್ದು, ಬೈಕ್‌ಗಳು ಜಖಂಗೊಂಡಿದೆ.

ಕುಕ್ಕರಹಳ್ಳಿ ಶಾಲೆಯ ಪಕ್ಕ ಒಂದು, ಈಜುಕೊಳ್ಳದ ರಸ್ತೆಯಲ್ಲಿ ನಾಲ್ಕು ಮರಗಳು ಧರೆಗುರುಳಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸರಸ್ವತಿಪುರಂನ ಅಗ್ನಿಶಾಮಕದಳದ ಮುಂದೆ ಮರವೊಂದರ ಜತೆಗೆ ವಿದ್ಯುತ್ ಕಂಬವೂ ಧರೆಗುರುಳಿದೆ. ಕೆ.ಜಿ.ಕೊಪ್ಪಲು, ಸರಸ್ವತಿಪುರಂ ಭಾಗದಲ್ಲಿ ವಿದ್ಯುತ್ ಕಡಿತಗೊಂಡಿತು. ಬುಲೇವಾರ್ಡ್ ರಸ್ತೆಯಲ್ಲಿ 2 ವಿದ್ಯುತ್ ಕಂಬ ಬಿದ್ದ ಕಾರಣ ಅಶೋಕಪುರಂ, ಕೃಷ್ಣಮೂರ್ತಿಪುರಂ, ವಿದ್ಯಾರಣ್ಯಪುರಂ ಸೇರಿದಂತೆ ಸುತ್ತ-ಮುತ್ತಲಿನ ಭಾಗ ವಿದ್ಯುತ್ ಕಡಿತಗೊಂಡಿತು.

ಇನ್ನು ರೈಲ್ವೆ ನಿಲ್ದಾಣ, ಕುವೆಂಪುನಗರ, ಗೀತಾ ರಸ್ತೆ, ಜೆ.ಪಿ.ನಗರ, ಕೌಟಿಲ್ಯ ರಸ್ತೆಗಳಲ್ಲಿ ಮರಗಳು ಧರೆಗುರುಳಿದವು. ಅನಘ ಆಸ್ಪತ್ರೆ ಬಳಿ ಮಳೆಗೆ ಮರವೊಂದು ಕಾರಿನ ಮೇಲೆ ಬಿದ್ದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾರು ಸ್ವಲ್ಪ ಪ್ರಮಾಣದಲ್ಲಿ ಜಖಂಗೊಂಡಿದೆ. ಕುವೆಂಪುನಗರದ ಉದಯರವಿ ರಸ್ತೆ, ಕಾವೇರಿ ಶಾಲೆ ಮತ್ತು ಕೆ.ಆರ್.ಮೊಹಲ್ಲಾ ವೀಣೆ ಶೇಷಣ್ಣ ರಸ್ತೆಯ 7ನೇ ಕ್ರಾಸ್ ಬಳಿ ಮರ ಬಿದ್ದಿದ್ದು, ವಿದ್ಯುತ್ ತಂತಿ ಹರಡಿ ಅಪಾಯಕ್ಕೆ ಆಹ್ವಾನ ನೀಡುವಂತಿತ್ತು. ಅಲ್ಲದೆ, ನಗರದ ಶಾಂತಲಾ ಚಿತ್ರಮಂದಿರದ ನಾರಾಯಣಶಾಸ್ತ್ರಿ ರಸ್ತೆ ಬಳಿ ಮರದ ಜತೆಗೆ ವಿದ್ಯುತ್ ಕಂಬ ಧರೆಗುರುಳಿ ತಂತಿಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿದ್ದವು. ಲೋಕೋಪಯೋಗಿ ಕಚೇರಿಗೆಗೂ ನೀರು ನುಗ್ಗಿತು. ಮಂಡಿಮೊಹಲ್ಲಾದ ಬಳಿಯೂ ವಿದ್ಯುತ್ ಕಂಬ ರಸ್ತೆ ಬದಿಗೆ ಬಿದ್ದಿತ್ತು. ರಸ್ತೆಯಲ್ಲಿ ಬಿದ್ದ ಮರಗಳ ಕೊಂಬೆಯನ್ನು ಪಾಲಿಕೆಯ ಮೂರು ಅಭಯ ತಂಡದ ಸಿಬ್ಬಂದಿ ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

ನಗರದ ಪ್ರಮುಖ ರಸ್ತೆಗಳು, ಮೋರಿ, ಒಳಚರಂಡಿ ಹಾಗೂ ಮ್ಯಾನ್‌ಹೋಲ್‌ಗಳಲ್ಲಿ ನೀರು ಉಕ್ಕಿ ಹರಿಯಿತು. ರಸ್ತೆಯಲ್ಲಿ ಹೆಚ್ಚು ನೀರು ಹರಿದ ಪರಿಣಾಮ ಕೆಲ ಸಮಯ ವಾಹನ ಸಂಚಾರ ಸ್ಥಗಿತಗೊಂಡಿತು. ದ್ವಿಚಕ್ರ ವಾಹನ ಸವಾರರು ಅಂಗಡಿ ಮುಂಗಟ್ಟುಗಳ ಮುಂದೆ ನಿಂತಿದ್ದರು. ಕನಕಗಿರಿ, ಗಾಂಧಿನಗರದಲ್ಲಿ ಕೆಲವು ಮನೆಗಳಿಗೆ ಒಳಚರಂಡಿ ನೀರು ನುಗ್ಗಿತು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...