More

    ಹಜ್‌ಗೆ ನೇರ ವಿಮಾನ ಅವಕಾಶ ರದ್ದು

    ಮಂಗಳೂರು: ಮುಸ್ಲಿಮರ ಪವಿತ್ರ ಹಜ್ ಯಾತ್ರೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇರ ಪ್ರಯಾಣ ಅವಕಾಶವನ್ನು ಪ್ರಸಕ್ತ ಸಾಲಿನಲ್ಲಿ ರದ್ದುಪಡಿಸಲಾಗಿದೆ.

    ಕೋವಿಡ್ ಸಾಂಕ್ರಾಮಿಕದ ಬಳಿಕ ಮತ್ತೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಜ್ ಯಾತ್ರೆಗೆ ತೆರಳಲು ಯಾತ್ರಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಹಜ್ ಯಾತ್ರೆಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿಯೂ ಯಾತ್ರಿಗಳಿಗೆ ತಮ್ಮ ಅನುಕೂಲಕ್ಕೆ ತಕ್ಕಂತೆ ವಿಮಾನ ಹತ್ತುವ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿತ್ತು. ಆದರೆ ಭಾರತೀಯ ಹಜ್ ಸಮಿತಿಯು ದೇಶದ ವಿವಿಧ ರಾಜ್ಯಗಳಲ್ಲಿನ ವಿಮಾನ ಹತ್ತುವ ಕೇಂದ್ರಗಳನ್ನು ರದ್ದು ಪಡಿಸಿದ್ದು, ಇದರಲ್ಲಿ ಮಂಗಳೂರು ವಿಮಾನ ನಿಲ್ದಾಣದ ಕೇಂದ್ರ ಕೂಡ ಸೇರಿದೆ.

    ರಾಜ್ಯದ ಹಜ್ ಯಾತ್ರಿಗಳು ಬೆಂಗಳೂರು, ಮಂಗಳೂರು, ಗೋವಾ ಹಾಗೂ ಹೈದರಾಬಾದ್ ಮೂಲಕ ಹಜ್ ಯಾತ್ರೆಗೆ ತೆರಳುತ್ತಿದ್ದರು. ಇದೀಗ ಮಂಗಳೂರು ಎಂಬಾರ್ಕೇಷನ್ ಪಾಯಿಂಟ್ ರದ್ದು ಮಾಡುವುದರಿಂದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಯ ಯಾತ್ರಿಗಳು ತೊಂದರೆಗೆ ಸಿಲುಕಿದ್ದು, ಭಾರತೀಯ ಹಜ್ ಸಮಿತಿಯು ಈ ಐದು ಜಿಲ್ಲೆಗಳ ಯಾತ್ರಿಗಳಿಗೆ ಕೇರಳದ ಕಣ್ಣೂರು, ಕೊಚ್ಚಿ, ಬೆಂಗಳೂರು ಹಾಗೂ ಚೆನ್ನೈ ಈ ಎಂಬಾರ್ಕೇಷನ್ ಪಾಯಿಂಟ್ ಆಯ್ಕೆ ಮಾಡಿಕೊಳ್ಳಲು ಸೂಚಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts