ರಾಣೆಬೆನ್ನೂರ: ತಾಲೂಕಿನ ದೊಡ್ಡ ಗ್ರಾಮ ಎಂದು ಕರೆಯಿಸಿಕೊಳ್ಳುವ ಹಲಗೇರಿ ಗ್ರಾಮದ ಪೊಲೀಸ್ ಠಾಣೆ ಪಕ್ಕದ ರಸ್ತೆ ಕಳೆದ 10 ವರ್ಷದಿಂದ ಡಾಂಬರೀಕರಣ ಕಾಣದ ಕಾರಣ ಮಳೆಗಾಲದಲ್ಲಿ ಜನತೆ ಓಡಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಗ್ರಾಮದ ಕೆಲ ಭಾಗದಲ್ಲಿ ಸಿಸಿ ರಸ್ತೆಗಳನ್ನು ಮಾಡಲಾಗಿದೆ. ಆದರೆ, ಪೊಲೀಸ್ ಠಾಣೆ ಪಕ್ಕದ ರಸ್ತೆಯನ್ನು ಮಾತ್ರ ಅಭಿವೃದ್ಧಿ ಪಡಿಸಿಲ್ಲ. ಇದರಿಂದಾಗಿ ಮಳೆಗಾಲದಲ್ಲಿ ರಸ್ತೆ ನಡುವೆ ನೀರು ನಿಂತು ಕೆಸರು ಗದ್ದೆಯಂತಾಗುತ್ತಿದೆ. ಹೀಗಾಗಿ ನಿತ್ಯವೂ ಶಾಲಾ&ಕಾಲೇಜ್ ವಿದ್ಯಾಥಿರ್ಗಳನ್ನು ಪಾಲಕರು ಹೆಗಲ ಮೇಲೆ ಹೊತ್ತುಕೊಂಡು ಬಂದು ಮುಖ್ಯ ರಸ್ತೆ ಬಳಿ ಬಿಡಬೇಕಿದೆ.
ಅಲ್ಲದೆ ರೈತರು ಈ ರಸ್ತೆ ಮಾರ್ಗವಾಗಿ ಎತ್ತು, ಚಕ್ಕಡಿ ತೆಗೆದುಕೊಂಡು ಹೋಗುವುದನ್ನು ಬಿಟ್ಟಿದ್ದಾರೆ. ರಸ್ತೆಯುದ್ದಕ್ಕೂ ಅಕ್ಕಪಕ್ಕದಲ್ಲಿ ಮನೆ ನಿಮಿರ್ಸಿಕೊಂಡಿರುವ ಜನತೆ ಮಳೆಗಾಲದಲ್ಲಿ ಮನೆಯಿಂದ ಹೊರಗೆ ಬಾರದ ದುಸ್ಥಿತಿ ಎದುರಾಗಿದೆ. ರಾತ್ರಿ ಸಮಯದಲ್ಲಿ ಮನೆಗೆ ಬರುವ ನಿವಾಸಿಗಳು ಕೆಸರಿನಲ್ಲಿ ಬಿದ್ದು ಮನೆ ಸೇರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇಲ್ಲಿನ ನಿವಾಸಿಗಳು ಬೈಕ್, ಕಾರುಗಳನ್ನು ಮುಖ್ಯ ರಸ್ತೆಯಲ್ಲಿಯೆ ಇಟ್ಟು ಕೆಸರಿನಲ್ಲಿ ಹೊರಳಾಡುತ್ತ ನಡೆದುಕೊಂಡು ಹೋಗಿ ಮನೆ ಸೇರಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ಬೇರೆಡೆ ಸಿಸಿ ರಸ್ತೆಗಳನ್ನು ನಿಮಿರ್ಸಿದ್ದಾರೆ. ಆದರೆ, ಈ ಭಾಗದಲ್ಲಿ ಮಾತ್ರ ಯಾರೋಬ್ಬರು ಗಮನ ಹರಿಸುತ್ತಿಲ್ಲ ಎಂಬುದು ಗ್ರಾಮಸ್ಥರ ಆರೋಪವಾಗಿದೆ.
ಮುಂದಿನ ದಿನದಲ್ಲಾದರೂ ಗ್ರಾಪಂ ಹಾಗೂ ಜಿಪಂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ರಸ್ತೆಗೆ ಕಾಂಕ್ರಿಟ್ ಅಥವಾ ಡಾಂಬರೀಕರಣ ಮಾಡಬೇಕು ಎಂಬುದು ಸ್ಥಳಿಯರ ಆಗ್ರಹವಾಗಿದೆ.
10 ವರ್ಷದಿಂದ ಡಾಂಬರೀಕರಣ ಕಾಣದ ರಸ್ತೆ; ಮಳೆಯಿಂದ ಕೆಸರುಗದ್ದೆಯಂತಾಗಿ ದುಸ್ತರ
You Might Also Like
ತೂಕ ಇಳಿಸಿಕೊಳ್ಳಬೇಕಾ? ಸುಮ್ಮನೆ ಈ ಹಣ್ಣು, ಸೊಪ್ಪಿನ ವಾಸನೆಯನ್ನು ಒಮ್ಮೆ ಉಸಿರಾಡಿದ್ರೆ ಸಾಕು
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿದು ನೋಡಿ; ಆರೋಗ್ಯ ಸಮಸ್ಯೆಗೆ ಸಿಗುತ್ತೆ ಪರಿಹಾರ …
ಬೆಂಗಳೂರು: ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?
ಬೆಂಗಳೂರು: ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…