More

    ಹಲ್ದ್ವಾನಿ ಹಿಂಸಾಚಾರದ ಮಾಸ್ಟರ್​ ಮೈಂಡ್​ ಅರೆಸ್ಟ್​; ಬಂಧಿತರ ಸಂಖ್ಯೆ 81ಕ್ಕೆ ಏರಿಕೆ

    ನವದೆಹಲಿ: ಫೆಬ್ರವರಿ 08ರಂದು ಉತ್ತರಾಖಂಡದ ಹಲ್ದ್ವಾನಿಯಲ್ಲಿ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣದ ಮಾಸ್ಟರ್​ಮೈಂಡ್​ ಅಬ್ದುಲ್ ಮಲಿಕ್​​ನನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿಯನ್ನು ಬಂಧಿಸಿ ಪೊಲೀಸರು ಆತನನ್ನು ಉತ್ತರಾಖಂಡಕ್ಕೆ ಕರೆತರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಭಾನುವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

    ಇದನ್ನೂ ಓದಿ: ಟಿ-20 ವಿಶ್ವಕಪ್​; ಭಾರತ-ಪಾಕ್​ ಹೈವೋಲ್ಟೇಜ್​ ಕದನಕ್ಕೆ ಹೆಚ್ಚಾಯ್ತು ಡಿಮ್ಯಾಂಡ್, ಕಾರಣ ಹೀಗಿದೆ

    ಈ ಕುರಿತು ಪ್ರತಿಕ್ರಿಯಿಸಿರುವ ನೈನಿತಾಲ್​ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಪ್ರಹ್ಲಾದ್ ನಾರಾಯಣ ಮೀನಾ, ಗುಜರಾತ್, ದೆಹಲಿ, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಆರೋಪಿ ಮಲಿಕ್​ ಹಾಗೂ ಆತನ ಪುತ್ರ ಅಬ್ದುಲ್ ಮೊಯಿದ್ ತಲೆಮಾರಿಸಿಕೊಂಡಿದ್ದರು ಎಂದು ತಿಳಿದು ಬಂದಿದೆ. ಇವರಿಬ್ಬರ ಹುಡುಕಾಟಕ್ಕಾಗಿ ಆರು ತಂಡಗಳನ್ನು ರಚಿಸಲಾಗಿತ್ತು.

    ಮಲಿಕ್​ ಪುತ್ರ ತಲೆಮಾರಿಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಮಲಿಕ್​ ಹೊರತುಪಡಿಸಿ ಶನಿವಾರ ಇನ್ನಿಬ್ಬರನ್ನು ಬಂಧಿಸಲಾಗಿದ್ದು, ಈ ಮೂಲಕ ಬಂಧಿತರ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಶೀಘ್ರದಲ್ಲೇ ತಲೆಮಾರಿಸಿಕೊಂಡಿರುವ ಮಲಿಕ್​ ಪುತ್ರನನ್ನು ಬಂಧಿಸಲಾಗುವುದು ಎಂದು ನೈನಿತಾಲ್​ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಪ್ರಹ್ಲಾದ್ ನಾರಾಯಣ ಮೀನಾ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts