More

    ಹಲ್ದ್ವಾನಿ ಹಿಂಸಾಚಾರ; ಪ್ರಕರಣದ ಮಾಸ್ಟರ್​ಮೈಂಡ್​​ ಅರೆಸ್ಟ್​

    ನವದೆಹಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಸಂಭವಿಸಿದ್ದ ಘರ್ಷಣೆಗೆ ಸಂಬಂಧಿಸಿದಂತೆ ಪ್ರಕರಣದ ಮಾಸ್ಟರ್​ಮೈಂಡ್ ಅಬ್ದುಲ್​ ಮಲಿಕ್​​​ನನ್ನು ಪೊಲೀಸರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಂಧಿಸಿದ್ದಾರೆ.

    ಉತ್ತರಾಖಂಡದ ಹಲ್ದ್ವಾನಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮದರಸಾ ತೆರವು ಕಾರ್ಯಾಚರಣೆ ವೇಳೆ ಸಂಭವಿಸಿದ್ದ ಘರ್ಷಣೆಯಲ್ಲಿ ಆರು ಮಂದಿ ಮೃತಪಟ್ಟಿದ್ದರು ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದರು.

    ಇದನ್ನೂ ಓದಿ: ಬಿಜೆಪಿ-RSS ಎಷ್ಟೇ ದ್ವೇಷ ಹರಡಿದರೂ ಭಾರತೀಯರ DNAಯಲ್ಲೇ ಪ್ರೀತಿ ತುಂಬಿದೆ: ರಾಹುಲ್ ಗಾಂಧಿ

    ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರಾಖಂಡ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮದರಸಾ ನಿರ್ಮಿಸಲಾಗಿದ್ದ ಜಾಗ ಮಲಿಕ್​ಗೆ ಸೇರಿತ್ತು ಎಂದು ಹೇಳಲಾಗಿದ್ದು, ಸರ್ಕಾರಕ್ಕೆ ಸೇರಿದ ಜಮೀನನ್ನು ಅಕ್ರಮವಾಗಿ ಖರೀದಿಸಿದ ಎಂದು ತಿಳಿದು ಬಂದಿದೆ. ಘಟನೆ ನಡೆದ ಬಳಿಕ ಆರೋಪಿ ತಲೆಮಾರಿಸಿಕೊಂಡಿದ್ದು, ಉತ್ತರಾಖಂಡ ಹಾಗೂ ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.

    ಹಲ್​ದ್ವಾನಿಯಲ್ಲಿ ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈವರೆಗೆ 60 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನಷ್ಟು ಜನರ ಬಂಧನವಾಗುವ ಸಾಧ್ಯತೆಯಿದೆ. ಬಂಧಿತರ ಪೈಕಿ ಓರ್ವ ಸಮಾಜವಾದಿ ಪಕ್ಷದ ಪ್ರಭಾವಿ ನಾಯಕನ ಸಹೋದರ ಎಂದು ತಿಳಿದು ಬಂದಿದ್ದು, ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ. ಹಲ್​ದ್ವಾನಿ ನಗರದಲ್ಲಿ ಇಂಟರ್​ನೆಟ್​ ಸೇವೆಯನ್ನು ಮರುಸ್ಥಾಪಿಸಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್​ಗಳನ್ನು ಶೇರ್​ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರಾಖಂಡ ವಿಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಎಚ್ಚರಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts