ಹಳಿಯಾಳ ಹಬ್ಬಕ್ಕೆ ಅದ್ದೂರಿ ಚಾಲನೆ

Latest News

ಗ್ರಂಥಾಲಯ ಸ್ಥಿತಿ ದೇವರಿಗೇ ಪ್ರೀತಿ

ಪರಶುರಾಮ ಭಾಸಗಿ ವಿಜಯಪುರ: ಗ್ರಾಮೀಣ ಗ್ರಂಥಾಲಯ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆಯಾಗಿ ದಶಕ ಸಮೀಪಿಸುತ್ತಿದ್ದರೂ ಕಾಮಗಾರಿ ಕೈಗೊಳ್ಳದ ಅಧಿಕಾರಿಗಳ ಕಾರ್ಯವೈಖರಿಗೆ ಓದುಗರು ಹಿಡಿಶಾಪ ಹಾಕುವಂತಾಗಿದೆ !ಹೌದು,...

ಅಲೆ ತಡೆಗೋಡೆ ಕಾಮಗಾರಿಗೆ ವಿರೋಧ

ಕಾರವಾರ: ತಖೋಲ್ ವಾಣಿಜ್ಯ ಬಂದರಿನ ಎರಡನೇ ಹಂತದ ವಿಸ್ತರಣೆಗಾಗಿ ಟ್ಯಾಗೋರ್ ಕಡಲ ತೀರದಿಂದ ಅಲೆ ತಡೆಗೋಡೆ ಕಾಮಗಾರಿ ಆರಂಭವಾಗಿದೆ. ಅದಕ್ಕೆ ಮೀನುಗಾರರು ವಿರೋಧ...

ಪ್ರೇಮಲೋಕ 2ರಲ್ಲಿ ಕ್ರೇಜಿಸ್ಟಾರ್ ಸನ್ಸ್!

ಬೆಂಗಳೂರು: 1987ರಲ್ಲಿ ತೆರೆಕಂಡ ಮ್ಯೂಸಿಕಲ್ ಹಿಟ್ ‘ಪ್ರೇಮಲೋಕ’ ಸಿನಿಮಾ ಬಗ್ಗೆ ಹೆಚ್ಚೇನೂ ಹೇಳುವ ಅವಶ್ಯಕತೆ ಇಲ್ಲ. ಆ ಸಿನಿಮಾ ನಿರ್ವಿುಸಿದ ದಾಖಲೆ ಒಂದೆರಡಲ್ಲ....

ರಫೇಲ್ ರಗಳೆ ಅಂತ್ಯ

ರಫೇಲ್ ಪ್ರಕರಣದಲ್ಲಿ ಸರ್ಕಾರಕ್ಕೆ ನೀಡಿದ್ದ ಕ್ಲೀನ್​ಚಿಟ್ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮರು ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಈ ಬಗ್ಗೆ ಯಾವುದೇ...

ಅನನ್ಯ ಸಾಂಸ್ಕೃತಿಕ ಪ್ರಜ್ಞೆಯ ಕನಕದಾಸ

ಕನಕದಾಸರು 16ನೇ ಶತಮಾನದ ಕರ್ನಾಟಕದಲ್ಲಿ ಆಗಿ ಹೋದ ಭಕ್ತಕವಿ. ಕೀರ್ತನೆ, ನಳಚರಿತೆ, ರಾಮಧಾನ್ಯ ಚರಿತ್ರೆ, ಮೋಹನ ತರಂಗಿಣಿ, ಹರಿಭಕ್ತಿ ಸಾರ ಹಾಗೂ ಅನೇಕ...

ವಿಜಯವಾಣಿ ಸುದ್ದಿಜಾಲ ಹಳಿಯಾಳ

ವಿಆರ್​ಡಿ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಎರಡು ದಿನಗಳ ಹಳಿಯಾಳ ಹಬ್ಬಕ್ಕೆ ಶನಿವಾರ ಅದ್ದೂರಿ ಚಾಲನೆ ನೀಡಲಾಯಿತು.

ಬೆಳಗ್ಗೆ ಪಟ್ಟಣದ ಶ್ರೀ ತುಳಜಾ ಭವಾನಿ ದೇವಸ್ಥಾನದಲ್ಲಿ ಜರುಗಿದ ಧಾರ್ವಿುಕ ಸಮಾರಂಭದಲ್ಲಿ ವಿಆರ್​ಡಿ ಟ್ರಸ್ಟ್ ಮುಖ್ಯ ಧರ್ಮದರ್ಶಿ ರಾಧಾಬಾಯಿ ದೇಶಪಾಂಡೆ ಅವರು ಹಳಿಯಾಳ ಹಬ್ಬದ ಜ್ಯೋತಿ ಪ್ರಜ್ವಲಿಸುವ ಮೂಲಕ ಎರಡು ದಿನಗಳ ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಿದರು.

ತುಳಜಾ ಭವಾನಿ ದೇವಸ್ಥಾನದಲ್ಲಿ ಆಯೋಜಿಸಿದ್ದ ರಂಗೋಲಿ ಪ್ರದರ್ಶನ ಹಾಗೂ ಪುಷ್ಪ ಪ್ರದರ್ಶನವನ್ನು ರಾಧಾಬಾಯಿ ಉದ್ಘಾಟಿಸಿದರು.

ಶಿವಾಜಿ ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗೆ ವಿವಿಧ ಸ್ಪರ್ಧೆಗಳು ಜರುಗಿದವು. ಮಹಿಳೆಯರಿಗಾಗಿ ಮಿಲಾಗ್ರಿಸ್ ಸಮುದಾಯ ಭವನದಲ್ಲಿ ಹೇರ್ ಸ್ಟೈಲ್ ಸ್ಪರ್ಧೆ, ಕಾರ್ವೆಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂಜಾ ಥಾಲಿ ಸ್ಪರ್ಧೆ, ಮಧ್ಯಾಹ್ನ ಮಿಲಾಗ್ರಿಸ್ ಸಮುದಾಯ ಭವನದಲ್ಲಿ ಮೆಹಂದಿ ಸ್ಪರ್ಧೆ ಹಾಗೂ ಕಾರ್ವೆಲ್ ಹಿ.ಪ್ರಾ. ಶಾಲೆಯಲ್ಲಿ ತರಕಾರಿ ಕೆತ್ತನೆ ಸ್ಪರ್ಧೆ ನಡೆದವು.

ಹಳಿಯಾಳ ಹಬ್ಬ ಭಾನುವಾರ ವಿಶೇಷ: ಕಾರ್ಗಿಲ್ ಹಿರೋ ಮಾಜಿ ಯೋಧ ಕ್ಯಾಪ್ಟನ್ ನವೀನ್ ನಾಗಪ್ಪ ಅವರು ಫೆ. 10ರಂದು ಎರಡನೇ ದಿನದ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು. ಬೆಳಗ್ಗೆ ಪಟ್ಟಣದೆಲ್ಲೆಡೆ ‘ಮನೆ ಮನೆಗೆ ರಂಗೋಲಿ’ ಸ್ಪರ್ಧೆ ನಡೆಯಲಿದೆ. ಬೆಳಗ್ಗೆ 10.30ರಿಂದ 12 ಗಂಟೆಯವರೆಗೆ 1ರಿಂದ 4ನೇ ತರಗತಿ ವಿದ್ಯಾರ್ಥಿಗಳಿಗೆ ವಲ್ಲಭಬಾಯಿ ಗಾರ್ಡನ್, 5-7ನೇ ತರಗತಿ ವಿದ್ಯಾರ್ಥಿಗಳಿಗೆ ಮರಡಿ ಗುಡ್ಡ, 8ರಿಂದ 10ನೇ ತರಗತಿ ಮಕ್ಕಳಿಗಾಗಿ ವಿ.ವಿ.ಡಿ.ಎಸ್.ಇ. ಶಾಲಾ ಆವರಣದಲ್ಲಿ ಚಿತ್ರಕಲಾ ಸ್ಪರ್ಧೆ ಜರುಗುವುದು. ಮಹಿಳೆಯರಿಗಾಗಿ ಸ್ಲೋ ಸೈಕಲ್ ರೇಸ್, ಅಂಗನವಾಡಿ ಮಕ್ಕಳಿಗಾಗಿ ಬೈಸಿಕಲ್ ಸ್ಪರ್ಧೆ ಬೆಳಗ್ಗೆ 10ರಿಂದ 11ರವರೆಗೆ ಶ್ರೀ ಶಿವಾಜಿ ಮೈದಾನದಲ್ಲಿ ನೆರವೇರುವುದು.

ಇಂದಿನ ಕಾರ್ಯಕ್ರಮ..:ಫೆ. 10ರಂದು ಸಂಜೆ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ, ವಿವಿಡಿ ಸ್ಕೂಲ್ ಮಕ್ಕಳಿಂದ ನಾಟ್ಯ ವೈಭವ, ಧಾರವಾಹಿ ಕಲಾವಿದರಾದ ವಿಕ್ರಂ ಸೂರಿ ಹಾಗೂ ನಮಿತಾ ರಾವ್ ತಂಡದಿಂದ ನೃತ್ಯ ರೂಪಕ, ಉತ್ತರ ಕನ್ನಡ ಖ್ಯಾತ ಡ್ಯಾನ್ಸ್ ಪಟು ರಜತ್ ನಾಯ್ಕ ಅವರಿಂದ ನೃತ್ಯ, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಖ್ಯಾತಿಯ ಬೆಳಗಾವಿಯ ಎಕ್ಸ್​ಪ್ರೆಸ್ ತಂಡದಿಂದ ನೃತ್ಯ ಪ್ರದರ್ಶನ, ಬಾಲಿವುಡ್ ಗಾಯಕ ಕಿಂಜಲ್ ಚಟರ್ಜಿ ತಂಡದಿಂದ ರಸಮಂಜರಿ ಕಾರ್ಯಕ್ರಮಗಳು ನಡೆಯಲಿವೆ.

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ:ವಿಆರ್​ಡಿ ಟ್ರಸ್ಟ್ ವತಿಯಿಂದ ಹಳಿಯಾಳ ಹಬ್ಬದಲ್ಲಿ ಆಯೋಜಿಸಿದ್ದ ಸಾಂಸ್ಕ್ರತಿಕ ಕಾರ್ಯಕ್ರಮಗಳಿಗೆ ಬೆಳಗಾವಿಯ ಆಶ್ರಯ ಫೌಂಡೇಶನ್ ಸಂಸ್ಥಾಪಕಿ ನಾಗರತ್ನಾ ರಾಮಗೌಡ ಚಾಲನೆ ನೀಡಿದರು. ಟ್ರಸ್ಟ್ ಧರ್ಮದರ್ಶಿ ಪ್ರಸಾದ ದೇಶಪಾಂಡೆ, ರಾಧಾಬಾಯಿ ದೇಶಪಾಂಡೆ ಹಾಗೂ ಖ್ಯಾತ ಚಲನಚಿತ್ರ ಹಾಗೂ ಜನಪದ ಗಾಯಕಿ ಸಂಗೀತಾ ಕಟ್ಟಿ ಉಪಸ್ಥಿತರಿದ್ದರು.

- Advertisement -

Stay connected

278,469FansLike
563FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...