More

    ಹಲ್ಕೆ-ಮುಪ್ಪಾನೆ ಲಾಂಚ್ ಸ್ಥಗಿತ

    ಬ್ಯಾಕೋಡು: ಶರಾವತಿ ಹಿನ್ನೀರಿನಲ್ಲಿ ನೀರಿನ ಹರಿವು ಕಡಿಮೆಯಾದ ಕಾರಣ ತುಮರಿ ಗ್ರಾಪಂ ವ್ಯಾಪ್ತಿಯ ಹಲ್ಕೆ-ಮುಪ್ಪಾನೆ ಮಾರ್ಗದಲ್ಲಿ ಲಾಂಚ್ ಸೇವೆಯನ್ನು ಭಾನುವಾರದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ.

    ನೀರಿನ ಪ್ರಮಾಣ ಕಡಿಮೆಯಾಗಿರುವ ಕಾರಣ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಅಧಿಕಾರಿಗಳು ಮೇ 2ರಂದು ಸ್ಥಳ ಪರಿಶೀಲನೆ ನಡೆಸಿದ್ದರು. ಈ ವೇಳೆ ಮರದ ದಿಮ್ಮಿ ಹಾಗೂ ಮರಳಿನ ದಿಬ್ಬಗಳು ಲಾಂಚ್‌ನ ತಳ ಭಾಗಕ್ಕೆ ತಗುಲುತ್ತಿರುವುದು ಗಮನಕ್ಕೆ ಬಂದಿತ್ತು. ಇದರಿಂದ ಲಾಂಚ್ ತಾಂತ್ರಿಕ ದೋಷಕ್ಕೆ ಒಳಗಾಗುವ ಸಾಧ್ಯತೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಹಾಗೂ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ತಾತ್ಕಾಲಿಕವಾಗಿ ಲಾಂಚ್ ಸೇವೆಯನ್ನು ಸ್ಥಗಿತಗೊಳಿಸಲಿದ್ದೇವೆ ಎಂದು ಜಲ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
    ಹೊಸನಗರ ತಾಲೂಕಿನ ಹಸಿರುಮಕ್ಕಿ ಮಾರ್ಗದ ಲಾಂಚ್ ಸೇವೆ ಸಹ ಸ್ಥಗಿತದ ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ಮೇ 3ರಿಂದ ಲಾಂಚ್‌ನಲ್ಲಿ ಜನರ ಓಡಾಟಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
    ಲಾಂಚ್ ಸ್ಥಗಿತದಿಂದ ತುಮರಿ, ಮಾರಲಗೋಡು, ಬ್ಯಾಕೋಡು ಭಾಗದ ತುರ್ತು ಆರೋಗ್ಯ ಸೇವೆ ಸೇರಿದಂತೆ ಜೋಗ-ಕಾರ್ಗಲ್ ತೆರಳಲು ತೊಂದರೆಯಾಗುತ್ತದೆ. ಹೊಳೆಬಾಗಿಲು ಲಾಂಚ್ ಮಾರ್ಗದಲ್ಲಿ ಜನದಟ್ಟಣೆ ಇರುವ ಕಾರಣ ಸಿಗಂದೂರು ಪ್ರವಾಸಿಗರು ಈ ಸುಗಮ ಮಾರ್ಗದ ಮೊರೆ ಹೋಗಿದ್ದರು. ಸದ್ಯ ಇದು ಕೂಡ ಸ್ಥಗಿತಗೊಂಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts