More

    ರಕ್ತದಾನ ಮಾಡಲು ಎಲ್ಲರೂ ಮುಂದಾಗಿ

    ಹನುಮಸಾಗರ: ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಲಿ ಎಂದು ಹಾಳಕೇರಿ ಅನ್ನದಾನೇಶ್ವರ ಮಠದ ಮುಪ್ಪಿನ ಬಸವಲಿಂಗ ಸ್ವಾಮೀಜಿ ಹೇಳಿದರು.

    ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ

    ಪಟ್ಟಣದ ಅನ್ನದಾನೇಶ್ವರ ಮಠದಲ್ಲಿ ಶುಕ್ರವಾರ ಜಾತ್ರೆ ನಿಮಿತ್ತ ಹಮ್ಮಿಕೊಂಡ ಶಿಬಿರದಲ್ಲಿ ರಕ್ತದಾನ ಮಾಡಿದವರಿಗೆ ಪ್ರಸಂಶನಾ ಪತ್ರ ನೀಡಿ ಮಾತನಾಡಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಎಷ್ಟೇ ಮುಂದುವರೆದರೂ ರಕ್ತವನ್ನು ಸಿದ್ಧಪಡಿಸಲು ಸಾಧ್ಯವಾಗಿಲ್ಲ. ರಕ್ತ ಮಾನವನ ದೇಹದಲ್ಲಿ ಮಾತ್ರ ಉತ್ಪತ್ತಿ ಆಗುತ್ತದೆ. ಹಾಗಾಗಿ ಪ್ರತಿಯೊಬ್ಬರು ರಕ್ತದಾನ ಮಾಡಬೇಕು ಎಂದರು.

    ಇದನ್ನೂ ಓದಿ: ಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ:ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆಂದ ಸಿಎಂ

    ಪೌಷ್ಟಿಕ ಆಹಾರದ ಕೊರತೆ ಹಾಗೂ ಅಪಘಾತಗಳಿಂದಾಗಿ ರಕ್ತಕ್ಕೆ ಬಹಳ ಬೇಡಿಕೆ ಇದೆ. ಅಲ್ಲದೆ ಬಹುತೇಕ ಗರ್ಭಿಣಿಯರು ಹೆರಿಗೆ ಸಮಯದಲ್ಲಿ ರಕ್ತ ಹೀನತೆಯಿಂದ ಬಳಲುತ್ತಿದ್ದಾರೆ. ದೇಶದಲ್ಲಿ ರಕ್ತದ ಅವಶ್ಯಕತೆ ತುಂಬಾ ಇದೆ. ಇದನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು. ಗ್ರಾಪಂ ಅಧ್ಯಕ್ಷ ರುದ್ರಗೌಡ ಗೌಡಪ್ಪನವರ ಮಾತನಾಡಿದರು. ಮುಖಂಡರಾದ ಶರಣಪ್ಪ ಹುಬ್ಬಳ್ಳಿ, ಪ್ರಭು ಬ್ಯಾಳಿ, ಮಹಾಂತಯ್ಯ ಕೋಮರಿ, ಶರಣಪ್ಪ ಮಾನವಿ, ರಮೇಶ ನಿಡಗುಂದಿ, ಈರಣ್ಣ ಹುನಗುಂಡಿ, ಕೃಷ್ಣಮೂರ್ತಿ ಕುಲಕರ್ಣಿ, ಮಹೇಶ ಮಠಪತಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts