More

    ಹಮಾಲಿ ಕಾರ್ಮಿಕರಿಗೆ ನೆರವು ನೀಡಿ

    ರಾಯಬಾಗ: ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದ ಅಸಂಘಟಿತ ಕಾರ್ಮಿಕರಿಗೆ ರಾಜ್ಯ ಸರ್ಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್‌ನಲ್ಲಿ ಹಮಾಲಿ ಕಾರ್ಮಿಕರನ್ನು ಸೇರಿಸಿ ಆರ್ಥಿಕ ನೆರವು ನೀಡಲು ತಾಲೂಕು ಹಮಾಲಿ ಕಾರ್ಮಿಕರ ಸಂಘದ ಪದಾಧಿಕಾರಿಗಳು ಮಂಗಳವಾರ ಶಾಸಕ ಡಿ.ಎಂ. ಐಹೊಳೆ ಹಾಗೂ ತಹಸೀಲ್ದಾರ್ ಚಂದ್ರಕಾಂತ ಭಜಂತ್ರಿ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

    ನಿತ್ಯದ ದುಡಿಮೆಯಿಂದ ಬರುವ ಕೂಲಿಯಿಂದಲೇ ಬದುಕು ಕಟ್ಟಿಕೊಂಡಿರುವ ಶ್ರಮಜೀವಿಗಳಾದ ಹಮಾಲಿ ಕಾರ್ಮಿಕರು ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿದ್ದಾರೆ. ಉದ್ಯೋಗವಿಲ್ಲದೆ, ತುತ್ತು ಅನ್ನಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣಗೊಂಡಿದೆ.

    ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕರಿಗೆ ಮತ್ತು ಸಂಕಷ್ಟದಲ್ಲಿರುವವರಿಗೆ ವಿಶೇಷ ಪ್ಯಾಕೇಜ್ ಘೋಷಿಸಿರುವುದು ಅತ್ಯಂತ ಸ್ವಾಗತಾರ್ಹ. ಅದರಲ್ಲಿ ಅಸಂಘಟಿತ ಕಾರ್ಮಿಕರಲ್ಲಿಯೇ ಅತ್ಯಂತ ಶ್ರಮ ಜೀವಿಗಳಾದ ಹಮಾಲಿ ಕಾರ್ಮಿಕರಿಗೂ ಅನ್ವಯಿಸುವಂತೆ ಪ್ಯಾಕೇಜ್ ಜಾರಿಗೆ ತರಬೇಕು. ಹಮಾಲಿ ಕಾರ್ಮಿಕ ಕುಟುಂಬಗಳಿಗೂ 5000 ರೂ. ಆರ್ಥಿಕ ನೆರವು ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

    ತಾಲೂಕು ಹಮಾಲಿ ಕಾರ್ಮಿಕರ ಸಂಘದ ಅಧ್ಯಕ್ಷ ಕೆಂಚಪ್ಪ ಧರ್ಮಟ್ಟಿ, ಕಿರಣ ಹೊಸಕೋಟೆ, ಮುನ್ನಾ ಮುಲ್ಲಾ, ಸದಾಶಿವ ಕೊರವಿ, ಸಿದ್ರಾಮ ಕೋಳಿ, ರಾಯಪ್ಪ ರಂಗಣ್ಣವರ, ಮಹಾದೇವ ರಂಗಣ್ಣವರ, ವಿಠ್ಠಲ ರಂಗಣ್ಣವರ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts