More

    ಹಮಾಲಿ ಕಾರ್ಮಿಕರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಲಿ

    ಯಲಬುರ್ಗಾ: ವಿಶೇಷ ಪ್ಯಾಕೇಜ್ ಘೋಷಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ಪದಾಧಿಕಾರಿಗಳು ಪಟ್ಟಣದ ತಹಸಿಲ್ ಕಚೇರಿ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿ ಗ್ರೇಡ್2 ತಹಸೀಲ್ದಾರ್ ನಾಗಪ್ಪ ಸಜ್ಜನ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

    ಸಂಘದ ಅಧ್ಯಕ್ಷ ಕಲ್ಲಪ್ಪ ಬಂಗಾಳಿಗಿಡದ ಮಾತನಾಡಿ, ಕರೊನಾ ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಂಡು ಜೀವನ ನಡೆಸಲು ಕಷ್ಟಕರವಾಗಿದೆ. ಎಪಿಎಂಸಿ ಮತ್ತು ಇತರೆ ಕಡೆ ಕೆಲಸ ನಿರ್ವಹಿಸುವ ಹಮಾಲಿ ಹಾಗೂ ಇತರೆ ವಿಭಾಗದ ಕಾರ್ಮಿಕರಿಗೆ ಉದ್ಯೋಗವಿಲ್ಲದೆ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಸರ್ಕಾರ ಕೂಡಲೇ ವಿಶೇಷ ಪ್ಯಾಕೇಜ್ ನೀಡಬೇಕು. ರಾಜ್ಯದಲ್ಲಿರುವ ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಿದ್ದು, ಮುಕ್ತ ಮಾರುಕಟ್ಟೆಗೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಎಪಿಎಂಸಿಯಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಸಾಮಾಜಿಕ ಭದ್ರತೆ ಜತೆಗೆ ವಿವಿಧ ಆರ್ಥಿಕ ನೆರವನ್ನು ಕಾರ್ಮಿಕ ವಲಯಕ್ಕೆ ನೀಡಲು ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿದರು.

    ಸಂಘದ ಕಾರ್ಯದರ್ಶಿ ಹಜುರ್‌ಸಾಬ್ ಕಡಗದ್, ಪದಾಧಿಕಾರಿಗಳಾದ ಆದಪ್ಪ ಲಗಳೂರು, ಸಿದ್ದಪ್ಪ ದಂಡಿನ್, ಸೀನು ನಾಯಕ್, ಬೀರಪ್ಪ ದಂಡಿನ್, ಬಸವರಾಜ ಅಕ್ಕಿ, ಜೀವಪ್ಪ, ದಾದುಸಾಬ್ ನಾಲಬಂದ್, ಬಸವರಾಜ, ದುರುಗಪ್ಪ, ಸಂಗಪ್ಪ ಮಾರುತಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts