More

    ಹಂಪಿ ಉತ್ಸವ ಯಶಸ್ಸಿಗೆ ಶ್ರಮಿಸಿ

    ಹೊಸಪೇಟೆ: ವಿಜಯನಗರ ಗತವೈಭವ ಸಾರುವ ಹಂಪಿ ಉತ್ಸವವನ್ನು ವಿಜೃಂಭಣೆಯಿಂದ ನಡೆಸಲು ಎಲ್ಲ ಸಮಿತಿಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಸೂಚಿಸಿದರು.

    ಹಂಪಿ ಉತ್ಸವ ನಿಮಿತ್ತ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಫೆ.2, 3 ಮತ್ತು 4 ರಂದು ನಡೆಯಲಿರುವ ಹಂಪಿ ಉತ್ಸವವನ್ನು ಅಚ್ಚುಕಟ್ಟಾಗಿ ನಡೆಸಲು ಈಗಾಗಲೇ ಸ್ವಾಗತ ಮತ್ತು ಶಿಷ್ಟಾಚಾರ ಸಮಿತಿ, ಸಾರಿಗೆ, ವಸತಿ, ಆಹಾರ, ಮಾಧ್ಯಮ, ಮೂಲಭೂತ ಸೌಲಭ್ಯ ಮತ್ತು ಕುಡಿವ ನೀರಿನ ವ್ಯವಸ್ಥೆ ಸಮಿತಿ, ಆರೋಗ್ಯ ಮತ್ತು ನೈರ್ಮಲ್ಯೀಕರಣ, ವಸ್ತು ಪ್ರದರ್ಶನ, ವೇದಿಕೆ ಸಮಿತಿ, ಕ್ರೀಡಾ ಸೇರಿದಂತೆ ಸುಮಾರು 20ಕ್ಕೂ ಅಧಿಕ ಸಮಿತಿಗಳನ್ನು ರಚಿಸಿ ಕಾರ್ಯ ಹಂಚಿಕೆ ಮಾಡಲಾಗಿದೆ.

    ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮ, ಕಬಡ್ಡಿ, ಕುಸ್ತಿ, ಸಾಹಸ ಕ್ರೀಡೆ ಮುಂತಾದ ಕ್ರೀಡಾಕೂಟಗಳು, ರಂಗೋಲಿ ಸ್ಪರ್ಧೆ, ಸಾಂಸ್ಕೃತಿಕ ಕಲಾತಂಡಗಳ ಮೆರವಣಿಗೆ, ವಸ್ತುಪ್ರದರ್ಶನ ಸೇರಿದಂತೆ ಕಾರ್ಯಕ್ರಮಗಳನ್ನು ಸಂಬಂಧಿಸಿದ ಅಧಿಕಾರಿಗಳು ಸರಿಯಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.

    ಸ್ಥಳೀಯ ಕಲಾವಿದರಿಗೆ ಅವಕಾಶ: ಸ್ಥಳೀಯ ಕಲಾತಂಡಗಳಿಗೆ ಆದ್ಯತೆ ನೀಡಬೇಕಾಗಿದ್ದು, ಜಿಲ್ಲೆಯಲ್ಲಿರುವ ಹಗಲುವೇಷ, ಬುಡಕಟ್ಟು ಸಮುದಾಯದ ಕಲೆ, ವೀರಗಾಸೆ, ಮಹಿಳಾ ಡೊಳ್ಳು ಕುಣಿತ, ಕೋಲಾಟ, ಲಂಬಾಣಿ, ಹಲಗೆ ವಾದನ ಸೇರಿದಂತೆ ವಿವಿಧ ಸ್ಥಳೀಯ ಕಲೆಗಳನ್ನು ಗುರುತಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕ್ರಮವಹಿಸಬೇಕು.

    ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಕುಡಿವ ನೀರು, ಉಪಾಹಾರದ ವ್ಯವಸ್ಥೆಗೆ ಆಹಾರ ಇಲಾಖೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಎಲ್ಲ ತಾಲೂಕು ಕೇಂದ್ರ ಹಾಗೂ ಸುತ್ತಲಿನ ಗ್ರಾಮಗಳಿಂದ ಸಾರಿಗೆ ಸಂಸ್ಥೆಯಿಂದ ಹಂಪಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಬೇಕು. ಶಾಲಾ ಮಕ್ಕಳ ನೃತ್ಯ, ಚಿತ್ರಕಲಾ, ಪ್ರಬಂಧ ಸ್ಪರ್ಧೆ, ಮೇಳಗಳು ಹಾಗೂ ಇತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಹಂಪಿ ಉತ್ಸವ ಯಶಸ್ಸಿಗೆ ಎಲ್ಲ ಅಧಿಕಾರಿಗಳು ಶ್ರಮಿಸಬೇಕು ಎಂದರು.

    ಜಿಪಂ ಸಿಇಒ ಸದಾಶಿವ ಬಿ.ಪ್ರಭು, ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts