ಉಡುಪಿ: ಮಣಿಪಾಲ ಮಣ್ಣಪಳ್ಳ ಕೆರೆಯನ್ನು ಜಿಲ್ಲಾಡಳಿತ ಖಾಸಗಿ ವ್ಯಕ್ತಿಗಳಿಗೆ ನೀಡಲು ಮುಂದಾಗಿರುವ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆರೆಯ ಸಮಗ್ರ ಅಭಿವೃದ್ಧಿ ಹಾಗೂ ನಿರ್ವಹಣೆಗಾಗಿ ನಗರಸಭೆಗೆ ತಕ್ಷಣ ಹಸ್ತಾಂತರಿಸುವಂತೆ ಶಾಸಕ ಯಶ್‌ಪಾಲ್ ಸುವರ್ಣ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಮಣ್ಣಪಳ್ಳ ಕೆರೆ ಸುವಾರು 120 ಎಕರೆ ವಿಸ್ತೀರ್ಣ ಹೊಂದಿರುವ ನಗರ ಭಾಗದ ಅತೀದೊಡ್ಡ ಕೆರೆಯಾಗಿದ್ದು, ಪ್ರವಾಸೋದ್ಯಮ ಚಟುವಟಿಕೆ, ಉದ್ಯಾನವನ, ವಾಕಿಂಗ್, ಸಾಂಸ್ಕೃತಿಕ ಚಟುವಟಿಕೆ ನಡೆಸಲು ವಿಪುಲ ಅವಕಾಶವಿದೆ. ಸೂಕ್ತ ನಿರ್ವಹಣೆ ಕೊರತೆಯಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಮಣ್ಣಪಳ್ಳ ಕೆರೆಯನ್ನು ಅತ್ಯಂತ ಸುವ್ಯವಸ್ಥಿತವಾಗಿ ಅಭಿವೃದ್ಧಿಗೊಳಿಸಿ ನಿರ್ವಹಣೆ ವಾಡಲು ನಗರಸಭೆ ಬದ್ಧವಾಗಿದ್ದು, ಈಗಾಗಲೇ ನಗರಸಭೆ ಸಾವಾನ್ಯ ಸಭೆಯಲ್ಲಿ ನಿರ್ಣಯಕೈಗೊಂಡು ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಅಭಿವೃದ್ಧಿಗೆ ಮಾಸ್ಟರ್ ಪ್ಲಾೃನ್: ನಗರಸಭೆ ವತಿಯಿಂದ ಮಣ್ಣಪಳ್ಳ ಕೆರೆ ಸಮಗ್ರ ಅಭಿವೃದ್ಧಿ ಮಾಜುವ ನಿಟ್ಟಿನಲ್ಲಿ ಕ್ರೀಡಾ ಚಟುವಟಿಕೆಗೆ ಕ್ರೀಡಾಂಗಣ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಬಯಲು ರಂಗ ಮಂದಿರ, ಜಲ ವಿಹಾರ ಚಟುವಟಿಕೆ, ಕೆರೆ ಹೂಳು ತೆರವು ವಾಡಿ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಳ, ಸುಸಜ್ಜಿತ ವಾಕಿಂಗ್ ಟ್ರ್ಯಾಕ್, ಸೈಕ್ಲಿಂಗ್ ಟ್ರ್ಯಾಕ್, ಸಿಸಿ ಕ್ಯಾಮರಾ ಅಳವಡಿಕೆ, ಶೌಚಾಲಯ, ಭದ್ರತಾ ಸಿಬ್ಬಂದಿ ನಿಯೋಜನೆ ಹಾಗೂ ಬೇಸಿಗೆ ಸಂದರ್ಭದಲ್ಲಿಯೂ ಕೆರೆಯಲ್ಲಿ ನೀರು ಕಲ್ಪಿಸುವ ನಿಟ್ಟಿನಲ್ಲಿ ಶೀಂಬ್ರ ನದಿಯಿಂದ ಪೈಪ್‌ಲೈನ್ ಮೂಲಕ ಕೆರೆಗೆ ನೀರು ತುಂಬಿಸಿ ಪರಿಸರದ ಅಂತರ್ಜಲ ವೃದ್ಧಿಸುವ ಕಾಮಗಾರಿಗಳ ಬಗ್ಗೆ ವಾಸ್ಟರ್ ಪ್ಲಾನ್ ತಯಾರಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲು ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಯಶ್‌ಪಾಲ್ ತಿಳಿಸಿದ್ದಾರೆ.
ಮಣ್ಣಪಳ್ಳ ಕೆರೆಯನ್ನು ಪಿಪಿಪಿ ವಾದರಿಯಲ್ಲಿ ಅಭಿವೃದ್ಧಿ ಪಡಿಸಲು ಖಾಸಗಿ ವ್ಯಕ್ತಿಗಳಿಗೆ ನೀಡಲು ಉದ್ದೇಶಿಸಿರುವ ಬಗ್ಗೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿದ್ದು, ಮಣ್ಣಪಳ್ಳ ಕೆರೆ ಉಳಿಸಿ ಹೋರಾಟ ಸಮಿತಿ ಮೂಲಕ ಉಗ್ರ ಹೋರಾಟ ನಡೆಸುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.