More

    ಕೇಂದ್ರದಿಂದ 22 ಲಕ್ಷ ಅಂಗವಿಕಲರಿಗೆ ಸಲಕರಣೆಗಳ ವಿತರಣೆ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

    ಶಿವಮೊಗ್ಗ:ಅಂಗವಿಕಲರು ಹಾಗೂ ಬುದ್ದಿಮಾಂದ್ಯರ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ವಿಶೇಷ ಆಸಕ್ತಿ ವಹಿಸಿದೆ. ಕಳೆದ ಎಂಟು ವರ್ಷಗಳಲ್ಲಿ 12 ಸಾವಿರ ಶಿಬಿರಗಳಲ್ಲಿ ಅಂಗವಿಕಲರ ನ್ಯೂನತೆಗಳನ್ನು ಪರಿಶೀಲಿಸಿ 22 ಲಕ್ಷ ಅಂಗವಿಕಲರಿಗೆ ಅಗತ್ಯ ಸಲಕರಣೆಗಳನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ ತಿಳಿಸಿದರು.
    ನಗರದಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಏರ್ಪಡಿಸಿದ್ದ ಅಂಗವಿಕಲರಿಗೆ ಸಲಕರಣೆಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಂಗವಿಕಲರ ಸಬಲೀಕರಣಕ್ಕಾಗಿ ಸಲಕರಣೆಗಳನ್ನು ವಿತರಿಸುವ ಯೋಜನೆ ಬಹಳ ಹಿಂದಿನಿಂದಲೂ ಇದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿ ಇದಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಎಂದರು.
    28 ರಾಜ್ಯಗಳ 72 ಸ್ಥಳಗಳಲ್ಲಿ ಅಂಗವಿಕಲರಿಗೆ ಸಲಕರಣೆಗಳನ್ನು ವಿತರಿಸುವ ಕಾರ್ಯಕ್ರಮ ಇಂದು ಏಕಕಾಲದಲ್ಲಿ ನಡೆಯುತ್ತಿದೆ. ದಕ್ಷಿಣ ಭಾರತದಲ್ಲಿ ಕರ್ನಾಟಕದಲ್ಲಿ ಮಾತ್ರ ಅದೂ ಶಿವಮೊಗ್ಗ ಜಿಲ್ಲೆಯಲ್ಲೇ ಈ ಕಾರ್ಯಕ್ರಮ ನಡೆಯುತ್ತಿರುವುದು ವಿಶೇಷವಾಗಿದೆ ಎಂದು ಹೇಳಿದರು.
    ಎಂಟು ವರ್ಷಗಳಲ್ಲಿ 46 ಕೋಟಿ ರೂ. ಮೌಲ್ಯದ ವಿವಿಧ ಸಲಕರಣಗಳನ್ನು ರಾಜ್ಯದ ವಿವಿಧೆಡೆ ಅಂಗವಿಕಲರಿಗೆ ನೀಡಲಾಗಿದೆ. ಕೇಂದ್ರ ಸರ್ಕಾರ ಬದ್ಧತೆಯಿಂದ ಸೇವಾ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಅಂಗವಿಕಲರು ತಮ್ಮ ನ್ಯೂನತೆಗಳಿಗೆ ಹಣೆಬರಹವನ್ನು ಹಳಿಯುತ್ತಾ, ದೇವರನ್ನು ಶಪಿಸುತ್ತಾ ಕುಳಿತರೆ ಪ್ರಯೋಜನವಿಲ್ಲ. ಕೇಂದ್ರದ ಇಂತಹ ಯೋಜನೆಗಳ ಪ್ರಯೋಜನ ಪಡೆಯಬೇಕೆಂದರು.
    ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮುಂತಾದವರಿದ್ದರು. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ 1,020 ಅಂಗವಿಕಲ ಫಲಾನುಭವಿಗಳಿಗೆ ಸುಮಾರು 75 ಲಕ್ಷ ರೂ. ವೆಚ್ಚದಲ್ಲಿ ಒಟ್ಟು 1,746 ಸಲಕರಣೆಗಳನ್ನು ವಿತರಿಸಲಾಯಿತು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts