ವಿದ್ಯಾರ್ಥಿಗೆ ಚಿಕಿತ್ಸಾ ನೆರವು ಹಸ್ತಾಂತರ

Bdk_Medical Aid
Published on

ಮುಳ್ಳೇರಿಯ: ಕಿಡ್ನಿ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಮುಳ್ಳೇರಿಯ ವಿದ್ಯಾಶ್ರೀ ಶಿಕ್ಷಣ ಕೇಂದ್ರ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಶ್ರೇಯಸ್ ಅವರ ಚಿಕಿತ್ಸೆಗೆ ನೆರವು ಹಸ್ತಾಂತರಿಸಲಾಯಿತು.

ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರಿಗೆ 15 ರಿಂದ 20 ಲಕ್ಷ ರೂ. ಖರ್ಚು ಅಂದಾಜಿಸಲಾಗಿದ್ದು, ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಯಿಂದ ಸಂಗ್ರಹಿಸಿದ 77,700 ರೂ. ಮೊತ್ತವನ್ನು ವಿದ್ಯಾರ್ಥಿ ತಂದೆ ಶರತ್ ಪೆರಿಯಡ್ಕ ಅವರಿಗೆ ಶಾಲಾ ಕ್ಷೇಮ ಸಮಿತಿ ಅಧ್ಯಕ್ಷ ಸೂರ್ಯನಾರಾಯಣ ಭಟ್ ಮತ್ತು ಸಮಿತಿ ಕಾರ್ಯದರ್ಶಿ ನಾರಾಯಣ ಶೆಟ್ಟಿ ಹಸ್ತಾಂತರಿಸಿದರು.

ಈ ಸಂದರ್ಭ ಆಡಳಿತ ಸಮಿತಿ ಸದಸ್ಯರು, ಅಧ್ಯಾಪಕವೃಂದ, ಶಿಕ್ಷಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net