ಗುಜ್ಜಾಡಿ ಶಾಲೆಗೆ ಪೀಠೋಪಕರಣ ಹಸ್ತಾಂತರ

gan-6
Published on

ಕುಂದಾಪುರ: ಗುಜ್ಜಾಡಿ ಗ್ರಾಮದ ಮಂಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದತ್ತು ಸ್ವೀಕರಿಸಿದ ಗುತ್ತಿಗೆದಾರ ರಾಜೇಶ ಕಾರಂತ್ ಉಪ್ಪಿನಕುದ್ರು ಅವರ ಶಿಫಾರಸ್ಸಿನ ಮೇರೆಗೆ ಕೆನರಾ ಬ್ಯಾಂಕ್ ಸಿಎಸ್‌ಆರ್ ಚಟುವಟಿಕೆ ಮೂಲಕ ನೀಡಲಾದ ಪೀಠೋಪಕರಣಗಳನ್ನು ಶಾಲೆಗೆ ಶುಕ್ರವಾರ ಹಸ್ತಾಂತರಿಸಲಾಯಿತು.

1,42,600 ರೂ. ಮೊತ್ತದ ಪೀಠೋಪಕರಣಗಳನ್ನು ಕೆನರಾ ಬ್ಯಾಂಕ್ ಮ್ಯಾನೇಜರ್ ವಿನೋದ್, ಸಿಬ್ಬಂದಿ, ಮುಖ್ಯಶಿಕ್ಷಕರು ಮತ್ತು ಎಸ್‌ಡಿಎಂಸಿ ಅಧ್ಯಕ್ಷರಿಗೆ ಹಸ್ತಾಂತರಿಸಿದರು.

ಗುತ್ತಿಗೆದಾರ, ದಾನಿ ರಾಜೇಶ ಕಾರಂತ್ ಉಪ್ಪಿನಕುದ್ರು, ಗುಜ್ಜಾಡಿ ಗ್ರಾಪಂ ಅಧ್ಯಕ್ಷ ತಮ್ಮಯ್ಯ ದೇವಾಡಿಗ, ಎಸ್‌ಡಿಎಂಸಿ ಸದಸ್ಯರು, ದತ್ತು ಸಮಿತಿ ಸದಸ್ಯರು, ಸ್ಪಂದನ ಯುವ ಸಂಘದ ಸದಸ್ಯರು, ಹಳೇ ವಿದ್ಯಾರ್ಥಿ ಸಂಘದ ಸದಸ್ಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಗೀತಾ ಮಯ್ಯ ಸ್ವಾಗತಿಸಿದರು. ಮಧುರ ಕಾರ್ಯಕ್ರಮ ನಿರ್ವಹಿಸಿದರು. ರಾಮ ದೇವಾಡಿಗ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net