ಕೈ ತೊಳೆಯುವ ಘಟಕ ಹಸ್ತಾಂತರ

ky toleyuva ghataka
ಕೈ ತೊಳೆಯುವ ಘಟಕ ಹಸ್ತಾಂತರಿಸಲಾಯಿತು.
Published on

ಕುಂದಾಪುರ: ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗೆ ಕುಂದಾಪುರದ ಇಂಡಿಯನ್ ರೆಡ್ ಕ್ರಾಸ್ ಘಟಕದ ವತಿಯಿಂದ ಅಮೇರಿಕಾ ನಿವಾಸಿ ಡಾ.ದಿನಕರ್ ಶೆಟ್ಟಿ ಅವರು ಪ್ರಾಯೋಜಿಸಿದ ಕೈ ತೊಳೆಯುವ ಘಟಕವನ್ನುಗುರುವಾರ ಹಸ್ತಾಂತರಿಸಲಾಯಿತು.

ಕುಂದಾಪುರ ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಅವರು ಕೈ ತೊಳೆಯುವ ಘಟಕವನ್ನು ಶಾಲೆಗೆ ಹಸ್ತಾಂತರಿಸಿ ಶುಭ ಹಾರೈಸಿದರು. ಉಪಪ್ರಾಂಶುಪಾಲ ಚಂದ್ರಶೇಖರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ರೆಡ್ ಕ್ರಾಸ್ ಘಟಕದ ಸಂಯೋಜಕ ದಿನಕರ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದರು. ಶಾಲೆಯ ಜೂನಿಯರ್ ರೆಡ್ ಕ್ರಾಸ್ ಘಟಕದ ಅಧ್ಯಕ್ಷೆ ರಕ್ಷಾ ಮತ್ತು ಕಾರ್ಯದರ್ಶಿ ಪಂಚಮಿ ಅವರಿಗೆ ಪದ ಪ್ರದಾನ ಮಾಡಲಾಯಿತು. ಇಂಡಿಯನ್ ರೆಡ್ ಕ್ರಾಸ್ ಘಟಕದ ವತಿಯಿಂದ ಶಾಲೆಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆಯನ್ನು ನೀಡಲಾಯಿತು. ರೆಡ್‌ಕ್ರಾಸ್ ಸಂಸ್ಥೆಯ ಖಜಾಂಚಿ ಶಿವರಾಮ ಶೆಟ್ಟಿ, ಶಾಲೆಯ ಶಿಕ್ಷಕರು, ಶಿಕ್ಷೇತರರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲೆಯ ಜ್ಯೂನಿಯರ್ ರೆಡ್ ಕ್ರಾಸ್ ಘಟಕದ ನೋಡಲ್ ಶಿಕ್ಷಕ ಶ್ರೀಕಾಂತ್ ವಿ. ಸ್ವಾಗತಿಸಿದರು. ಅಧ್ಯಾಪಕ ರಮಾನಂದ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಪಂಚಮಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net