

ಬಂಟ್ವಾಳ: ಶಾಲಾ ಆವರಣದಲ್ಲಿ ನಡೆಯುವ ಕಲಿಕಾ ಪೂರಕ ಚಟುವಟಿಕೆಗಳು ಶೈಕ್ಷಣಿಕವಾಗಿ ಬಹು ಮುಖ್ಯಪಾತ್ರವನ್ನು ವಹಿಸುತ್ತವೆ ಎಂದು ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಹೇಳಿದರು.
ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಹಣ್ಣಿನ ಗಿಡ ನೆಟ್ಟು ಶಾಲೆಗೆ ಸ್ಮಾರ್ಟ್ ಟಿವಿ ಕೊಡುಗೆ ನೀಡಿ ಮಾತನಾಡಿದರು.
ಬಂಟ್ವಾಳ ತಾಲೂಕು ಪಿಡಬ್ಲುೃಡಿ ಗುತ್ತಿಗೆದಾರ ಸಂಘದ ಅಧ್ಯಕ್ಷ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ನಿರ್ದೇಶಕ ಜಯಶಂಕರ್ ಕಾನ್ಸ್‌ಲೆ, ಜಿಲ್ಲಾ ಮೂರ್ತೆದಾರರ ಮಹಾಮಂಡಲದ ನಿರ್ದೇಶಕ ಕಿಶೋರ್, ಇಕ್ಬಾಲ್ ನಂದಾವರ ಮೊದಲಾದವರು ಉಪಸ್ಥಿತರಿದ್ದರು.
ಶಿಕ್ಷಕಿ ಸಂಗೀತ ಶರ್ಮ ಪಿ.ಜಿ. ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಇಂದುಶೇಖರ್ ವಂದಿಸಿದರು. ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು.