ಉಚಿತ ಆರೋಗ್ಯ ಸೇವೆಗಾಗಿ ಹೆಸರು ನೋಂದಾಯಿಸಿ

Latest News

ಜನಜಾಗೃತಿ ಅಭಿಯಾನಕ್ಕೆ ಅಭಿನವ ಗವಿಶ್ರೀ ಚಾಲನೆ

ಕಾರಟಗಿ: ಪಟ್ಟಣದಲ್ಲಿ ಜೆಸ್ಕಾಂನಿಂದ ಹಮ್ಮಿಕೊಂಡಿದ್ದ ವಿದ್ಯುತ್ ಅಪಾಯಗಳನ್ನು ತಪ್ಪಿಸುವ ಸುರಕ್ಷತಾ ಜನಜಾಗೃತಿ ಅಭಿಯಾನಕ್ಕೆ ಗವಿಮಠದ ಅಭಿನವ ಗವಿಶ್ರೀಗಳು ಬುಧವಾರ ಚಾಲನೆ ನೀಡಿದರು. ಜೆಸ್ಕಾಂನ ಇಇ...

ಕಲಿಕೆಗೆ ವಯಸ್ಸಿನ ಮಿತಿ ಇಲ್ಲ ಎಂಬುದನ್ನು ಮತ್ತೆ ಪ್ರೂವ್ ಮಾಡಿದ ಕೇರಳದ ಈ ಅಜ್ಜಿಯ ವಯಸ್ಸೆಷ್ಟು ಗೊತ್ತೆ?

ತಿರುವನಂತಪುರಂ: ಓದಿಗೆ ವಯಸ್ಸಿನ ಮಿತಿಯಿಲ್ಲ. ಉತ್ಸಾಹ ಹಾಗೂ ಛಲ ಓದಿಗೆ ಮುಖ್ಯ ಎಂದು ಕೇರಳದ 105 ವರ್ಷ ವಯಸ್ಸಿನ ಅಜ್ಜಿಯೊಬ್ಬರು ನಿರೂಪಿಸಿದ್ದಾರೆ. ಕೇರಳ ಸರ್ಕಾರದ...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ ಮಾತ್ರವಲ್ಲ, ಅವಳೊಂದು ಸಂದೇಶ ಸಾರುತ್ತಿದ್ದಾಳೆ…

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​...

ಮನವಿಗಾರರ ಜತೆ ಪ್ರಧಾನಿ ಮಾತುಕತೆ ಅವಧಿ 20 ನಿಮಿಷ: ಕೃಷಿಕರ ಸಮಸ್ಯೆ ಕೊಂಡೊಯ್ದ ಪವಾರ್ ಜತೆಗೆ 50 ನಿಮಿಷದ ಮಾತುಕತೆ ಯಾಕೆ?

ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದೆ. ಹೀಗಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್​ಸಿಪಿ ನಾಯಕ ಶರದ್ ಪವಾರ್ ನಡುವಿನ...

ಗವಿಸಿದ್ಧೇಶ್ವರ ಶ್ರೀಗಳ ಸದ್ಭಾವನಾ ಯಾತ್ರೆಗೆ ಸ್ವಾಗತ, ಸಹಬಾಳ್ವೆ, ಸಾಮರಸ್ಯ ಸಂದೇಶ ಸಾರಿದ ಶ್ರೀಗಳು

ಸಿಂಧನೂರು: ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ಬುಧವಾರ ಕೊಪ್ಪಳದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ 6ನೇ ದಿನದ ಸದ್ಭಾವನಾ ಯಾತ್ರೆ ನಡೆಸಿ ಸಹಬಾಳ್ವೆ, ಸಾಮರಸ್ಯದ ಸಂದೇಶ...

ಹನಗೋಡು: ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆಯಡಿ ಗ್ರಾಮದ ಎಲ್ಲ ಕುಟುಂಬದ ಸದಸ್ಯರು ನೋಂದಾಯಿಸಿಕೊಳ್ಳುವ ಮೂಲಕ ಉಚಿತ ಆರೋಗ್ಯ ಸೇವೆಯನ್ನು ಪಡೆದುಕೊಳ್ಳಬೇಕು ಎಂದು ಕರಣಕುಪ್ಪೆ ಆಸ್ಪತ್ರೆಯ ವೈದ್ಯೆ ಡಾ.ಲಾವಣ್ಯ ಸಲಹೆ ನೀಡಿದರು.

ಹನಗೋಡು ಹೋಬಳಿಯ ಕರಣಕುಪ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಕಾಮಗೌಡನಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಪೋಷಣ್ ಅಭಿಯಾನ್ ಹಾಗೂ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.

ಈ ಯೋಜನೆಯಿಂದ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಕ್ಕೆ ಸುಮಾರು ಐದು ಲಕ್ಷ ರೂ.ವರೆಗೆ ಅನುಕೂಲವಾಗಲಿದ್ದು, ಹಲವು ಚಿಕಿತ್ಸೆಗಳನ್ನು ಪಡೆಯಬಹುದಾಗಿದೆ. ಜತೆಗೆ ವಿಮೆ ಸೌಲಭ್ಯವಿದ್ದು, ಎಲ್ಲರೂ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳುವಂತೆ ತಿಳಿಸಿದರು.

ಆರೋಗ್ಯ ಸಹಾಯಕ ಎಚ್.ಬಿ.ಹನುಮಂತು ಮಾತನಾಡಿ, ಮಹಿಳೆಯರು ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪೌಷ್ಟಿಕಾಂಶವುಳ್ಳ ಆಹಾರವನ್ನು ಸೇವನೆ ಮಾಡಬೇಕು. ತರಕಾರಿ, ಸೊಪ್ಪು, ಹಣ್ಣು ಸೇರಿದಂತೆ ವಿವಿಧ ಪೋಷಕಾಂಶವಿರುವ ಆಹಾರ ಸೇವನೆ ಮಾಡುವುದರಿಂದ ಆರೋಗ್ಯ ಕಾಪಾಡಿಕೊಳ್ಳುವ ಜತೆಗೆ ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಮಕ್ಕಳು ಹಾಗೂ ತಾಯಂದಿರು ಭಾಗವಹಿಸಿದ್ದರು.

- Advertisement -

Stay connected

278,627FansLike
573FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಬಳಸಿದ ಪರಿಸರಸ್ನೇಹಿ ಕಾರು...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...