‘ಹನುಮದೇವರು ಕನ್ನಡ ಕಲಿಪುಂಗವ ಇಷ್ಟು ಅರ್ಥವಾದರೆ ಸಾಕಲ್ಲವೆ’; ಕಮಲ್ ಹಾಸನ್‌ಗೆ ‘ಜಗ್ಗೇಶ್‌’ ತಿರುಗೇಟು|kamal-haasan

jaggesh
Published on

kamal-haasan | ಕನ್ನಡ ಭಾಷೆಯ ಬಗ್ಗೆ ತಮಿಳು ನಟ, ರಾಜಕಾರಣಿ ಕಮಲ್ ಹಾಸನ್ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಮಲ್​ ಹಾಸನ್​ ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿದ್ದಾರೆ. ಹೇಳಿಕೆ ವಾಪಸ್ ಪಡೆಯದಿದ್ದರೆ 'ಥಗ್ ಲೈಫ್' ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಅವಕಾಶ ಕೊಡುವುದಿಲ್ಲ ಎಂದು ಕಿಡಿಕಾರುತ್ತಿದ್ದಾರೆ.

ಇನ್ನೂ ಕಮಲ್​ ಹಾಸನ್​ರ ಈ ಹೇಳಿಕೆಗೆ ರಾಜ್ಯಸಭಾ ಸದಸ್ಯ ಜಗ್ಗೇಶ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ 'X' ಖಾತೆಯಲ್ಲಿ ಪೋಸ್ಟ್ ಮಾಡಿರುವ ನಟ ಜಗ್ಗೇಶ್, ಕಮಲ್ ಹಾಸನ್ ಹೇಳಿಕೆಯನ್ನು ವಿರೋಧಿಸಿದ್ದಾರೆ.

ಕನ್ನಡದ ಬಗ್ಗೆ ಕಮಲ್ ಹಾಸನ್ ನೀಡಿರುವ ಹೇಳಿಕೆಗೆ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಕನ್ನಡಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಜತೆಗೆ ಸಾಮಾಜಿಕ ಜಾಲತಾಣಗಳಲ್ಲೂ ತೀವ್ರ ವಿರೋಧ ವ್ಯಕ್ತವಾಗಿದೆ.

ಕಲೆಗೆ ಜಾತಿ ಇಲ್ಲ, ಎಲ್ಲಾ ಭಾಷೆಯ ಕಲಾವಿದರು ಶಾರದಾಸುತರು ಒಪ್ಪುತ್ತೇವೆ. ಆ ನಿಟ್ಟಿನಲ್ಲಿ ಕಮಲ್ ಹಾಸನ್ ರವರನ್ನು ಮೆಚ್ಚಿದ್ದೇವೆ. ಅಂದಮಾತ್ರಕ್ಕೆ ಕನ್ನಡ ತಮಿಳಿಂದ ಹುಟ್ಟಿದೆ ಎಂದ ಅವರ ಮಾತು ಒಪ್ಪಲ್ಲಾ! ಕನ್ನಡಕ್ಕೆ ಎರಡೂವರೆ ಸಾವಿರ ವರ್ಷದ ಇತಿಹಾಸವಿದೆ. ಅಷ್ಟೇಕೆ ಹನುಮದೇವರು ಕನ್ನಡ ಕಲಿಪುಂಗವ, ಅವನ ಕಾಲ ರಾಮಾಯಣ. ಇಷ್ಟು ಅರ್ಥವಾದರೆ ಸಾಕಲ್ಲವೆ ಸಾರ್" ಎಂದು ಟ್ವೀಟ್ ಮಾಡಿದ್ದಾರೆ.

ಕಮಲ್ ಹಾಸನ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, 'ಕನ್ನಡಕ್ಕೆ ದೀರ್ಘ ಕಾಲದ ಇತಿಹಾಸವಿದೆ, ಪಾಪ ಕಮಲ್ ಹಾಸನ್ ಅವರಿಗೆ ಗೊತ್ತಿಲ್ಲ' ಎಂದು ತಿರುಗೇಟು ಕೊಟ್ಟಿದ್ದಾರೆ.

'ಕನ್ನಡ ಹುಟ್ಟಿದ್ದು ತಮಿಳು ಭಾಷೆಯಿಂದ' ಎನ್ನುವ ನಿರರ್ಥಕ ಮಾತುಗಳಿಂದ ಕಮಲ್ ಹಾಸನ್ ಅವರು ಆರೂವರೆ ಕೋಟಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಉಂಟು ಮಾಡಿದ್ದಾರೆ' ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆ‌ರ್.ಅಶೋಕ ಆಕ್ರೋಶ ಹೊರಹಾಕಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net