More

    ಅನುದಾನ ಹಂಚಿಕೆಯಲ್ಲಿ ತಾರತಮ್ಯ: ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಆರೋಪ

    ಹನುಮಸಾಗರ: ಸ್ವಾತಂತ್ರ್ಯ ಬಂದಾಗ ದೇಶದಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿ ಹದಗೆಟ್ಟಿತ್ತು. ಕಾಂಗ್ರೆಸ್ ಅದನ್ನು ಸುಧಾರಿಸಿ ಭಾರತವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಕಾರ್ಯ ಮಾಡಿತು ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಹೇಳಿದರು.

    ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ಪಟ್ಟಣದ ಎಪಿಎಂಸಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ವಕ್ಕನದುರ್ಗಾ ಗ್ರಾಮದಿಂದ ಹನುಮಸಾಗರದವರೆಗೆ ಸ್ವಾತಂತ್ರ್ಯದ ನಡಿಗೆ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಪಂಚವಾರ್ಷಿಕ ಯೋಜನೆ ಜಾರಿಗೊಳಿಸಿ ಹಂತಹಂತವಾಗಿ ಆಹಾರ, ಶಿಕ್ಷಣ, ನೀರಾವರಿ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ ಮಾಡಿದರು. ಆದರೆ, ಇಂದಿನ ಬಿಜೆಪಿ ಆಡಳಿತದಲ್ಲಿ ದಿನ ಬಳಕೆ ವಸ್ತುಗಳ ಬೆಲೆ ಹೆಚ್ಚುತ್ತಿದೆ. ಅದಕ್ಕೆ ಜಿಎಸ್‌ಟಿ ಹಾಕಲಾಗುತ್ತಿದೆ. ರಾಜ್ಯ ಸರ್ಕಾರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದ್ದು, ಬಿಜೆಪಿ ಶಾಸಕರಿಂದ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡಿ, ಇತರ ಪಕ್ಷದ ಜನಪ್ರತಿನಿಧಿಗಳ ಕ್ಷೇತ್ರಕ್ಕೆ ಕಡಿಮೆ ಅನುದಾನ ನೀಡುತ್ತಿದೆ. ಇಂತಹ ಪರಿಸ್ಥಿತಿಯಲ್ಲಿಯೂ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವುದಾಗಿ ತಿಳಿಸಿದರು.

    ಕೆಪಿಸಿಸಿ ಮಾಧ್ಯಮ ವಕ್ತಾರ ಲಾಡ್ಲೆ ಮಷಾಕ್ ದೋಟಿಹಾಳ ಮಾತನಾಡಿ, ಇತಿಹಾಸ ತಿರುಚುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಜಾತಿ, ಮತ, ಧರ್ಮದ ಹೆಸರಿನಲ್ಲಿ ಸಾಮರಸ್ಯ ಹಾಳು ಮಾಡುತ್ತಿದೆ. ಸುಳ್ಳು ಹೇಳಿ ಜನರ ದಾರಿ ತಪ್ಪಿಸಲಾಗುತ್ತಿದೆ ಎಂದು ದೂರಿದರು. ಮುಖಂಡರಾದ ಶೇಖರಗೌಡ ಮಾಲಿಪಾಟೀಲ್, ಶ್ಯಾಮರಾವ್ ಕುಲಕರ್ಣಿ, ಮಹಾಂತೇಶ ಅಗಸಿಮುಂದಿನ, ವಿಶ್ವನಾಥ ಕನ್ನೂರ, ಕೆ.ಬಿ.ತಳವಾರ, ಸಂಗಯ್ಯ ವಸ್ತ್ರದ, ಸೂಚಪ್ಪ ದೇವರಮನಿ, ರವೀನಂದ, ಗವಿಸಿದ್ದಪ್ಪ, ದೊಡ್ಡಯ್ಯ ಗೆದ್ದಡಕಿ, ಮೈನುದ್ದೀನ್ ಖಾಜಿ, ಸುರೇಶ ಕುಂಟನಗೌಡ್ರ, ಬಸಮ್ಮ ಹಿರೇಮಠ, ಲಕ್ಷ್ಮೀ ಬಸವರಾಜ, ರೇಣುಕಾ ಪುರದ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts