More

    ಜೆಜೆಎಂ ಕಾಮಗಾರಿ ಮುಗಿಸದಿದ್ದರೆ ಹುನುಮಸಾಗರ ಬಂದ್: ಗ್ರಾಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರ ಎಚ್ಚರಿಕೆ

    ಹನುಮಸಾಗರ: ಗ್ರಾಮದಲ್ಲಿ ಮಂದಗತಿಯಲ್ಲಿ ನಡೆಯುತ್ತಿರುವ ಜೆಜೆಎಂ ಪೈಪ್‌ಲೈನ್ ಅಳವಡಿಕೆ ಕಾಮಗಾರಿಯನ್ನು 15 ದಿನಗಳಲ್ಲಿ ಪೂರ್ಣಗೊಳಿಸದಿದ್ದರೆ ಹನುಮಸಾಗರ ಬಂದ್‌ಗೆ ಕರೆ ನೀಡಲಾಗುವುದು ಎಂದು ಗ್ರಾಪಂ ಸದಸ್ಯರು ಎಚ್ಚರಿಕೆ ನೀಡಿದರು.

    ಗ್ರಾಪಂ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ಸಾಮಾನ್ಯ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸದಸ್ಯರು, ಜಿಲ್ಲೆಯಲ್ಲಿ ವಿವಿಧ ತಾಲೂಕುಗಳಿಗೆ ಶುದ್ಧ ಕುಡಿವ ನೀರು ಒದಗಿಸುವ ಬಹುಗ್ರಾಮ ಕುಡಿವ ನೀರಿನ ಯೋಜನೆಯ ಘಟಕವನ್ನು ಗ್ರಾಮದ ಪಕ್ಕದಲ್ಲಿಯೇ ನಿರ್ಮಿಸಲಾಗಿದೆ. ಈಗಾಗಲೇ ಬೇರೆ ತಾಲೂಕಿನ ಹಳ್ಳಿಗಳಿಗೆ ನೀರು ಪೂರೈಕೆಯಾಗುತ್ತಿದ್ದು, ನಮ್ಮ ಗ್ರಾಮಕ್ಕೆ ಆಗುತ್ತಿಲ್ಲ. ಕಾರಣ ಪೈಪ್‌ಲೈನ್ ಅಳವಡಿಕೆ ಕಾಮಗಾರಿ ಎರಡೂ ವರ್ಷಗಳಿಂದ ಮಂದಗತಿಯಲ್ಲಿ ನಡೆಯುತ್ತಿರುವುದು. ಈ ಬಗ್ಗೆ ಹಲವು ಬಾರಿ ಅಧಿಕಾರಿ, ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹರಿಹಾಯ್ದರು.

    ಗ್ರಾಮದಲ್ಲಿ ಜೆಜೆಎಂ ಕಾಮಗಾರಿಗೆ ಅಗೆದಿರುವ ರಸ್ತೆ ಸರಿಪಡಿಸಿಲ್ಲ. ಇದರಿಂದ ವೃದ್ಧರು, ಮಕ್ಕಳು, ಸ್ತ್ರೀಯರು, ದ್ವಿಚಕ್ರ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು.15 ದಿನಗಳಲ್ಲಿ ಕಾಮಗಾರಿ ಪೂರ್ಣಗೊಳಿಸದಿದ್ದರೆ,ಪಕ್ಷಾತೀತವಾಗಿ ಎಲ್ಲರೂ ಸೇರಿ ಹನುಮಸಾಗರ ಬಂದ್ ಮಾಡಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಇಲ್ಲಿನ 14 ವಾರ್ಡ್‌ಗಳ ಸದಸ್ಯರು ಒಕ್ಕೊರಲಿನಿಂದ ಎಚ್ಚರಿಕೆ ನೀಡಿದರು. ಪಿಡಿಒ ಶರಣಮ್ಮ ಕುರನಾಳ ಮಾತನಾಡಿ, ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿರುವ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಆದರೆ, ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು.

    ಅರ್ಧಕ್ಕೆ ನಿಂತಿರುವ ನರೇಗಾ ಕಾಮಗಾರಿಯ ಪೂರ್ಣಗೊಳಿಸುವುದು, ಹಳೆಯ ಬಸ್ ನಿಲ್ದಾಣದಲ್ಲಿರುವ ಗ್ರಾಪಂನ 4 ಮಳಿಗೆಗಳಿಗೆ ಶೇ.10 ಬಾಡಿಗೆ ದರ ಹೆಚ್ಚಳ ಮಾಡುವುದು. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 25 ಮನೆಗಳು ಮಂಜೂರಾಗಿದ್ದು ಹಂಚಿಕೆ ಮಾಡುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಲೆಕ್ಕ ಸಹಾಯಕ ವೀರನಗೌಡ ಪಾಟೀಲ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts