More

    ಕನ್ನಡ ಭಾಷೆ ಬೆಳವಣಿಗೆಗೆ ಶ್ರಮಿಸಿ: ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಸಲಹೆ

    ಹನುಮಸಾಗರ: ಜನರು ಆಂಗ್ಲ ಭಾಷೆ ವ್ಯಾಮೋಹ ಹೆಚ್ಚುತ್ತಿರುವುದರಿಂದ ಕನ್ನಡ ಭಾಷೆ ಮೇಲಿನ ಅಭಿಮಾನ ಕಡಿಮೆಯಾಗುತ್ತಿದೆ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಪುರ ಹೇಳಿದರು. ಹನುಮನಾಳದಲ್ಲಿ ಕಸಾಪ ಹೋಬಳಿಕ ಘಟಕದ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಬುಧವಾರ ಉದ್ಘಾಟಿಸಿ ಮಾತನಾಡಿದರು. ಮಾತೃಭಾಷೆಯನ್ನು ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಕನ್ನಡ ಭಾಷೆ ವೃದ್ಧಿಗಾಗಿ ಕಸಾಪ ವಿವಿಧ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ಕನ್ನಡ ನೆಲ, ಜಲ, ಭಾಷೆ ವಿಷಯ ಬಂದಾಗ ಎಲ್ಲರೂ ಒಂದಾಗಿ ಶ್ರಮಿಸಬೇಕು. ಬೇರೆ ಭಾಷೆ ಕಲಿಯಬೇಕು.

    ಆದರೆ, ಕನ್ನಡವನ್ನು ನಿರ್ಲಕ್ಷಿಸಬಾರದು ಎಂದರು. ನಿವೃತ್ತ ಪ್ರಾಚಾರ್ಯ ಕಳಕಪ್ಪ ಬಿ. ತಳವಾರ, ಲೇಖಕ ಕಿಶನರಾವ್ ಕುಲಕರ್ಣಿ, ಗ್ರಾಪಂ ಅಧ್ಯಕ್ಷೆ ಶಾಂತಮ್ಮ ಲೆಂಕಪ್ಪ ಶಾಂತಗೇರಿ, ಕಸಾಪ ತಾಲೂಕಾಧ್ಯಕ್ಷ ವೀರೇಶ ಬಂಗಾರಶೆಟ್ಟರ, ಹನುಮಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲ್ಲಪ್ಪ ತಳವಾರ, ಮುಖಂಡರಾದ ಮಲ್ಲಯ್ಯ ಕೋಮಾರಿ, ನಬೀಸಾಬ್ ಕುಷ್ಟಗಿ, ಭೀಮಣ್ಣ ತಳವಾರ, ಕೆ.ಆರ್.ಕುಲಕರ್ಣಿ, ಹೋಬಳಿ ಘಟಕದ ಅಧ್ಯಕ್ಷ ರವೀಂದ್ರ ಕಾಟವಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts